- Kannada News Photo gallery Cricket photos IPL 2022: Virender Sehwag names 3 players Mumbai Indians should retain
IPL 2022: ಮುಂಬೈ ಇಂಡಿಯನ್ಸ್ ಈ ಮೂವರನ್ನು ಉಳಿಸಿಕೊಳ್ಳುವುದು ಖಚಿತ ಎಂದ ಸೆಹ್ವಾಗ್
Virender Sehwag: ಸ್ಟಾರ್ ಆಟಗಾರರನ್ನೇ ಹೊಂದಿರುವ ಮುಂಬೈ ಇಂಡಿಯನ್ಸ್ ಯಾರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ತಂಡದಲ್ಲಿರುವ ಬಹುತೇಕ ಆಟಗಾರರು ಅತ್ಯುತ್ತಮ ಪ್ಲೇಯರ್ಸ್.
Updated on: Nov 28, 2021 | 7:24 PM

ಐಪಿಎಲ್ ಮೆಗಾ ಹರಾಜಿನ ಸಿದ್ದತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಎಲ್ಲಾ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಿದೆ. ನವೆಂಬರ್ 30 ರೊಳಗೆ ಹಳೆಯ 8 ಫ್ರಾಂಚೈಸಿಗಳು ಅಂತಿಮ ಪಟ್ಟಿಯನ್ನು ಸಿದ್ದಪಡಿಸಬೇಕಿದ್ದು, ಹೀಗಾಗಿ ಯಾವ ತಂಡ ಯಾರನ್ನು ಉಳಿಸಿಕೊಳ್ಳಲಿದೆ ಎಂಬ ಚರ್ಚೆಗಳು ಜೋರಾಗಿದೆ.

ಅದರಲ್ಲೂ ಸ್ಟಾರ್ ಆಟಗಾರರನ್ನೇ ಹೊಂದಿರುವ ಮುಂಬೈ ಇಂಡಿಯನ್ಸ್ ಯಾರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ತಂಡದಲ್ಲಿರುವ ಬಹುತೇಕ ಆಟಗಾರರು ಅತ್ಯುತ್ತಮ ಪ್ಲೇಯರ್ಸ್. ಹೀಗಾಗಿ ಯಾರನ್ನು ಉಳಿಸಿ ಯಾರನ್ನು ಬಿಡುಗಡೆ ಮಾಡಲಿದೆ ಎಂಬ ಕುತೂಹಲ ಎಲ್ಲರಲಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಉತ್ತರಿಸಿದ್ದಾರೆ.

ಸೆಹ್ವಾಗ್ ಅವರು ಮುಂಬೈ ಇಂಡಿಯನ್ಸ್ ತಂಡ ಉಳಿಸಿಕೊಳ್ಳಲಿರುವ ಮೂವರು ಭಾರತೀಯ ಆಟಗಾರರು ಯಾರೆಂದು ತಿಳಿಸಿದ್ದಾರೆ. ಅದರಂತೆ ಮುಂಬೈ ತಂಡದ ಮೊದಲ ಆಯ್ಕೆ ನಾಯಕ ರೋಹಿತ್ ಶರ್ಮಾ.

ಹಾಗೆಯೇ 2ನೇ ಆಟಗಾರನಾಗಿ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಮುಂಬೈ ಇಂಡಿಯನ್ಸ್ ಉಳಿಸಿಕೊಳ್ಳಲಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

ಇನ್ನು ಮೂರನೇ ಆಟಗಾರನಾಗಿ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ. ಕಿಶನ್ ಇನ್ನೂ ಕೂಡ ಯುವ ಕ್ರಿಕೆಟಿಗ. ಹೀಗಾಗಿ ಮುಂಬೈ ಕಿಶನ್ರನ್ನು ಉಳಿಸಿಕೊಳ್ಳಲಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

ಇದಾಗ್ಯೂ ಹಾರ್ದಿಕ್ ಪಾಂಡ್ಯರನ್ನು ಉಳಿಸಿಕೊಳ್ಳುವುದಿಲ್ಲ ಎಂದಿರುವ ಸೆಹ್ವಾಗ್, ಪ್ರಸ್ತುತ ಸನ್ನಿವೇಶದಲ್ಲಿ ಪಾಂಡ್ಯ ಬೌಲಿಂಗ್ ಮಾಡುತ್ತಿಲ್ಲ. ಹೀಗಾಗಿ ಅವರನ್ನು ಮುಂಬೈ ಆಲ್ರೌಂಡರ್ ಆಗಿ ತಂಡದಲ್ಲಿ ರಿಟೈನ್ ಮಾಡಿಕೊಳ್ಳುವುದಿಲ್ಲ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.




