- Kannada News Photo gallery Cricket photos IPL 2023- Dinesh Karthik Most Ducks By Players In IPL History
IPL 2023: ಸೊನ್ನೆ ಸುತ್ತಿ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆ ಬರೆದ ದಿನೇಶ್ ಕಾರ್ತಿಕ್
IPL 2023 Kannada:
Updated on: Apr 15, 2023 | 9:22 PM

IPL 2023: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ದಿನೇಶ್ ಕಾರ್ತಿಕ್ ಅನಗತ್ಯ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಈ ಬಾರಿಯ ಐಪಿಎಲ್ನಲ್ಲಿ 2ನೇ ಬಾರಿ ಸೊನ್ನೆ ಸುತ್ತುವ ಮೂಲಕ ಎಂಬುದು ವಿಶೇಷ.

ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ದಿನೇಶ್ ಕಾರ್ತಿಕ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಗೋಲ್ಡನ್ ಡಕ್ಗೆ ಔಟಾಗಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಆಟಗಾರರ ಪಟ್ಟಿಯಲ್ಲಿ ಡಿಕೆ ಅಗ್ರಸ್ಥಾನಕ್ಕೇರಿದ್ದಾರೆ.

ಐಪಿಎಲ್ನಲ್ಲಿ ಒಟ್ಟು 15 ಬಾರಿ ಶೂನ್ಯಕ್ಕೆ ಔಟಾಗುವ ಮೂಲಕ ದಿನೇಶ್ ಕಾರ್ತಿಕ್ ಇದೀಗ ಸೊನ್ನೆ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅದು ಕೂಡ ಜಂಟಿಯಾಗಿ ಎಂಬುದು ಇಲ್ಲಿ ಮತ್ತೊಂದು ವಿಶೇಷ.

ಈ ಪಟ್ಟಿಯಲ್ಲಿ ಕೆಕೆಆರ್ ತಂಡದ ಆಟಗಾರ ಮಂದೀಪ್ ಸಿಂಗ್ ಕೂಡ ಇದ್ದಾರೆ. ಮಂದೀಪ್ ಐಪಿಎಲ್ನಲ್ಲಿ ಇದುವರೆಗೆ ಒಟ್ಟು 15 ಬಾರಿ ಸೊನ್ನೆಗೆ ಔಟಾಗಿದ್ದಾರೆ. ಇದೀಗ ಈ ದಾಖಲೆಯನ್ನು ಡಿಕೆ ಸರಿಗಟ್ಟಿದ್ದಾರೆ.

ಒಟ್ಟಿನಲ್ಲಿ ಕಳೆದ ಸೀಸನ್ನಲ್ಲಿ 16 ಪಂದ್ಯಗಳಲ್ಲಿ 330 ರನ್ ಬಾರಿಸಿ ಅಬ್ಬರಿಸಿದ್ದ ದಿನೇಶ್ ಕಾರ್ತಿಕ್ ಈ ಬಾರಿ ರನ್ಗಳಿಸಲು ಪರದಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಕಳೆದ 4 ಇನಿಂಗ್ಸ್ ಮೂಲಕ ಡಿಕೆ ಕಲೆಹಾಕಿರುವುದು ಕೇವಲ 10 ರನ್ ಮಾತ್ರ. ಅಂದರೆ ಇದುವರೆಗೆ ಎರಡಂಕಿ ಮೊತ್ತ ಕೂಡ ಗಳಿಸಿಲ್ಲ ಎಂಬುದೇ ಅಚ್ಚರಿ.



















