Tilak Varma: ಇಶಾನ್ ಕಿಶನ್ ದಾಖಲೆ ಮುರಿದ ಮುಂಬೈ ಇಂಡಿಯನ್ಸ್ ಯುವ ದಾಂಡಿಗ

| Updated By: ಝಾಹಿರ್ ಯೂಸುಫ್

Updated on: Apr 02, 2022 | 7:55 PM

Ipl 2022: ಆರಂಭಿಕ ಆಟಗಾರ ಇಶಾನ್ ಕಿಶನ್ 43 ಎಸೆತಗಳಲ್ಲಿ 54 ರನ್ ಬಾರಿಸಿದರೆ, ಯುವ ಆಟಗಾರ ತಿಲಕ್ ವರ್ಮಾ ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ್ದರು.

1 / 5
 ಐಪಿಎಲ್​ನ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ರಾಜಸ್ಥಾನ್ ರಾಯಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ರಾಜಸ್ಥಾನ್ ರಾಯಲ್ಸ್ ನೀಡಿದ 194 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 170 ರನ್​​ಗಳಿಸಲಷ್ಟೇ ಶಕ್ತರಾದರು. ಇದರೊಮದಿಗೆ ಮುಂಬೈ ಇಂಡಿಯನ್ಸ್ 23 ರನ್​ಗಳಿಂದ ಸೋಲೊಪ್ಪಿಕೊಂಡಿತು.

2 / 5
ಇದಾಗ್ಯೂ ಮುಂಬೈ ಇಂಡಿಯನ್ಸ್​ ಪರ ಇಬ್ಬರು ಆಟಗಾರರು ಅರ್ಧಶತಕ ಬಾರಿಸಿ ಮಿಂಚಿದ್ದರು. ಆರಂಭಿಕ ಆಟಗಾರ ಇಶಾನ್ ಕಿಶನ್ 43 ಎಸೆತಗಳಲ್ಲಿ 54 ರನ್ ಬಾರಿಸಿದರೆ, ಯುವ ಆಟಗಾರ ತಿಲಕ್ ವರ್ಮಾ ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ್ದರು.

3 / 5
 ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ತಿಲಕ್ ವರ್ಮಾ 33 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿಯೊಂದಿಗೆ 61 ರನ್ ಸಿಡಿಸಿದ್ದರು. ಈ ಅರ್ಧಶತಕದೊಂದಿಗೆ ತಿಲಕ್ ವರ್ಮಾ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು.

4 / 5
ಹೌದು, ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ಮುಂಬೈ ಇಂಡಿಯನ್ಸ್ ಪರ ಹಾಫ್ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ತಿಲಕ್ ವರ್ಮಾ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಇಶಾನ್ ಕಿಶನ್ ಹೆಸರಿನಲ್ಲಿತ್ತು.

5 / 5
ಇಶಾನ್ ಕಿಶನ್ 2018 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಅರ್ಧಶತಕ ಬಾರಿಸುವ ಮೂಲಕ ಈ ದಾಖಲೆ ಬರೆದಿದ್ದರು.  19 ವರ್ಷ 278 ದಿನಗಳಾಗಿದ್ದ ವೇಳೆ ಕಿಶನ್ ಈ ಸಾಧನೆ ಮಾಡಿದ್ದರು. ಇದೀಗ 19 ವರ್ಷ 145 ದಿನಗಳಾಗಿರುವ ತಿಲಕ್ ವರ್ಮಾ ಅರ್ಧಶತಕ ಬಾರಿಸುವ ಮೂಲಕ ಮುಂಬೈ ಇಂಡಿಯನ್ಸ್ ಪರ ಹಾಫ್ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.