- Kannada News Photo gallery Cricket photos Kannada News | IPL 2023 Final Match Postponed To Reserve Day
IPL 2023 Final CSK vs GT: ಐಪಿಎಲ್ ಫೈನಲ್ ಪಂದ್ಯ ಸೋಮವಾರಕ್ಕೆ ಮುಂದೂಡಿಕೆ
IPL 2023 Final CSK vs GT: ಸೋಮವಾರ ರಾತ್ರಿ 7.30 ಕ್ಕೆ ಐಪಿಎಲ್ ಸೀಸನ್ 16 ಫೈನಲ್ ಪಂದ್ಯ ನಡೆಯಲಿದೆ. ಒಂದು ವೇಳೆ ಸೋಮವಾರ ಮಳೆ ಬಂದರೆ? ಈ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
Updated on:May 29, 2023 | 2:40 AM

IPL 2023 CSK vs GT: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಐಪಿಎಲ್ ಫೈನಲ್ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ.

ನಿಗದಿಯಂತೆ ಸೋಮವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದ್ದು, 7.30 ಕ್ಕೆ ಪಂದ್ಯ ಶುರುವಾಗಲಿದೆ. ಒಂದು ವೇಳೆ ಸೋಮವಾರ ಕೂಡ ಪಂದ್ಯಕ್ಕೆ ವರುಣ ಅಡ್ಡಿಪಡಿಸಿದರೆ ಓವರ್ಗಳ ಕಡಿತದೊಂದಿಗೆ ಪಂದ್ಯವನ್ನು ಆಯೋಜಿಸಲಿದೆ. ಇನ್ನು ಸೋಮವಾರ ಕೂಡ ಮಳೆ ಬಂದರೆ ಫೈನಲ್ ಪಂದ್ಯ ಹೇಗೆ ನಡೆಯಲಿದೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಮಳೆಯಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್ಗಳ ಕಡಿತ ಮಾಡಲಾಗುತ್ತದೆ. ಅಲ್ಲದೆ ಆ ಬಳಿಕ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್ಗಳನ್ನು ಆಡಿರಬೇಕು.

ಇನ್ನು ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್ಗಳ ಪಂದ್ಯವನ್ನು ಆಯೋಜಿಸಲಿದೆ. ಅದರಂತೆ ಮಧ್ಯರಾತ್ರಿ 1.30 ರೊಳಗೆ 5 ಓವರ್ಗಳ ಪಂದ್ಯವನ್ನು ಆಯೋಜಿಸಲು ಮುಂದಾಗಲಿದ್ದಾರೆ.

ಒಂದು ವೇಳೆ ಮಧ್ಯರಾತ್ರಿ 1.30 ರೊಳಗೆ 5 ಓವರ್ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಮಾತ್ರ ಪಂದ್ಯವನ್ನು ಮೀಸಲು ದಿನದಾಟಕ್ಕೆ ಮುಂದೂಡಲಾಗುತ್ತದೆ. ಅದರಂತೆ ಬುಧವಾರ ಫೈನಲ್ ಪಂದ್ಯವನ್ನು ಮರು ಆಯೋಜಿಸಲಿದ್ದಾರೆ.

- ಇನ್ನು 11.56 ರಿಂದ 12.50 ರೊಳಗೆ 5 ಓವರ್ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಸೂಪರ್ ಓವರ್ ನಡೆಸುವ ಸಾಧ್ಯತೆಯಿದೆ.

- ಒಂದು ವೇಳೆ ಮಳೆಯಿಂದಾಗಿ ಸೋಮವಾರ ಕೂಡ ಕನಿಷ್ಠ ಸೂಪರ್ ಓವರ್ ಪಂದ್ಯ ನಡೆಯದಿದ್ದರೆ, ಲೀಗ್ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ಸ್ ಎಂದು ಘೋಷಿಸಲಾಗುತ್ತದೆ. ಎಂದು ವರದಿಯಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.

ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.
Published On - 10:56 pm, Sun, 28 May 23
