AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 GT vs CSK: ಮೊದಲ ಪಂದ್ಯದಲ್ಲೇ 6 ದಾಖಲೆಗಳು ನಿರ್ಮಾಣ

IPL 2023 Kannada: ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲೇ ಒಟ್ಟು 6 ದಾಖಲೆಗಳು ನಿರ್ಮಾಣವಾಗಿವೆ. ಈ ದಾಖಲೆಗಳಾವುವು, ಯಾರಿಗೆ ಹೆಸರಿಗೆ ಹೊಸ ರೆಕಾರ್ಡ್ ಸೇರ್ಪಡೆಯಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

TV9 Web
| Edited By: |

Updated on: Apr 01, 2023 | 2:40 PM

Share
IPL 2023 GT vs CSK: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಚಾಲನೆ ಸಿಕ್ಕಿದೆ. ಅಹಮದಾಬಾದ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ಗೆ 5 ವಿಕೆಟ್​ಗಳಿಂದ ಸೋಲುಣಿಸಿ ಗುಜರಾತ್ ಟೈಟಾನ್ಸ್ ತಂಡವು ಶುಭಾರಂಭ ಮಾಡಿದೆ. ಭರ್ಜರಿ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರಿಂದ 6 ದಾಖಲೆಗಳು ನಿರ್ಮಾಣವಾಗಿರುವುದು ವಿಶೇಷ.

1 / 8
ಹಾಗಿದ್ರೆ ಐಪಿಎಲ್ ಸೀಸನ್​ 16 ರ ಮೊದಲ ಪಂದ್ಯದಲ್ಲಿ ನಿರ್ಮಾಣವಾದಂತಹ ದಾಖಲೆಗಳು ಯಾವುವು ಎಂದು ನೋಡೋಣ...

2 / 8
1- ವೇಗದ ಅರ್ಧಶತಕ: ಈ ಪಂದ್ಯದಲ್ಲಿ ಸಿಎಸ್​ಕೆ ತಂಡದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ 50 ಎಸೆತಗಳಲ್ಲಿ 92 ರನ್ ಬಾರಿಸಿದ್ದರು. ವಿಶೇಷ ಎಂದರೆ ಯುವ ಬ್ಯಾಟರ್​ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದರೊಂದಿಗೆ ಸಿಎಸ್​ಕೆ ಪರ  ಅತ್ಯಂತ ವೇಗವಾಗಿ ಅರ್ಧಶತಕ ಬಾರಿಸಿದ ಮೂರನೇ ಆರಂಭಿಕ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಮ್ಯಾಥ್ಯೂ ಹೇಡನ್ ಹಾಗೂ ಡ್ವೇನ್ ಸ್ಮಿತ್ ಸಿಎಸ್​ಕೆ ಪರ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.

3 / 8
2- 100 ವಿಕೆಟ್​: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಶಮಿ ಐಪಿಎಲ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಅಲ್ಲದೆ ಐಪಿಎಲ್​ನಲ್ಲಿ ಈ ಮೈಲುಗಲ್ಲು ದಾಟಿದ 19ನೇ ಬೌಲರ್ ಎನಿಸಿಕೊಂಡಿದ್ದಾರೆ.

4 / 8
3- 200 ಸಿಕ್ಸ್​: ಸಿಎಸ್​ಕೆ ಪರ 200 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಈ ಪಂದ್ಯದ ಮೂಲಕ ಮಹೇಂದ್ರ ಸಿಂಗ್ ಧೋನಿ ನಿರ್ಮಿಸಿದ್ದಾರೆ. ಜೋಶ್ ಲಿಟಲ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಧೋನಿ ಈ ಸಾಧನೆ ಮಾಡಿದರು. ಧೋನಿಯನ್ನು ಹೊರತುಪಡಿಸಿ ಮತ್ಯಾವುದೇ ಬ್ಯಾಟರ್ ಸಿಎಸ್​ಕೆ ಪರ 200 ಸಿಕ್ಸ್ ಬಾರಿಸಿಲ್ಲ ಎಂಬುದು ವಿಶೇಷ.

5 / 8
4- ಹಿರಿಯ ವಿಕೆಟ್​ ಕೀಪರ್: ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಐಪಿಎಲ್​ ಇತಿಹಾಸದಲ್ಲಿ ವಿಕೆಟ್ ಕೀಪಿಂಗ್ ಮಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಆ್ಯಡಂ ಗಿಲ್​ಕ್ರಿಸ್ಟ್​​ ಹೆಸರಿನಲ್ಲಿತ್ತು. ಗಿಲ್‌ಕ್ರಿಸ್ಟ್ ಅವರನ್ನು 41 ವರ್ಷ ಮತ್ತು 185 ದಿನಗಳಿರುವಾಗ ಪಂಜಾಬ್ ಕಿಂಗ್ಸ್ ಪರ ಕೊನೆಯ ಪಂದ್ಯವಾಡಿದ್ದರು. ಇದೀಗ 41 ವರ್ಷ 267 ದಿನಗಳ ವಯಸ್ಸಿನಲ್ಲಿ ವಿಕೆಟ್ ಕೀಪಿಂಗ್ ಮಾಡುವ ಮೂಲಕ ಧೋನಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

6 / 8
5- ಮೊದಲ ವಿಕೆಟ್: ಐಪಿಎಲ್​ ಇತಿಹಾಸದಲ್ಲಿ ಮೊದಲ ವಿಕೆಟ್​ ಐರ್ಲೆಂಡ್ ಬೌಲರ್ ಎಂಬ ಹೆಗ್ಗಳಿಕೆಗೆ ಜೋಶ್ ಲಿಟಲ್ ಪಾತ್ರರರಾಗಿದ್ದಾರೆ. ಸಿಎಸ್​ಕೆ ತಂಡದ ಅಂಬಾಟಿ ರಾಯುಡು ವಿಕೆಟ್ ಕಬಳಿಸುವ ಮೂಲಕ ಲಿಟಲ್ ಈ ಸಾಧನೆ ಮಾಡಿದ್ದಾರೆ.

7 / 8
6- ಹಿರಿಯ ನಾಯಕ: ಗುಜರಾತ್ ಟೈಟಾನ್ಸ್​ ವಿರುದ್ಧ ಪಂದ್ಯದಲ್ಲಿ ಟಾಸ್​ಗೆ ಆಗಮಿಸುವ ಮೂಲಕ ಐಪಿಎಲ್​ನಲ್ಲಿ ಕಣಕ್ಕಿಳಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ಧೋನಿ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಐಪಿಎಲ್​ನ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಶೇನ್ ವಾರ್ನ್​ ಹೆಸರಿನಲ್ಲಿತ್ತು. 2011 ರಲ್ಲಿ ವಾರ್ನ್​ ತಮ್ಮ 41ನೇ ವಯಸ್ಸಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಈ ದಾಖಲೆಯನ್ನು ಧೋನಿ (41 ವರ್ಷ 267 ದಿನಗಳು) ಮುರಿದಿದ್ದಾರೆ.

8 / 8
TV9 Web
TV9 Web

TV9 Kannada

Read More
Follow Us
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್

ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ

‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ

ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್

ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!

ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!

ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ

ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ

ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ

ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು