IPL 2023: ಮೊದಲ ಸ್ಥಾನದಲ್ಲಿ ರಹಾನೆ! ಈ ಐಪಿಎಲ್ನ ಅತಿ ವೇಗದ ಅರ್ಧಶತಕಗಳಿವು
IPL 2023: ಶನಿವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಹಾನೆ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, ತಮ್ಮ ಐಪಿಎಲ್ ವೃತ್ತಿಬದುಕಿನಲ್ಲಿ ಇತಿಹಾಸ ಸೃಷ್ಟಿಸಿದರು.
1 / 6
ವೇಗದ ಅರ್ಧಶತಕಗಳ ಪಟ್ಟಿಯಲ್ಲಿ ಮೊದಲ ಹೆಸರು ಅಜಿಂಕ್ಯ ರಹಾನೆ ಅವರದು. ಶನಿವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಹಾನೆ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, ತಮ್ಮ ಐಪಿಎಲ್ ವೃತ್ತಿಬದುಕಿನಲ್ಲಿ ಇತಿಹಾಸ ಸೃಷ್ಟಿಸಿದರು.
2 / 6
ರಹಾನೆ ನಂತರ ಈ ಪಟ್ಟಿಯಲ್ಲಿ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದಾರೆ. ಈ ಆಲ್ರೌಂಡರ್ ಆರ್ಸಿಬಿ ವಿರುದ್ಧ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
3 / 6
ಶಾರ್ದೂಲ್ ಠಾಕೂರ್ ಹೊರತುಪಡಿಸಿ, ರಾಜಸ್ಥಾನ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಕೂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 20 ಎಸೆತಗಳಲ್ಲಿ ಸೀಸನ್ನ ಎರಡನೇ ವೇಗದ ಅರ್ಧಶತಕ ಬಾರಿಸಿದರು.
4 / 6
ಇನ್ನು ಲಕ್ನೋ ಪರ ಚೊಚ್ಚಲ ಐಪಿಎಲ್ ಆಡುತ್ತಿರುವ ಕೈಲ್ ಮೇಯರ್ಸ್ ಸಿಎಸ್ಕೆ ವಿರುದ್ಧ 21 ಎಸೆತಗಳಲ್ಲಿ ಅರ್ಧಶತಕ ಬಾರಿಸಿದಲ್ಲದೆ, ಸೀಸನ್ ಮೂರನೇ ವೇಗದ ಅರ್ಧಶತಕ ದಾಖಲಿಸಿದರು.
5 / 6
ಸಿಎಸ್ಕೆ ಆಟಗಾರ ರುತುರಾಜ್ ಗಾಯಕ್ವಾಡ್ ಕೂಡ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ ಮತ್ತು ಲಕ್ನೋ ವಿರುದ್ಧ 25 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.
6 / 6
ಇವರಲ್ಲದೆ ಸಂಜು ಸ್ಯಾಮ್ಸನ್, ಕೈಲ್ ಮೇಯರ್ಸ್ ಮತ್ತು ಪ್ರಭಾಸಿಮ್ರಾನ್ ಸಿಂಗ್ ಈ ಸೀಸನ್ನಲ್ಲಿ ಇದುವರೆಗೆ ತಲಾ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ.
Published On - 5:43 pm, Mon, 10 April 23