IPL 2023: ಫಾಫ್-ಮ್ಯಾಕ್ಸಿ ಬೆಂಕಿ-ಬಿರುಗಾಳಿ ಬ್ಯಾಟಿಂಗ್: ಹೊಸ ದಾಖಲೆ ನಿರ್ಮಾಣ

| Updated By: ಝಾಹಿರ್ ಯೂಸುಫ್

Updated on: May 09, 2023 | 9:27 PM

IPL 2023 Kannada: ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಗ್ಲೆನ್ ಮ್ಯಾಕ್ಸ್​ವೆಲ್ 33 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 68 ರನ್​ ಬಾರಿಸಿ ಔಟಾದರು.

1 / 10
IPL 2023 MI vs RCB: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು.

2 / 10
ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಮೊದಲ ಓವರ್​ನಲ್ಲೇ 1 ರನ್​ಗಳಿಸಿ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿದ್ದರು. ಇನ್ನು ಆ ಬಳಿಕ ಬಂದ ಅನೂಜ್ ರಾವತ್ (6) ಬಂದ ವೇಗದಲ್ಲೇ ಔಟಾಗಿ ಹಿಂತಿರುಗಿದರು.

3 / 10
ಈ ಹಂತದಲ್ಲಿ ಜೊತೆಯಾದ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅತ್ಯುತ್ತಮ ಜೊತೆಯಾಟ ಪ್ರದರ್ಶಿಸಿದರು. 3ನೇ ಓವರ್​ನಿಂದ ಸಿಡಿಲಬ್ಬರದ ಆರಂಭಿಸಿದ ಈ ಜೋಡಿಯು ಪವರ್​ಪ್ಲೇ ಮುಕ್ತಾಯದ ವೇಳೆ 56 ರನ್ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

4 / 10
ಮುಂಬೈ ಇಂಡಿಯನ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಮ್ಯಾಕ್ಸ್​ವೆಲ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಮತ್ತೊಂದೆಡೆ ಫಾಫ್ ಡುಪ್ಲೆಸಿಸ್ 30 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರು. ಪರಿಣಾಮ 10 ಓವರ್ ಮುಕ್ತಾಯದ ವೇಳೆ ಆರ್​ಸಿಬಿ ತಂಡದ ಮೊತ್ತ 100ರ ಗಡಿ ದಾಟಿತು.

5 / 10
ಇದಾದ ಬಳಿಕ ಕೂಡ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಗ್ಲೆನ್ ಮ್ಯಾಕ್ಸ್​ವೆಲ್ 33 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 68 ರನ್​ ಬಾರಿಸಿ ಔಟಾದರು. ಅಷ್ಟರಲ್ಲಾಗಲೇ ಮ್ಯಾಕ್ಸ್​ವೆಲ್-ಫಾಫ್ ಜೋಡಿಯು 120 ರನ್​ಗಳ ಜೊತೆಯಾಟವಾಡಿದ್ದರು.

6 / 10
ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ ಶತಕದ ಜೊತೆಯಾಟವಾಡಿದ ವಿಶೇಷ ದಾಖಲೆಯೊಂದು ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಪಾಲಾಯಿತು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ ಶತಕದ ಜೊತೆಯಾಟವಾಡಿದ 2ನೇ ಜೋಡಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

7 / 10
ಆರ್​ಸಿಬಿ ಪರ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ ಶತಕದ ಜೊತೆಯಾಟವಾಡಿದ ದಾಖಲೆ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದೆ. 2016 ರಲ್ಲಿ ಕಿಂಗ್ ಕೊಹ್ಲಿ ಹಾಗೂ ಎಬಿಡಿ ಒಟ್ಟು 5 ಬಾರಿ ಶತಕದ ಜೊತೆಯಾಟವಾಡಿದ್ದರು.

8 / 10
ಈ ಬಾರಿಯ ಐಪಿಎಲ್​ನಲ್ಲಿ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಒಟ್ಟು 4 ಬಾರಿ ಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ ಶತಕದ ಜೊತೆಯಾಟವಾಡಿದ 2ನೇ ಜೋಡಿ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

9 / 10
ಇನ್ನು ಆರ್​ಸಿಬಿ ತಂಡಕ್ಕೆ ಲೀಗ್ ಹಂತದಲ್ಲಿ 3 ಪಂದ್ಯಗಳು ಬಾಕಿಯಿದ್ದು, ಈ ಪಂದ್ಯಗಳಲ್ಲಿ ಫಾಫ್ ಡುಪ್ಲೆಸಿಸ್-ಗ್ಲೆನ್ ಮ್ಯಾಕ್ಸ್​ವೆಲ್ ಶತಕದ ಜೊತೆಯಾಟವಾಡಿದರೆ ವಿರಾಟ್ ಕೊಹ್ಲಿ ಹಾಗೂ ಎಬಿಡಿ ಹೆಸರಿನಲ್ಲಿರುವ ಐಪಿಎಲ್​ನ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಅಲ್ಲದೆ ಈ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆಯುವ ಅವಕಾಶ ಕೂಡ ಫಾಫ್-ಮ್ಯಾಕ್ಸಿ ಮುಂದಿದೆ.

10 / 10
ಗ್ಲೆನ್ ಮ್ಯಾಕ್ಸ್​ವೆಲ್ (68) ಹಾಗೂ ಫಾಫ್ ಡುಪ್ಲೆಸಿಸ್ (65) ಅವರ ಬಿರುಸಿನ ಬ್ಯಾಟಿಂಗ್​ ನೆರವಿನಿಂದ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 199 ರನ್​ ಕಲೆಹಾಕಿದೆ.

Published On - 9:22 pm, Tue, 9 May 23