AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಆರ್​ಸಿಬಿಗೆ ಸಿಹಿ- ಕಹಿ ಸುದ್ದಿ; ಆಲ್​ರೌಂಡರ್ ಇನ್, ವೇಗದ ಬೌಲರ್ ಅನುಮಾನ..!

IPL 2023: ಆಸೀಸ್ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದ ಚೇತರಿಸಿಕೊಂಡಿದ್ದು ಆರ್​ಸಿಬಿಗೆ ಕೊಂಚ ನಿರಾಳ ತಂದಿತ್ತು. ಆದರೆ ಇದೀಗ ಜೋಶ್ ಹ್ಯಾಜಲ್‌ವುಡ್ ಗಾಯಕೊಂಡಿರುವುದು ಆರ್​ಸಿಬಿ ಬಳಗದ ತಲೆನೋವು ಹೆಚ್ಚಿಸಿದೆ.

ಪೃಥ್ವಿಶಂಕರ
|

Updated on:Feb 23, 2023 | 1:40 PM

Share
ಇಂಡಿಯನ್ ಪ್ರೀಮಿಯರ್ ಲೀಗ್‌ನ 16 ನೇ ಸೀಸನ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಆಸೀಸ್ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದ ಚೇತರಿಸಿಕೊಂಡಿದ್ದು ಆರ್​ಸಿಬಿಗೆ ಕೊಂಚ ನಿರಾಳ ತಂದಿತ್ತು. ಆದರೆ ಇದೀಗ ಜೋಶ್ ಹ್ಯಾಜಲ್‌ವುಡ್ ಗಾಯಕೊಂಡಿರುವುದು ಆರ್​ಸಿಬಿ ಬಳಗದ ತಲೆನೋವು ಹೆಚ್ಚಿಸಿದೆ.

1 / 6
ಜೋಶ್ ಹ್ಯಾಜಲ್‌ವುಡ್ ಈಗಾಗಲೇ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಇಂಜುರಿಯಿಂದಾಗಿ ಹ್ಯಾಜಲ್‌ವುಡ್ ಐಪಿಎಲ್‌ನಲ್ಲಿ ಕೆಲವು ಪಂದ್ಯಗಳನ್ನು ಆಡದಿರುವ ಸಾಧ್ಯತೆಗಳಿವೆ.

2 / 6
ಈಗಾಗಲೇ ಜೋಶ್ ಹ್ಯಾಜಲ್‌ವುಡ್ ಭಾರತ ವಿರುದ್ಧದ ಉಳಿದ ಎರಡು ಟೆಸ್ಟ್‌ಗಳಿಂದ ಹೊರಗುಳಿಯಲಿದ್ದಾರೆ. ಚಿಕಿತ್ಸೆಗಾಗಿ ಮನೆಗೆ ಮರಳಿದ್ದಾರೆ. ಆರ್‌ಸಿಬಿಯ ಮೊದಲ ಪಂದ್ಯ ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿದ್ದು, ಈ ಪಂದ್ಯದಲ್ಲಿ ಹ್ಯಾಜಲ್‌ವುಡ್ ಆಡುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

3 / 6
ಮಾರ್ಚ್ 17 ರಿಂದ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿ ಆರಂಭವಾಗಲಿದ್ದು, ಆ ಸರಣಿಗೂ ಹ್ಯಾಜಲ್​ವುಡ್ ಅಲಭ್ಯರಾಗಿದ್ದಾರೆ. ಇದು ಕೂಡ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹೊಡೆತವಾಗಿದೆ.

4 / 6
ಆದರೆ ಈ ನಡುವೆ ಆರ್‌ಸಿಬಿಗೆ ಸಂತಸದ ಸುದ್ದಿ ಸಿಕ್ಕಿದ್ದು, ಭಾರತ ವಿರುದ್ಧದ ಏಕದಿನ ಸರಣಿಗೆ ಆಸೀಸ್ ತಂಡಕ್ಕೆ ಮ್ಯಾಕ್ಸ್​ವೆಲ್ ಆಯ್ಕೆಯಾಗಿದ್ದಾರೆ. ಈ ಮೂರು ಏಕದಿನ ಪಂದ್ಯಗಳಲ್ಲಿ ಮ್ಯಾಕ್ಸ್‌ವೆಲ್ ಫಿಟ್ ಆಗಿರುವುದು ಸಾಭೀತಾದರೆ, ಅವರು ಐಪಿಎಲ್‌ನ ಪೂರ್ಣ ಸೀಸನ್​ ಆಡುವುದು ಖಚಿತ.

5 / 6
16ನೇ ಸೀಸನ್ ಮಾರ್ಚ್ 31ರಿಂದ ಆರಂಭವಾಗಲಿದ್ದು,  ಆರ್​ಸಿಬಿ ತನ್ನ ಆರಂಭಿಕ ಪಂದ್ಯವನ್ನು ಮುಂಬೈ ವಿರುದ್ಧ ಆಡಲಿದೆ. ಪಂದ್ಯ ಏಪ್ರಿಲ್ 2 ರಂದು, ರಾತ್ರಿ 7:30 ಕ್ಕೆ ಆರಂಭವಾಗಲಿದೆ.

6 / 6

Published On - 1:37 pm, Thu, 23 February 23

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು

ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ

ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ

ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್

ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ

ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ

ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು

ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ

ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ

ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್