IPL 2023: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್ ಬದಲಿ ಆಟಗಾರ ಆಯ್ಕೆ
IPL 2023 Kannada: ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್.
Updated on: Mar 29, 2023 | 3:23 PM

IPL 2023: ವರ್ಣರಂಜಿತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳು ಚುಟುಕು ಕ್ರಿಕೆಟ್ ಕದನಕ್ಕೆ ಸಜ್ಜಾಗಿದೆ. ಇದಾಗ್ಯೂ ಕೆಲ ತಂಡಗಳ ಆಟಗಾರರು ಐಪಿಎಲ್ನಿಂದ ಹೊರಗುಳಿದಿದ್ದು, ಹೀಗಾಗಿ ಬದಲಿ ಆಟಗಾರರ ಪ್ರಕ್ರಿಯೆ ಚಾಲ್ತಿಯಲ್ಲಿದೆ.

ಕಳೆದ ವರ್ಷ ನಡೆದ ರಸ್ತೆ ಅಪಘಾತದಲ್ಲಿ ರಿಷಭ್ ಪಂತ್ ಗಾಯಗೊಂಡಿದ್ದರು. ಡಿಸೆಂಬರ್ 30 ರಂದು ದೆಹಲಿಯಿಂದ ಉತ್ತರ ಖಂಡದ ಹರಿದ್ವಾರದಲ್ಲಿರುವ ರೂರ್ಕಿಯಲ್ಲಿರುವ ತನ್ನ ಮನೆಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿತ್ತು. ಬಳಿಕ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು.

ರಿಷಭ್ ಪಂತ್ ಅವರ ಬದಲಿಗೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು 20 ವರ್ಷದ ಯುವ ಆಟಗಾರ ಅಭಿಷೇಕ್ ಪೊರೆಲ್ರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಪಶ್ಚಿಮ ಬಂಗಾಳದ ಯುವ ಕ್ರಿಕೆಟಿಗನಾಗಿರುವ ಪೊರೆಲ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್.

ಇದುವರೆಗೆ 16 ಪ್ರಥಮ ದರ್ಜೆ ಪಂದ್ಯಗಳು, ಮೂರು ಲಿಸ್ಟ್ ಎ ಪಂದ್ಯಗಳು ಮತ್ತು ಮೂರು ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಎಡಗೈ ದಾಂಡಿಗನಾಗಿರುವ ಅಭಿಷೇಕ್ ಪೊರೆಲ್ 30.21 ಸರಾಸರಿಯಲ್ಲಿ 695 ರನ್ ಕಲೆಹಾಕಿದ್ದಾರೆ.

ಇದೀಗ ಚೊಚ್ಚಲ ಬಾರಿಗೆ ಐಪಿಎಲ್ನಲ್ಲಿ ಅವಕಾಶ ಪಡೆದಿರುವ ಅಭಿಷೇಕ್ ಪೊರೆಲ್ ಪ್ಲೇಯಿಂಗ್ ಇಲೆವೆನ್ನ ಭಾಗವಾಗಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಡುವ ಬಳಗಕ್ಕೆ ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್ಮನ್ನ ಅಗತ್ಯತೆಯಿದೆ.

ಅತ್ತ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಸರ್ಫರಾಝ್ ಖಾನ್ ಕೂಡ ಇದ್ದು, ಅವರೇ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದರೆ ಅಭಿಷೇಕ್ ಪೊರೆಲ್ ಕೆಲ ಪಂದ್ಯಗಳವರೆಗೆ ಬೆಂಚ್ ಕಾಯಬೇಕಾಗಿ ಬರಬಹುದು.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಲಕ್ನೋನ ಎಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಶುಭಾರಂಭ ಮಾಡುವ ಇರಾದೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬಳಗ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಕುಲದೀಪ್ ಯಾದವ್, ವಿಕಿ ಓಸ್ಟ್ವಾಲ್, ರಿಲೀ ರೊಸೊ, ಮನೀಶ್ ಪಾಂಡೆ, ಮುಖೇಶ್ ಕುಮಾರ್, ಇಶಾಂತ್ ಶರ್ಮಾ , ಫಿಲ್ ಸಾಲ್ಟ್, ಅಭಿಷೇಕ್ ಪೊರೆಲ್.



















