IPL 2023 Final: ಫೈನಲ್ ಪಂದ್ಯಕ್ಕೂ ಮುನ್ನ ನಿವೃತ್ತಿ ಘೋಷಿಸಿದ CSK ಆಟಗಾರ
TV9 Web | Updated By: ಝಾಹಿರ್ ಯೂಸುಫ್
Updated on:
May 29, 2023 | 2:52 AM
Ambati Rayudu Retirement: ಐಪಿಎಲ್ನಲ್ಲಿ 204 ಪಂದ್ಯಗಳನ್ನಾಡಿರುವ ಅಂಬಾಟಿ ರಾಯುಡು ಒಟ್ಟು 4329 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ.
1 / 7
IPL 2023 Final: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ನ ಫೈನಲ್ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಅಂಬಾಟಿ ರಾಯುಡು ನಿವೃತ್ತಿ ಘೋಷಿಸಿದ್ದಾರೆ.
2 / 7
2018 ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿರುವ ರಾಯುಡು ಕಳೆದ ಸೀಸನ್ನಲ್ಲೇ ಐಪಿಎಲ್ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದರು. ಆದರೆ ಸಿಎಸ್ಕೆ ಫ್ರಾಂಚೈಸಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು. ಅದರಂತೆ ಈ ಬಾರಿ ಕೂಡ ರಾಯುಡು ಸಿಎಸ್ಕೆ ಪರ ಕಣಕ್ಕಿಳಿದಿದ್ದರು.
3 / 7
ಇದೀಗ ಸಿಎಸ್ಕೆ ತಂಡವು ಫೈನಲ್ ಪ್ರವೇಶಿಸಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ ಆಡುವ ಪಂದ್ಯವು ನನ್ನ ಪಾಲಿಗೆ ಕೊನೆಯ ಪಂದ್ಯವಾಗಿರಲಿದೆ ಎಂದು ಅಂಬಾಟಿ ರಾಯುಡು ತಿಳಿಸಿದ್ದಾರೆ. ಅಲ್ಲದೆ ಈ ವಿಷಯದಲ್ಲಿ ಯಾವುದೇ ಯೂಟರ್ನ್ ತೆಗೆದುಕೊಳ್ಳುವುದಿಲ್ಲ ಎಂಬುದನ್ನು ಕೂಡ ಸ್ಪಷ್ಟಪಡಿಸಿದ್ದಾರೆ.
4 / 7
2010 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ರಾಯುಡು 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು.
5 / 7
ಇದರ ನಡುವೆ 5 ಬಾರಿ ಚಾಂಪಿಯನ್ ತಂಡದ ಭಾಗವಾಗಿದ್ದರು. ಮುಂಬೈ ಇಂಡಿಯನ್ಸ್ ಪರ 3 ಬಾರಿ ಕಪ್ ಗೆದ್ದ ತಂಡದ ಭಾಗವಾಗಿದ್ದ ರಾಯುಡು, ಸಿಎಸ್ಕೆ ಪರ 2 ಬಾರಿ ಟ್ರೋಫಿ ಎತ್ತಿ ಹಿಡಿದಿದ್ದರು. ಹಾಗೆಯೇ ಈ ಬಾರಿ ಫೈನಲ್ ಪ್ರವೇಶಿಸಿದ ಸಿಎಸ್ಕೆ ತಂಡದ ಭಾಗವಾಗಿದ್ದಾರೆ.
6 / 7
ಮುಂಬೈ ಇಂಡಿಯನ್ಸ್ ಹಾಗೂ ಸಿಎಸ್ಕೆ 2 ಶೇಷ್ಠ ತಂಡಗಳು...204 ಪಂದ್ಯಗಳು, 14 ಸೀಸನ್‌ಗಳು, 11 ಪ್ಲೇಆಫ್‌ಗಳು, 8 ಫೈನಲ್‌ಗಳು, 5 ಟ್ರೋಫಿಗಳು. ಐಪಿಎಲ್ನಲ್ಲಿ ಇಂದು ನನ್ನ ಕೊನೆಯ ಪಂದ್ಯವಾಡಲು ನಿರ್ಧರಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳು ಎಂದು ರಾಯುಡು ತಿಳಿಸಿದ್ದಾರೆ.
7 / 7
ಅಂದಹಾಗೆ ಈ ಬಾರಿಯ ಐಪಿಎಲ್ನಲ್ಲಿ ಒಟ್ಟು 15 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ 37 ವರ್ಷದ ರಾಯುಡು, ಒಟ್ಟು 139 ರನ್ ಕಲೆಹಾಕಿದ್ದಾರೆ. ಹಾಗೆಯೇ ಒಟ್ಟಾರೆ ಐಪಿಎಲ್ನಲ್ಲಿ 204 ಪಂದ್ಯಗಳನ್ನಾಡಿ 4329 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ.
Published On - 6:36 pm, Sun, 28 May 23