IPL 2023: ಪ್ಲೇಆಫ್​ಗೆ CSK ಎಂಟ್ರಿ: ಮುಂದಿನ ಎದುರಾಳಿ ಯಾರು ಗೊತ್ತಾ?

| Updated By: ಝಾಹಿರ್ ಯೂಸುಫ್

Updated on: May 20, 2023 | 11:44 PM

IPL 2023 Kannada: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಗೆಲುವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 17 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

1 / 11
IPL 2023: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 67ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಸಿಎಸ್​ಕೆ ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ.

2 / 11
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್​ಕೆ ತಂಡಕ್ಕೆ ಆರಂಭಿಕರಾದ ಡೆವೊನ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಸ್ಪೋಟಕ ಆರಂಭ ಒದಗಿಸಿದ್ದರು. 14.3 ಓವರ್​ಗಳಲ್ಲಿ ಮೊದಲ ವಿಕೆಟ್​ಗೆ 141 ರನ್​ ಜೊತೆಯಾಟವಾಡುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟರು.

3 / 11
ಈ ಹಂತದಲ್ಲಿ 50 ಎಸೆತಗಳಲ್ಲಿ 7 ಸಿಕ್ಸ್​ನೊಂದಿಗೆ 79 ರನ್ ಬಾರಿಸಿದ್ದ ರುತುರಾಜ್ ಗಾಯಕ್ವಾಡ್ ಔಟಾದರು. ಮತ್ತೊಂದೆಡೆ ಡೆವೊನ್ ಕಾನ್ವೆ 52 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 11 ಫೋರ್​ನೊಂದಿಗೆ 87 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು.

4 / 11
ಇನ್ನು ಅಂತಿಮ ಹಂತದಲ್ಲಿ ಶಿವಂ ದುಬೆ 9 ಎಸೆತಗಳಲ್ಲಿ 3 ಸಿಕ್ಸ್​ನೊಂದಿಗೆ 22 ರನ್ ಬಾರಿಸಿದರೆ, ಜಡೇಜಾ 7 ಎಸೆತಗಳಲ್ಲಿ 1 ಸಿಕ್ಸ್​ ಹಾಗೂ 3 ಫೋರ್​ನೊಂದಿಗೆ 20 ರನ್ ಚಚ್ಚಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಸಿಎಸ್​ಕೆ ತಂಡವು 3 ವಿಕೆಟ್ ನಷ್ಟಕ್ಕೆ 223 ರನ್​ ಕಲೆಹಾಕಿತು.

5 / 11
224 ರನ್​ಗಳ ಬೃಹತ್ ಗುರಿ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪವರ್​ಪ್ಲೇನಲ್ಲಿ 3 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 34 ರನ್​ಗಳು ಮಾತ್ರ. ಇದಾಗ್ಯೂ ನಾಯಕ ಡೇವಿಡ್ ವಾರ್ನರ್ ಏಕಾಂಗಿ ಹೋರಾಟ ಮುಂದುವರೆಸಿದ್ದರು.

6 / 11
32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವಾರ್ನರ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಇದಾಗ್ಯೂ ಕೊನೆಯ 6 ಓವರ್​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದೆ 114 ರನ್​ಗಳ ಕಠಿಣ ಗುರಿಯಿತ್ತು.

7 / 11
ಅಂತಿಮವಾಗಿ 58 ಎಸೆತಗಳಲ್ಲಿ 86 ರನ್ ಬಾರಿಸಿ ಡೇವಿಡ್ ವಾರ್ನರ್ ವಿಕೆಟ್ ಒಪ್ಪಿಸಿದರು. ಅಲ್ಲದೆ ನಿಗದಿತ 20 ಓವರ್​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್ ಕಳೆದುಕೊಂಡು 146 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಸ್​ಕೆ ತಂಡವು 77 ರನ್​ಗಳ ಭರ್ಜರಿ ಜಯ ಸಾಧಿಸಿದೆ.

8 / 11
ಈ ಗೆಲುವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 17 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ಅಲ್ಲದೆ ಪಾಯಿಂಟ್ಸ್​ ಟೇಬಲ್​ನಲ್ಲಿ ದ್ವಿತೀಯ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

9 / 11
ಅತ್ತ ಅಗ್ರಸ್ಥಾನದಲ್ಲಿ ಗುಜರಾತ್ ಟೈಟಾನ್ಸ್ ತಂಡವಿದ್ದು, ಹೀಗಾಗಿ ಪ್ಲೇಆಫ್​ ಮುಖಾಮುಖಿಯಲ್ಲಿ ಸಿಎಸ್​ಕೆ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯಲಿದೆ.

10 / 11
ಏಕೆಂದರೆ ಪ್ಲೇಆಫ್ಸ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ 2ನೇ ಸ್ಥಾನ ಪಡೆಯುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದೆ. ಹೀಗಾಗಿ ಕ್ವಾಲಿಫೈಯರ್-1 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಸೆಣಸಲಿದೆ.

11 / 11
CSK

CSK

Published On - 7:21 pm, Sat, 20 May 23