- TV9 Kannada Kannada News Photos Cricket Photos Ipl 2022: youngest to score a half-century for MI in IPL
Tilak Varma: ಇಶಾನ್ ಕಿಶನ್ ದಾಖಲೆ ಮುರಿದ ಮುಂಬೈ ಇಂಡಿಯನ್ಸ್ ಯುವ ದಾಂಡಿಗ
Ipl 2022: ಆರಂಭಿಕ ಆಟಗಾರ ಇಶಾನ್ ಕಿಶನ್ 43 ಎಸೆತಗಳಲ್ಲಿ 54 ರನ್ ಬಾರಿಸಿದರೆ, ಯುವ ಆಟಗಾರ ತಿಲಕ್ ವರ್ಮಾ ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ್ದರು.
Updated on: Apr 02, 2022 | 7:55 PM

ಐಪಿಎಲ್ನ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ರಾಜಸ್ಥಾನ್ ರಾಯಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ರಾಜಸ್ಥಾನ್ ರಾಯಲ್ಸ್ ನೀಡಿದ 194 ರನ್ಗಳ ಟಾರ್ಗೆಟ್ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 170 ರನ್ಗಳಿಸಲಷ್ಟೇ ಶಕ್ತರಾದರು. ಇದರೊಮದಿಗೆ ಮುಂಬೈ ಇಂಡಿಯನ್ಸ್ 23 ರನ್ಗಳಿಂದ ಸೋಲೊಪ್ಪಿಕೊಂಡಿತು.

ಇದಾಗ್ಯೂ ಮುಂಬೈ ಇಂಡಿಯನ್ಸ್ ಪರ ಇಬ್ಬರು ಆಟಗಾರರು ಅರ್ಧಶತಕ ಬಾರಿಸಿ ಮಿಂಚಿದ್ದರು. ಆರಂಭಿಕ ಆಟಗಾರ ಇಶಾನ್ ಕಿಶನ್ 43 ಎಸೆತಗಳಲ್ಲಿ 54 ರನ್ ಬಾರಿಸಿದರೆ, ಯುವ ಆಟಗಾರ ತಿಲಕ್ ವರ್ಮಾ ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ್ದರು.

ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ತಿಲಕ್ ವರ್ಮಾ 33 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿಯೊಂದಿಗೆ 61 ರನ್ ಸಿಡಿಸಿದ್ದರು. ಈ ಅರ್ಧಶತಕದೊಂದಿಗೆ ತಿಲಕ್ ವರ್ಮಾ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು.

ಹೌದು, ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ಮುಂಬೈ ಇಂಡಿಯನ್ಸ್ ಪರ ಹಾಫ್ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ತಿಲಕ್ ವರ್ಮಾ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಇಶಾನ್ ಕಿಶನ್ ಹೆಸರಿನಲ್ಲಿತ್ತು.

ಇಶಾನ್ ಕಿಶನ್ 2018 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಅರ್ಧಶತಕ ಬಾರಿಸುವ ಮೂಲಕ ಈ ದಾಖಲೆ ಬರೆದಿದ್ದರು. 19 ವರ್ಷ 278 ದಿನಗಳಾಗಿದ್ದ ವೇಳೆ ಕಿಶನ್ ಈ ಸಾಧನೆ ಮಾಡಿದ್ದರು. ಇದೀಗ 19 ವರ್ಷ 145 ದಿನಗಳಾಗಿರುವ ತಿಲಕ್ ವರ್ಮಾ ಅರ್ಧಶತಕ ಬಾರಿಸುವ ಮೂಲಕ ಮುಂಬೈ ಇಂಡಿಯನ್ಸ್ ಪರ ಹಾಫ್ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

TV9 Kannada
Read More