IPL 2023 Final Rain Rules: ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ: ಹೀಗೆ ನಡೆಯಲಿದೆ ಮ್ಯಾಚ್..!

Edited By:

Updated on: May 29, 2023 | 3:01 AM

IPL 2023 Final Rain Rules: IPL 2022 ರಲ್ಲಿ ಫೈನಲ್ ಪಂದ್ಯಕ್ಕಾಗಿ ಮೀಸಲು ದಿನವನ್ನು ಘೋಷಿಸಲಾಗಿತ್ತು. ಅದರಂತೆ ಈ ಬಾರಿ ಕೂಡ ನಿಗದಿತ ಸಮಯದೊಳಗೆ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಸೋಮವಾರ ಪಂದ್ಯವನ್ನು ಆಯೋಜಿಸಲಿದೆ ಎಂದು ಗುಜರಾತ್ ಟೈಟಾನ್ಸ್ ತಿಳಿಸಿದೆ.

1 / 9
IPL 2023 Final: ಅಹಮದಾಬಾದ್​ನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯಕ್ಕೆ ವರುಣ ಅಡ್ಡಿಯಾಗಿದ್ದಾನೆ. 7.30 ಕ್ಕೆ ಶುರವಾಗಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವು ಮಳೆಯ ಕಾರಣ ವಿಳಂಬವಾಗಿದೆ.

IPL 2023 Final: ಅಹಮದಾಬಾದ್​ನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯಕ್ಕೆ ವರುಣ ಅಡ್ಡಿಯಾಗಿದ್ದಾನೆ. 7.30 ಕ್ಕೆ ಶುರವಾಗಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವು ಮಳೆಯ ಕಾರಣ ವಿಳಂಬವಾಗಿದೆ.

2 / 9

ಸದ್ಯ ಅಹಮದಾಬಾದ್​ನಲ್ಲಿ ಸತತ ಮಳೆಯಾಗುತ್ತಿದ್ದು, ಹೀಗಾಗಿ ಪಂದ್ಯ ಹೇಗೆ ನಡೆಯಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಒಂದು ವೇಳೆ ಮಳೆ ನಿಂತರೆ, ಐಪಿಎಲ್ ರೈನ್ ರೂಲ್ಸ್ ಪ್ರಕಾರ ಪಂದ್ಯ ನಡೆಯಲಿದೆ. ಅಂದರೆ ಮಳೆ ಬಂದರೆ ಪಂದ್ಯವನ್ನು ಆಯೋಜಿಸಲು ಕೆಲ ನಿಯಮಗಳನ್ನು ರೂಪಿಸಲಾಗಿದೆ.

3 / 9

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಪಂದ್ಯವು ರಾತ್ರಿ 7.30 ಕ್ಕೆ ಶುರುವಾಗಲಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ಶುರುವಾಗುವುದು ವಿಳಂಬವಾದರೆ ಹೆಚ್ಚುವರಿ 120 ನಿಮಿಷಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದರಂತೆ ರಾತ್ರಿ 9.40 ರೊಳಗೆ ಪಂದ್ಯ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. 2 ತಂಡಗಳು 20 ಓವರ್​ಗಳನ್ನು ಆಡಲಿದೆ.

4 / 9

ಮಳೆಯಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಲ್ಲದೆ ಆ ಬಳಿಕ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಬೇಕು.

5 / 9

ಇನ್ನು ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಲಿದೆ. ಅದರಂತೆ ಮಧ್ಯರಾತ್ರಿ 1.30 ರೊಳಗೆ 5 ಓವರ್​ಗಳ ಪಂದ್ಯವನ್ನು ಆಯೋಜಿಸಲು ಮುಂದಾಗಲಿದ್ದಾರೆ.

6 / 9

ಒಂದು ವೇಳೆ ಮಧ್ಯರಾತ್ರಿ 1.30 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಮಾತ್ರ ಪಂದ್ಯವನ್ನು ಮೀಸಲು ದಿನದಾಟಕ್ಕೆ ಮುಂದೂಡಲಾಗುತ್ತದೆ. ಅದರಂತೆ ಬುಧವಾರ ಫೈನಲ್ ಪಂದ್ಯವನ್ನು ಮರು ಆಯೋಜಿಸಲಿದ್ದಾರೆ.

7 / 9

- ಇನ್ನು 11.56 ರಿಂದ 12.50 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಸೂಪರ್ ಓವರ್ ನಡೆಸುವ ಸಾಧ್ಯತೆಯಿದೆ.

8 / 9

IPL 2022 ರಲ್ಲಿ ಫೈನಲ್ ಪಂದ್ಯಕ್ಕಾಗಿ ಮೀಸಲು ದಿನವನ್ನು ಘೋಷಿಸಲಾಗಿತ್ತು. ಅದರಂತೆ ಈ ಬಾರಿ ಕೂಡ ನಿಗದಿತ ಸಮಯದೊಳಗೆ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಸೋಮವಾರ ಪಂದ್ಯವನ್ನು ಆಯೋಜಿಸಲಿದೆ ಎಂದು ಗುಜರಾತ್ ಟೈಟಾನ್ಸ್ ತಿಳಿಸಿದೆ.

9 / 9

- ಒಂದು ವೇಳೆ ಮಳೆಯಿಂದಾಗಿ ಸೋಮವಾರ ಕೂಡ ಕನಿಷ್ಠ ಸೂಪರ್ ಓವರ್ ಪಂದ್ಯ ನಡೆಯದಿದ್ದರೆ, ಲೀಗ್​ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ಸ್ ಎಂದು ಘೋಷಿಸಲಾಗುತ್ತದೆ. ಎಂದು ವರದಿಯಾಗಿದೆ.

Published On - 7:42 pm, Sun, 28 May 23

Loading...
Unable to load recommendations.
Follow Us