ಐಪಿಎಲ್ ಸೀಸನ್ 16 ಹರಾಜಿನ ಮೊದಲ ಸುತ್ತಿನಲ್ಲಿ ಇಂಗ್ಲೆಂಡ್ ಸ್ಟಾರ್ ಆಟಗಾರ ಹ್ಯಾರಿ ಬ್ರೂಕ್ ಕೋಟಿ ಮೊತ್ತಕ್ಕೆ ಹರಾಜಾಗಿದ್ದಾರೆ. 1.50 ಕೋಟಿ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ 23 ವರ್ಷದ ಯುವ ಸ್ಪೋಟಕ ದಾಂಡಿಗನನ್ನು ಸನ್ರೈಸರ್ಸ್ ಹೈದರಾಬಾದ್ ತಂಡವು ಬರೋಬ್ಬರಿ 13.25 ಕೋಟಿ ರೂ. ನೀಡಿ ಖರೀದಿಸಿದೆ.
ಇಂಗ್ಲೆಂಡ್ ಪರ ಕೇವಲ 17 ಟಿ20 ಇನಿಂಗ್ಸ್ ಆಡಿರುವ ಬ್ರೂಕ್ ಒಂದು ಅರ್ಧಶತಕದೊಂದಿಗೆ ಒಟ್ಟು 372 ರನ್ ಕಲೆಹಾಕಿದ್ದಾರೆ. ಈ ವೇಳೆ 15 ಸಿಕ್ಸ್ ಹಾಗೂ 30 ಫೋರ್ಗಳನ್ನೂ ಕೂಡ ಬಾರಿಸಿದ್ದಾರೆ.
ಸದ್ಯ ಭರ್ಜರಿ ಫಾರ್ಮ್ನಲ್ಲಿರುವ ಬ್ರೂಕ್ ಇತ್ತೀಚೆಗೆ ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದ್ದರು. ಇಂಗ್ಲೆಂಡ್ ಪರ ಕೇವಲ 4 ಟೆಸ್ಟ್ ಪಂದ್ಯಗಳಲ್ಲಿ 6 ಇನಿಂಗ್ಸ್ ಆಡಿರುವ 23 ರ ಹರೆಯದ ಬಲಗೈ ಬ್ಯಾಟರ್ ಕೇವಲ 521 ಎಸೆತಗಳನ್ನು ಎದುರಿಸಿ 480 ರನ್ ಬಾರಿಸಿದ್ದಾರೆ. ಈ ವೇಳೆ 12 ಸಿಕ್ಸ್ ಹಾಗೂ 55 ಫೋರ್ ಬಾರಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿನ ಹ್ಯಾರಿ ಬ್ರೂಕ್ ಅವರ ಸಿಡಿಲಬ್ಬರದ ಪರಿಣಾಮ ಇದೀಗ ಐಪಿಎಲ್ನಲ್ಲಿ ಚೊಚ್ಚಲ ಅವಕಾಶ ಪಡೆದಿದ್ದಾರೆ. ಈ ಮೂಲಕ ಇಂಗ್ಲೆಂಡ್ನ ಮತ್ತೊಬ್ಬ ಆಟಗಾರ ಐಪಿಎಲ್ಗೆ ಎಂಟ್ರಿ ಕೊಟ್ಟಂತಾಗಿದೆ.
ಎಸ್ಆರ್ಹೆಚ್ ತಂಡ: ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ, ಹ್ಯಾರಿ ಬ್ರೂಕ್
Published On - 2:57 pm, Fri, 23 December 22