IPL 2023: RCB ತಂಡದಲ್ಲಿರುವ ಮುಂಬೈ ಇಂಡಿಯನ್ಸ್ನ 3 ಮಾಜಿ ಆಟಗಾರರು ಯಾರು ಗೊತ್ತಾ?
IPL 2023 Kannada: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್
Updated on: May 21, 2023 | 5:58 PM

IPL 2023: ಐಪಿಎಲ್ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಗುಜರಾತ್ ಟೈಟಾನ್ಸ್, ಸಿಎಸ್ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಆಫ್ ಪ್ರವೇಶಿಸಿದೆ. ಇದೀಗ 4ನೇ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್ಸಿಬಿ ನಡುವೆ ಪೈಪೋಟಿ ಏರ್ಪಟ್ಟಿದೆ.

ಅಂದರೆ ಲೀಗ್ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾದರೆ, 70ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ ಕಣಕ್ಕಿಳಿಯಲಿದೆ. ಈ ಪಂದ್ಯಗಳಲ್ಲಿ ಆರ್ಸಿಬಿ ಹಾಗೂ ಮುಂಬೈ ಗೆದ್ದರೆ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ನೆಟ್ ರನ್ ರೇಟ್ ಕೂಡ ಗಣನೆಗೆ ಬರಲಿದೆ. ಹೀಗಾಗಿ ಎರಡೂ ತಂಡಗಳು ಭರ್ಜರಿ ಜಯವನ್ನು ಎದುರು ನೋಡಲಿದೆ.

ಇತ್ತ ರೋಚಕ ಘಟ್ಟದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್ಸಿಬಿ ತಂಡಗಳು ಕಣದಲ್ಲಿರುವ ಕುತೂಹಲ ಒಂದೆಡೆಯಾದರೆ, ಮುಂಬೈ ಇಂಡಿಯನ್ಸ್ ಪರ ಆಡಿದ ಮೂವರು ಮಾಜಿ ಆಟಗಾರರು ಆರ್ಸಿಬಿ ಪರ ಆಡುತ್ತಿದ್ದಾರೆ. ಅವರೆಂದರೆ...

1- ಗ್ಲೆನ್ ಮ್ಯಾಕ್ಸ್‌ವೆಲ್: ಆರ್ಸಿಬಿ ತಂಡದ ಸ್ಟಾರ್ ಆಟಗಾರನಾಗಿರುವ ಗ್ಲೆನ್ ಮ್ಯಾಕ್ಸ್‌ವೆಲ್ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. ಅಲ್ಲದೆ ರೋಹಿತ್ ಶರ್ಮಾ ನಾಯಕತ್ವದಲ್ಲಿ 3 ಪಂದ್ಯಗಳಲ್ಲಿ ಕಣಕ್ಕಿಳಿದು ಒಟ್ಟು 36 ರನ್ ಕಲೆಹಾಕಿದ್ದರು.

2- ದಿನೇಶ್ ಕಾರ್ತಿಕ್: ಆರ್ಸಿಬಿ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ 2012 ಹಾಗೂ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. ಅಲ್ಲದೆ ಮುಂಬೈ ಪರ ಒಟ್ಟು 19 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಡಿಕೆ ಒಟ್ಟು 510 ರನ್ಗಳಿಸಿ ಮಿಂಚಿದ್ದರು.

3- ಕರ್ಣ್ ಶರ್ಮಾ: ಆರ್ಸಿಬಿ ತಂಡದಲ್ಲಿರುವ ಲೆಗ್ ಸ್ಪಿನ್ನರ್ ಕರ್ಣ್ ಶರ್ಮಾ ಕೂಡ ಮಾಜಿ ಮುಂಬೈ ಇಂಡಿಯನ್ಸ್ ಆಟಗಾರ. 2017 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಒಟ್ಟು 9 ಪಂದ್ಯಗಳನ್ನಾಡಿರುವ ಕರ್ಣ್ ಶರ್ಮಾ 13 ವಿಕೆಟ್ ಕಬಳಿಸಿ ಮಿಂಚಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್

TV9 Kannada
Read More



