IPL 2023: ಐಪಿಎಲ್ ಇತಿಹಾಸದಲ್ಲೇ ಅನಗತ್ಯ ದಾಖಲೆ ಬರೆದ ದಿನೇಶ್ ಕಾರ್ತಿಕ್
TV9 Web | Updated By: ಝಾಹಿರ್ ಯೂಸುಫ್
Updated on:
May 22, 2023 | 12:10 AM
IPL 2023 Kannada: ಅಚ್ಚರಿ ಎಂದರೆ ಇದು ಈ ಬಾರಿಯ ಐಪಿಎಲ್ನಲ್ಲಿ ದಿನೇಶ್ ಕಾರ್ತಿಕ್ ಅವರ 4ನೇ ಡಕ್ ಔಟ್. ಇನ್ನು ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್-5 ಬ್ಯಾಟರ್ಗಳ ಪಟ್ಟಿ ಈ ಕೆಳಗಿನಂತಿದೆ.
1 / 8
IPL 2023 RCB vs GT: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ದಿನೇಶ್ ಕಾರ್ತಿಕ್ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
2 / 8
ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದರು. ಈ ಗೋಲ್ಡನ್ ಡಕ್ನೊಂದಿಗೆ ಡಿಕೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಅಪಕೀರ್ತಿಗೆ ಒಳಗಾಗಿದ್ದಾರೆ.
3 / 8
ಅಚ್ಚರಿ ಎಂದರೆ ಇದು ಈ ಬಾರಿಯ ಐಪಿಎಲ್ನಲ್ಲಿ ದಿನೇಶ್ ಕಾರ್ತಿಕ್ ಅವರ 4ನೇ ಡಕ್ ಔಟ್. ಇನ್ನು ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್-5 ಬ್ಯಾಟರ್ಗಳ ಪಟ್ಟಿ ಈ ಕೆಳಗಿನಂತಿದೆ.
4 / 8
1- ದಿನೇಶ್ ಕಾರ್ತಿಕ್: 221 ಐಪಿಎಲ್ ಇನಿಂಗ್ಸ್ ಆಡಿರುವ ದಿನೇಶ್ ಕಾರ್ತಿಕ್ ಒಟ್ಟು 17 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದಾರೆ. ಇದರೊಂದಿಗೆ ಐಪಿಎಲ್ನಲ್ಲಿ ಸೊನ್ನೆ ಸುತ್ತುವುದರಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
5 / 8
2- ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 236 ಇನಿಂಗ್ಸ್ಗಳಲ್ಲಿ ಒಟ್ಟು 16 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.
6 / 8
3- ಸುನಿಲ್ ನರೈನ್: ಕೆಕೆಆರ್ ತಂಡದ ಆಟಗಾರ ಸುನಿಲ್ ನರೈನ್ 96 ಇನಿಂಗ್ಸ್ಗಳಲ್ಲಿ 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.
7 / 8
4- ಮಂದೀಪ್ ಸಿಂಗ್: ಕೆಕೆಆರ್ ತಂಡದ ಆಟಗಾರ ಮಂದೀಪ್ ಸಿಂಗ್ 98 ಇನಿಂಗ್ಸ್ಗಳಲ್ಲಿ ಒಟ್ಟು 15 ಬಾರಿ ಯಾವುದೇ ರನ್ಗಳಿಸದೇ ವಿಕೆಟ್ ಒಪ್ಪಿಸಿದ್ದಾರೆ.
8 / 8
5- ಅಂಬಾಟಿ ರಾಯುಡು: ಸಿಎಸ್ಕೆ ತಂಡದ ಬ್ಯಾಟರ್ ಅಂಬಾಟಿ ರಾಯುಡು 185 ಇನಿಂಗ್ಸ್ಗಳಲ್ಲಿ ಒಟ್ಟು 14 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.