IPL 2023: ಈ ವಿಚಾರದಲ್ಲಿ ಎಚ್ಚರವಿರಲಿ; ಐಪಿಎಲ್ ಫ್ರಾಂಚೈಸಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಬಿಸಿಸಿಐ!

IPL 2023: ಮುಂಬರುವ ಐಸಿಸಿ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬಂದಿರುವ ಬಿಸಿಸಿಐ, ಐಪಿಎಲ್​ನಲ್ಲಿ ಆಡುತ್ತಿರುವ ಟೀಂ ಇಂಡಿಯಾ ಬೌಲರ್‌ಗಳು ನೆಟ್ಸ್‌ನಲ್ಲಿ ಅಭ್ಯಾಸದ ಸಮಯದಲ್ಲಿ ಹೆಚ್ಚು ಬೌಲ್ ಮಾಡದಂತೆ ಆದೇಶ ಹೊರಡಿಸಿದೆ.

ಪೃಥ್ವಿಶಂಕರ
|

Updated on:Mar 29, 2023 | 2:24 PM

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಸೀಸನ್ ಪ್ರಾರಂಭವಾಗಲು 2 ದಿನ ಮಾತ್ರ ಉಳಿದಿದೆ. ಈಗಿನಿಂದಲೇ ಅಭಿಮಾನಿಗಳ ಝೇಂಕಾರ ಶುರುವಾಗಿದೆ. ಏತನ್ಮಧ್ಯೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೀಸನ್ ಆರಂಭಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳಿಗೆ ಒಂದು ವಿಚಾರದಲ್ಲಿ ಖಡಕ್ ಎಚ್ಚರಿಕೆ ನೀಡಿದೆ.

1 / 6
ಮುಂಬರುವ ಐಸಿಸಿ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬಂದಿರುವ ಬಿಸಿಸಿಐ, ಐಪಿಎಲ್​ನಲ್ಲಿ ಆಡುತ್ತಿರುವ ಟೀಂ ಇಂಡಿಯಾ ಬೌಲರ್‌ಗಳು (ಬಿಸಿಸಿಐನ ವಾರ್ಷಿಕ ಒಪ್ಪಂದಕ್ಕೊಳಪಟ್ಟವರು) ನೆಟ್ಸ್‌ನಲ್ಲಿ ಅಭ್ಯಾಸದ ಸಮಯದಲ್ಲಿ ಹೆಚ್ಚು ಬೌಲ್ ಮಾಡದಂತೆ ಆದೇಶ ಹೊರಡಿಸಿದೆ.

2 / 6
ಈ ಬಾರಿಯ ಐಪಿಎಲ್ ಅಂತ್ಯದ ನಂತರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಪಂದ್ಯವನ್ನು ಆಡಲು ಭಾರತ ತಂಡವು ಇಂಗ್ಲೆಂಡ್‌ಗೆ ತೆರಳಲಿದೆ. ಹೀಗಾಗಿ ಆ ಸಮಯದಲ್ಲಿ ಭಾರತೀಯ ಬೌಲರ್‌ಗಳ ಸಂಪೂರ್ಣ ಫಿಟ್‌ನೆಸ್ ಬಹಳ ಮುಖ್ಯ. ಇದನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಎಲ್ಲಾ ಫ್ರಾಂಚೈಸಿಗಳಿಗೆ ಈ ಸೂಚನೆ ನೀಡಿದೆ.

3 / 6
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಫಿಸಿಯೋ ನಿತಿನ್ ಪಟೇಲ್ ಮತ್ತು ಭಾರತದ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿ ಅವರು ಮೀಟಿಂಗ್​ನಲ್ಲಿ ಈ ಸೂಚನೆಗಳ ಬಗ್ಗೆ ಎಲ್ಲಾ ಫ್ರಾಂಚೈಸಿಗಳ ಕೋಚ್‌ಗಳು ಮತ್ತು ಫಿಸಿಯೋಥೆರಪಿಸ್ಟ್‌ಗಳಿಗೆ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

4 / 6
ಅಲ್ಲದೆ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಈಗಾಗಲೇ 20 ಆಟಗಾರರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಅವರ ಕೆಲಸದ ಹೊರೆಗೆ ಸಂಬಂಧಿಸಿದಂತೆ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದ್ದು, ಐಪಿಎಲ್ ಸಮಯದಲ್ಲಿ ವೇಗಿಗಳು ಯಾವುದೇ ಗಂಭೀರ ಗಾಯಕ್ಕೆ ಒಳಗಾಗಬಾರದು ಎಂದು ಬಿಸಿಸಿಐ ಆಶಿಸಿದೆ.

5 / 6
ಈ ಸೂಚನೆಗಳಿಗೆ ಸಂಬಂಧಿಸಿದಂತೆ, ಫ್ರಾಂಚೈಸಿಗಳಿಗೆ ಎಲ್ಲವನ್ನೂ ಈಗಾಗಲೇ ವಿವರಿಸಲಾಗಿದೆ ಎಂದು ಮಂಡಳಿಯ ಅಧಿಕಾರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

6 / 6

Published On - 2:22 pm, Wed, 29 March 23

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ