AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final: ಚೆನ್ನೈ ಸೂಪರ್ ಕಿಂಗ್ಸ್​ ಪಾಲಿಗೆ ವಿಲನ್ ಆದ ಚೆನ್ನೈ ಕ್ರಿಕೆಟಿಗ..!

Sai Sudharsan: ಸಾಯಿಯ ಅಬ್ಬರ ಶುರುವಾಗುತ್ತಿದ್ದಂತೆ ಅತ್ತ ಸಿಎಸ್​ಕೆ ಬೌಲರ್​ಗಳು ಲಯ ತಪ್ಪಿದರು. ಆ ಬಳಿಕ ಸುದರ್ಶನ್ ಹಿಂತಿರುಗಿ ನೋಡಿಲ್ಲ ಎನ್ನಬಹುದು.

TV9 Web
| Updated By: ಝಾಹಿರ್ ಯೂಸುಫ್|

Updated on:Apr 24, 2024 | 9:48 PM

Share
IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್​ನಲ್ಲಿ ಅಬ್ಬರಿಸುವ ಮೂಲಕ ಸಾಯಿ ಸುದರ್ಶನ್ ಸಂಚಲನ ಸೃಷ್ಟಿಸಿದ್ದಾರೆ. ನಿರ್ಣಾಯಕ ಪಂದ್ಯದಲ್ಲಿ ಸಿಎಸ್​ಕೆ ಬೌಲರ್​ಗಳ ಬೆಂಡೆತ್ತಿದ ಸಾಯಿ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

1 / 9
8ನೇ ಓವರ್​ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಆರಂಭದ 12 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ತಂಡದ ಮೊತ್ತ 100ರ ಗಡಿದಾಟುತ್ತಿದ್ದಂತೆ ಸಾಯಿ ಕೂಡ ಬ್ಯಾಟಿಂಗ್ ಗೇರ್ ಬದಲಿಸಿದರು.

2 / 9
ಸಾಯಿಯ ಅಬ್ಬರ ಶುರುವಾಗುತ್ತಿದ್ದಂತೆ ಅತ್ತ ಸಿಎಸ್​ಕೆ ಬೌಲರ್​ಗಳು ಲಯ ತಪ್ಪಿದರು. ಆ ಬಳಿಕ ಸುದರ್ಶನ್ ಹಿಂತಿರುಗಿ ನೋಡಿಲ್ಲ ಎನ್ನಬಹುದು. ಇದರ ನಡುವೆ ಧೋನಿ ಹಲವು ಬಾರಿ ಬೌಲಿಂಗ್​ನಲ್ಲಿ ಬದಲಾವಣೆ ತಂದರೂ ಸಾಯಿಯ ಅಬ್ಬರವನ್ನು ತಡೆಯಲಾಗಲಿಲ್ಲ.

3 / 9
ಪರಿಣಾಮ 33 ಎಸೆತಗಳಲ್ಲಿ ಸಾಯಿ ಸುದರ್ಶನ್ ಅರ್ಧಶತಕ ಪೂರೈಸಿದರು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯ ಯುವ ಆಟಗಾರನಿಗೆ ಮನಸೊ ಇಚ್ಛೆ ಬ್ಯಾಟ್ ಬೀಸುವಂತೆ ಸಂಪೂರ್ಣ ಸ್ವಾತಂತ್ರ್ಯ ನೀಡಿದರು.

4 / 9
ಅಲ್ಲಿಂದ ಶುರುವಾದ ಸಾಯಿ ಸುದರ್ಶನ್ ಅಬ್ಬರಕ್ಕೆ ಚೆನ್ನೈ ಸೂಪರ್ ಕಿಂಗ್ ಬೌಲರ್​ಗಳು ಪರದಾಡಿದರು. ಅದರಲ್ಲೂ 19ನೇ ಓವರ್​ವರೆಗೂ ಸಿಡಿಲಬ್ಬರ ಮುಂದುವರೆಸಿದ ಸಾಯಿ ಇನ್ನೇನು ಶತಕ ಪೂರೈಸಲಿದ್ದಾರೆ ಅನ್ನುವಷ್ಟರಲ್ಲಿ ಮತೀಶ ಪತಿರಾಣ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು.

5 / 9
ಆದರೆ ಅದಾಗಲೇ ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಸಾಯಿ ಸುದರ್ಶನ್ 96 ರನ್ ಚಚ್ಚಿದ್ದರು. ಪರಿಣಾಮ GT ತಂಡವು ನಿಗದಿತ 20 ಓವರ್​ಗಳಲ್ಲಿ 214 ರನ್​ಗಳಿಸಲು ಸಾಧ್ಯವಾಯಿತು.

6 / 9
ವಿಶೇಷ ಎಂದರೆ ಇದೇ ಸಾಯಿ ಸುದರ್ಶನ್ ಅವರನ್ನು ಅತ್ಯುತ್ತಮ ಕ್ರಿಕೆಟಿಗನಾಗಿ ರೂಪಿಸಿದ ಕೀರ್ತಿ ಚೆನ್ನೈ ಸೂಪರ್ ಕಿಂಗ್ಸ್​ಗೆ ಸಲ್ಲುತ್ತದೆ. ಏಕೆಂದರೆ ತಮಿಳುನಾಡು ಮೂಲದ ಸಾಯಿ ಸುದರ್ಶನ್ 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನಡೆಸುವ ಜೂನಿಯರ್ ಸೂಪರ್ ಕಿಂಗ್ಸ್ ಲೀಗ್​ನಲ್ಲಿ ಕಾಣಿಸಿಕೊಂಡಿದ್ದರು.

7 / 9
ಅಂದು ಲೈಕಾ ಕೋವೈ ಕಿಂಗ್ಸ್​ ಪರ ಕಣಕ್ಕಿಳಿದ ಸಾಯಿ ಸುದರ್ಶನ್ ಆ ಬಳಿಕ ಭಾರತ-ಎ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಇದಾದ ಬಳಿಕ ಸಾಯಿ ಸುದರ್ಶನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಐಪಿಎಲ್​ನಲ್ಲಿ ಖರೀದಿಸಲಿಲ್ಲ ಎಂಬುದೇ ಅಚ್ಚರಿ.

8 / 9
ಆದರೆ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಚೆನ್ನೈನ ಆಟಗಾರನನ್ನು ಕೇವಲ 20 ಲಕ್ಷ ರೂ. ನೀಡಿ ಖರೀದಿಸಿತು. ಇದೀಗ 21 ವರ್ಷದ ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧವೇ ಅಬ್ಬರಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ.

9 / 9

Published On - 11:10 pm, Mon, 29 May 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ