IPL 2023: ಡೇಂಜರಸ್ ಡುಪ್ಲೆಸಿಸ್, ಕಿಂಗ್ ಕೊಹ್ಲಿ ಅಬ್ಬರ: ಹೊಸ ದಾಖಲೆ ನಿರ್ಮಾಣ

| Updated By: ಝಾಹಿರ್ ಯೂಸುಫ್

Updated on: May 18, 2023 | 11:05 PM

IPL 2023 Kannada: ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ ಕೇವಲ 51 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಸಿಡಿಲಬ್ಬರದ 104 ರನ್​ ಬಾರಿಸಿದ್ದರು.

1 / 8
IPL 2023: ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು.

2 / 8
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ ಕೇವಲ 51 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಸಿಡಿಲಬ್ಬರದ 104 ರನ್​ ಬಾರಿಸಿದ್ದರು. ಈ ಸ್ಪೋಟಕ ಶತಕದ ನೆರವಿನಿಂದ ಎಸ್​ಆರ್​ಹೆಚ್ ತಂಡವು 5 ವಿಕೆಟ್ ನಷ್ಟಕ್ಕೆ 186 ರನ್ ಕಲೆಹಾಕಿತು.

3 / 8
187 ರನ್​ಗಳ ಬೃಹತ್ ಟಾರ್ಗೆಟ್ ಪಡೆದ ಆರ್​ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಸ್ಪೋಟಕ ಆರಂಭ ಒದಗಿಸಿದ್ದರು. ಅದರಲ್ಲೂ ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ಕೊಹ್ಲಿ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದರು.

4 / 8
ಅತ್ತ ಉತ್ತಮ ಸಾಥ್ ನೀಡಿದ ಡುಪ್ಲೆಸಿಸ್ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 5ನೇ ಓವರ್​ನಲ್ಲೇ ಆರ್​ಸಿಬಿ ತಂಡದ ಮೊತ್ತ 50 ರ ಗಡಿದಾಟಿತು. ಅಲ್ಲದೆ ಪವರ್​ಪ್ಲೇ ಮುಕ್ತಾಯದ ವೇಳೆಗೆ ಬರೊಬ್ಬರಿ 64 ರನ್​ ಚಚ್ಚಿದರು.

5 / 8
ಈ ಅರ್ಧಶತಕದ ಜೊತೆಯಾಟದೊಂದಿಗೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ ಅರ್ಧಶತಕದ ಜೊತೆಯಾಟವಾಡಿದ ಆರಂಭಿಕ ಜೋಡಿ ಎಂಬ ಹೊಸ ದಾಖಲೆಯೊಂದು ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಪಾಲಾಗಿದೆ.

6 / 8
ಕಿಂಗ್ ಕೊಹ್ಲಿ ಹಾಗೂ ಡೇಂಜರಸ್ ಡುಪ್ಲೆಸಿಸ್ ಈ ಬಾರಿಯ ಐಪಿಎಲ್​ನಲ್ಲಿ 7 ಬಾರಿ ಮೊದಲ ವಿಕೆಟ್​ಗೆ 50+ ರನ್​ಗಳ ಜೊತೆಯಾಟವಾಡಿದ್ದಾರೆ. ಈ ಮೂಲಕ ಐಪಿಎಲ್​ನ ಹಳೆಯ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ.

7 / 8
ಐಪಿಎಲ್​ನಲ್ಲಿ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳ ಜೊತೆಯಾಟವಾಡಿದ ಆರಂಭಿಕ ಜೋಡಿ ದಾಖಲೆ ಡೇವಿಡ್ ವಾರ್ನರ್ ಹಾಗೂ ಜಾನಿ ಬೈರ್​ಸ್ಟೋವ್ ಹೆಸರಿನಲ್ಲಿದೆ. 2019 ರಲ್ಲಿ ಎಸ್​ಆರ್​ಹೆಚ್ ಪರ ಆಡಿದ್ದ ಈ ಜೋಡಿಯು ಒಟ್ಟು 7 ಬಾರಿ 50+ ರನ್​ಗಳ ಜೊತೆಯಾಟವಾಡಿದ್ದರು.

8 / 8
ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಸರಿಗಟ್ಟಿದ್ದಾರೆ. ಅಲ್ಲದೆ ಮುಂದಿನ ಪಂದ್ಯದಲ್ಲಿ ಮತ್ತೊಂದು ಅರ್ಧಶತಕದ ಜೊತೆಯಾಟವಾಡಿದರೆ ಐಪಿಎಲ್​ನಲ್ಲಿ ಹೊಸ ದಾಖಲೆಯೊಂದು ನಿರ್ಮಾಣವಾಗಲಿದೆ.