IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್ಸಿಬಿ ನಾಯಕ
TV9 Web | Updated By: ಝಾಹಿರ್ ಯೂಸುಫ್
Updated on:
Dec 02, 2021 | 10:08 PM
IPL 2022 Mega Auction: ವಿರಾಟ್ ಕೊಹ್ಲಿ ಕಳೆದ ಸೀಸನ್ ಬಳಿಕ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ 2022ರ ಸೀಸನ್ ಮೂಲಕ ಆರ್ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಆರ್ಸಿಬಿ ತಂಡ ಮೂವರು ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಮುಂದಿನ ಸೀಸನ್ ಐಪಿಎಲ್ನಲ್ಲಿ ಆರ್ಸಿಬಿ ಪರ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಆಡುವುದು ಖಚಿತ. ಆದರೆ ಆರ್ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದೇ ಈಗ ದೊಡ್ಡ ಪ್ರಶ್ನೆ.
2 / 5
Daniel Vettori
3 / 5
ಡೇನಿಯಲ್ ವೆಟ್ಟೋರಿ ಪ್ರಕಾರ, ಪ್ರತಿ ತಂಡಗಳು ನಾಯಕನಾಗುವ ಆಟಗಾರರನ್ನೇ ಉಳಿಸಿಕೊಂಡಿದೆ. ಹೀಗಾಗಿ ಉಳಿಸಿಕೊಂಡಿರುವ ಆಟಗಾರರಿಂದಲೇ ಆರ್ಸಿಬಿ ಕೂಡ ನಾಯಕನನ್ನು ಆಯ್ಕೆ ಮಾಡಲಿದೆ. ಅದರಂತೆ ಆರ್ಸಿಬಿ ತಂಡದ ಆಯ್ಕೆ ಗ್ಲೆನ್ ಮ್ಯಾಕ್ಸ್ವೆಲ್ ಆಗಲಿದ್ದಾರೆ.
4 / 5
ಏಕೆಂದರೆ ಮ್ಯಾಕ್ಸ್ವೆಲ್, ಬಿಗ್ ಬ್ಯಾಷ್ ಲೀಗ್ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ಸಿಬಿ ನಾಯಕರ ಪಟ್ಟಿಯಲ್ಲಿ ಮ್ಯಾಕ್ಸಿ ಹೆಸರು ಮುಂಚೂಣಿಯಲ್ಲಿದೆ. ಹಾಗಾಗಿ ವಿರಾಟ್ ಕೊಹ್ಲಿಯ ಉತ್ತರಾಧಿಕಾರಿಯಾಗಿ ಆಸೀಸ್ ಆಟಗಾರನಿಗೆ ನಾಯಕತ್ವ ಸಿಗಲಿದೆ ಎಂದು ವೆಟ್ಟೋರಿ ಭವಿಷ್ಯ ನುಡಿದಿದ್ದಾರೆ.
5 / 5
ಇನ್ನು ಕಳೆದ ಸೀಸನ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅದ್ಭುತ ಪ್ರದರ್ಶನ ನೀಡಿದ್ದು, ಭವಿಷ್ಯದ ದೃಷ್ಟಿಯಿಂದ ಆರ್ಸಿಬಿ ಮ್ಯಾಕ್ಸ್ವೆಲ್ ಅವರಿಗೆ ನಾಯಕತ್ವದ ಜವಾಬ್ದಾರಿ ನೀಡುವ ಸಾಧ್ಯತೆಯಿದೆ ಎಂದು ವೆಟ್ಟೋರಿ ತಿಳಿಸಿದ್ದಾರೆ.
Published On - 7:36 pm, Thu, 2 December 21