AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಡೆಲ್ಲಿ ತಂಡಕ್ಕೆ ಹೊಸ ನಾಯಕನ ಆಯ್ಕೆ; ವಿಕೆಟ್ ಕೀಪಿಂಗ್ ಜವಬ್ದಾರಿ ಯಾರಿಗೆ?

IPL 2023: ವಾರ್ನರ್‌ಗೆ ಈಗಾಗಲೇ ಐಪಿಎಲ್‌ನಲ್ಲಿ ನಾಯಕನಾಗಿ ಉತ್ತಮ ಅನುಭವವಿದೆ. ಈ ಹಿಂದೆ ಅವರು ಸನ್‌ರೈಸರ್ಸ್ ಹೈದರಾಬಾದ್‌ ತಂಡದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ತಂಡ ಕೂಡ ಐಪಿಎಲ್ ಚಾಂಪಿಯನ್ ಆಗಿತ್ತು.

TV9 Web
| Updated By: ಪೃಥ್ವಿಶಂಕರ|

Updated on:Jan 05, 2023 | 1:50 PM

Share
ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್ ಮುಂದಿನ ಕೆಲವು ತಿಂಗಳುಗಳವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಸುದ್ದಿಯ ಪ್ರಕಾರ, ಪಂತ್ ಐಪಿಎಲ್ ಈ ಬಾರಿಯ ಐಪಿಎಲ್​ನಿಂದಲೂ ದೂರ ಉಳಿಯಲಿದ್ದಾರೆ. ಹೀಗಿರುವಾಗ ಪಂತ್ ಬದಲಿಗೆ ದೆಹಲಿ ತಂಡದ ನಾಯಕ ಯಾರು ಎಂಬ ಪ್ರಶ್ನೆ ಎದ್ದಿತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸುದ್ದಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ ಸೀಸನ್​ಗೆ ತಂಡದ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಂಡಿದೆ ಎಂದು ತಿಳಿದುಬಂದಿದೆ.

1 / 5
ಟೈಮ್ಸ್ ಆಫ್ ಇಂಡಿಯಾದ ಸುದ್ದಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಡೇವಿಡ್ ವಾರ್ನರ್ ಅವರನ್ನು ನಾಯಕನನ್ನಾಗಿ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ವಾರ್ನರ್‌ಗೆ ಈಗಾಗಲೇ ಐಪಿಎಲ್‌ನಲ್ಲಿ ನಾಯಕನಾಗಿ ಉತ್ತಮ ಅನುಭವವಿದೆ. ಈ ಹಿಂದೆ ಅವರು ಸನ್‌ರೈಸರ್ಸ್ ಹೈದರಾಬಾದ್‌ ತಂಡದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ತಂಡ ಕೂಡ ಐಪಿಎಲ್ ಚಾಂಪಿಯನ್ ಆಗಿತ್ತು.

2 / 5
ಅಲ್ಲದೆ ಡೆಲ್ಲಿ ತಂಡದ ನಾಯಕತ್ವದ ಜೊತೆಗೆ ವಿಕೆಟ್ ಕೀಪಿಂಗ್ ಕೂಡ ನಿಭಾಯಿಸುತ್ತಿದ್ದ ರಿಷಭ್ ಪಂತ್ ಬದಲು ಸರ್ಫರಾಜ್ ಖಾನ್ ವಿಕೆಟ್ ಕೀಪಿಂಗ್ ನಿರ್ವಹಿಸಲಿದ್ದಾರೆ.

3 / 5
ಹಾಗೆಯೇ ರಿಷಬ್ ಪಂತ್ ಅಲಭ್ಯತೆಯಿಂದ ತಂಡದಲ್ಲಿ ಖಾಲಿಯಾಗಿರುವ ಆ ಜಾಗಕ್ಕೆ ಭಾರತದ ಅಂಡರ್-19 ತಂಡವನ್ನು ವಿಶ್ವ ಚಾಂಪಿಯನ್ ಮಾಡಿದ ಯಶ್ ಧುಲ್​ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಕಳೆದ ಸೀಸನ್‌ನಲ್ಲಿಯೇ ಯಶ್ ಧುಲ್ ಅವರನ್ನು ದೆಹಲಿ ಖರೀದಿಸಿತ್ತು ಆದರೆ ಅವರಿಗೆ ತಂಡದಲ್ಲಿ ಹೆಚ್ಚಿನ ಅವಕಾಶ ಸಿಕಿರಲಿಲ್ಲ.

4 / 5
ಇನ್ನು ರಿಷಬ್ ಪಂತ್ ಆರೋಗ್ಯದ ಬಗ್ಗೆ ಹೇಳಬೇಕಂದರೆ, ಸದ್ಯ ಪಂತ್​ರನ್ನು ಬುಧವಾರ ಡೆಹ್ರಾಡೂನ್‌ನಿಂದ ವಿಮಾನದ ಮೂಲಕ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲದೆ ಪಂತ್‌ಗೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ ಇಂಗ್ಲೆಂಡ್‌ಗೂ ಕಳುಹಿಸಬಹುದು ಎಂದು ಹೇಳಲಾಗುತ್ತಿದೆ. ಹಾಗೆಯೇ ಪಂತ್ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಬಿಸಿಸಿಐ ಭರಿಸುತ್ತಿದೆ.

5 / 5

Published On - 1:50 pm, Thu, 5 January 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ