IPL 2023: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ CSK ಗೆ ಆಘಾತ: ಸ್ಟಾರ್ ಆಟಗಾರ ಔಟ್

| Updated By: ಝಾಹಿರ್ ಯೂಸುಫ್

Updated on: Mar 30, 2023 | 10:08 PM

IPL 2023 Kannada News: ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಶುಕ್ರವಾರದಿಂದ ಶುರುವಾಗಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಸಿಎಸ್​ಕೆ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ.

2 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ವೇಗದ ಬೌಲರ್ ಮುಖೇಶ್ ಚೌಧರಿ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ 26 ವರ್ಷದ ಯುವ ಎಡಗೈ ವೇಗಿ ಸಂಪೂರ್ಣ ಫಿಟ್​ನೆಸ್​ ಹೊಂದಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

3 / 5
ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ಮುಖೇಶ್ ಚೌಧರಿ 13 ಪಂದ್ಯಗಳಿಂದ 16 ವಿಕೆಟ್​ಗಳನ್ನು ಕಬಳಿಸಿದ್ದರು. ಹೀಗಾಗಿ ಈ ಬಾರಿ ಕೂಡ ಯುವ ವೇಗಿಯನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ನಿರೀಕ್ಷಿಸಲಾಗಿತ್ತು. ಆದರೀಗ ಮೊದಲ ಪಂದ್ಯಕ್ಕೂ ಮುನ್ನವೇ ಮುಖೇಶ್ ಚೌಧರಿ ಟೂರ್ನಿಯಿಂದ ಹೊರಗುಳಿದಿದ್ದಾರೆ.

4 / 5
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಗಾಯದ ಕಾರಣ ಹೊರಗುಳಿದಿದ್ದರು. ಅಲ್ಲದೆ ಅವರ ಬದಲಿಗೆ ಸೌತ್ ಆಫ್ರಿಕಾ ವೇಗಿ ಸಿಸಂದ ಮಗಲಾ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಮುಖೇಶ್ ಚೌಧರಿ ಹೊರಗುಳಿದಿರುವ ಕಾರಣ ಮತ್ತೋರ್ವ ಭಾರತೀಯ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಸಿಎಸ್​ಕೆ ಫ್ರಾಂಚೈಸಿಯ ಮುಂದಿದೆ.

5 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಸಿಸಂದ ಮಗಲಾ.