CSK ಬ್ಯಾಟಿಂಗ್ ವೇಳೆ ಚೆಂಡು ಬದಲಿಸಿದ ಅಂಪೈರ್: ಆಕ್ರೋಶ ವ್ಯಕ್ತಪಡಿಸಿದ ಅಶ್ವಿನ್..!

IPL 2023 Kannada: 176 ರನ್​ಗಳ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ವಿರೋಚಿತ ಹೋರಾಟ ನಡೆಸಿದರೂ, ಅಂತಿಮವಾಗಿ 3 ರನ್​ಗಳಿಂದ ಸೋಲೊಪ್ಪಿಕೊಂಡಿತು.

TV9 Web
| Updated By: ಝಾಹಿರ್ ಯೂಸುಫ್

Updated on: Apr 13, 2023 | 7:23 PM

IPL 2023: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವು ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್​ ಕಲೆಹಾಕಿತ್ತು.

1 / 6
176 ರನ್​ಗಳ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ವಿರೋಚಿತ ಹೋರಾಟ ನಡೆಸಿದರೂ, ಅಂತಿಮವಾಗಿ 3 ರನ್​ಗಳಿಂದ ಸೋಲೊಪ್ಪಿಕೊಂಡಿತು. ಆದರೆ ಸಿಎಸ್​ಕೆ ಬ್ಯಾಟಿಂಗ್ ವೇಳೆ ಅಂಪೈರ್ ತೆಗೆದುಕೊಂಡ ನಿರ್ಧಾರವೊಂದು ಇದೀಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

2 / 6
ಈ ಪಂದ್ಯದ ಬಳಿಕ ಮಾತನಾಡಿದ ಅಶ್ವಿನ್, ಸಿಎಸ್​​ಕೆ ತಂಡದ ಬ್ಯಾಟಿಂಗ್ ವೇಳೆ ಅಂಪೈರ್ ತಾವಾಗಿಯೇ ಚೆಂಡನ್ನು ಬದಲಿಸಿದರು. ಇಬ್ಬನಿಯ ಕಾರಣ ನೀಡಿ ಫೀಲ್ಡ್ ಅಂಪೈರ್ ಈ ನಿರ್ಧಾರ ತೆಗೆದುಕೊಂಡಿದ್ದರು. ನಾವು ಯಾವುದೇ ಮನವಿ ಸಲ್ಲಿಸದಿದ್ದರೂ ಅಂಪೈರ್ ಇಂತಹ ನಿರ್ಧಾರ ತೆಗೆದುಕೊಂಡಿದ್ದು ನನಗೆ ಆಶ್ಚರ್ಯವನ್ನುಂಟು ಮಾಡಿದೆ ಎಂದು ಅಶ್ವಿನ್ ಹೇಳಿದ್ದಾರೆ.

3 / 6
ಈ ಬಾರಿಯ ಐಪಿಎಲ್​ನ ಕೆಲ ನಿರ್ಧಾರಗಳು ನನ್ನನ್ನು ಸ್ವಲ್ಪ ಮಟ್ಟಿಗೆ ಗೊಂದಲಕ್ಕೀಡು ಮಾಡಿದೆ. ಇಬ್ಬನಿಯ ಕಾರಣ ಅಂಪೈರ್ ತಾವಾಗಿಯೇ ಚೆಂಡು ಬದಲಿಸಿರುವುದು ಹಿಂದೆಂದೂ ನಡೆದಿಲ್ಲ. ಅಂಪೈರ್ ಅವರ ಈ ನಿರ್ಧಾರ ನನಗೆ ಅಚ್ಚರಿ ಮೂಡಿಸಿತು ಎಂದು ಅಶ್ವಿನ್ ತಿಳಿಸಿದರು.

4 / 6
ಅಂಪೈರ್ ಇಂತಹದೊಂದು ತೀರ್ಮಾನ ತೆಗೆದುಕೊಳ್ಳುತ್ತಿರುವುದು ಇದೇ ಮೊದಲು ಅನಿಸುತ್ತದೆ. ಈ ಬಗ್ಗೆ ನಾನು ಅಂಪೈರ್ ಜೊತೆ ಕೇಳಿದಾಗ, ಅಂಪೈರ್ ತೀರ್ಮಾನ ತೆಗೆದುಕೊಳ್ಳಬಹುದು ಎಂದು ತಿಳಿಸಿದ್ದರು. ಆದರೆ ಇದು ಕೇವಲ ಈ ಪಂದ್ಯಕ್ಕೆ ಮಾತ್ರ ಸೀಮಿತವಾಗದಿರಲಿ. ಪ್ರತಿ ಪಂದ್ಯದಲ್ಲೂ ಇದು ಮುಂದುವರೆಯುವುದನ್ನು ಆಶಿಸುತ್ತೇನೆ ಎಂದರು.

5 / 6
ಇನ್ನು ಈ ಪಂದ್ಯದಲ್ಲಿ ಆಲ್​ರೌಂಡರ್​ ಪ್ರದರ್ಶನ ನೀಡಿದ ಅಶ್ವಿನ್, ಬ್ಯಾಟಿಂಗ್​ನಲ್ಲಿ 30 ರನ್​ ಕಲೆಹಾಕಿದರೆ, ಬೌಲಿಂಗ್​ನಲ್ಲಿ 4 ಓವರ್​ನಲ್ಲಿ 25 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

6 / 6
Follow us
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ