IPL 2023: CSK 5ನೇ ಬಾರಿ ಚಾಂಪಿಯನ್ಸ್…ಗಂಭೀರ್ ಹೇಳಿದ್ದೇನು?
IPL 2023 Kannada: ಐಪಿಎಲ್ ಇತಿಹಾಸದಲ್ಲೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೊರತುಪಡಿಸಿದರೆ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ.
Updated on: May 30, 2023 | 4:58 PM

IPL 2023 CSK vs GT: ಐಪಿಎಲ್ನ 16ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಗೆಲುವು ದಾಖಲಿಸಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದ ಹೆಗ್ಗಳಿಕೆಗೆ ಸಿಎಸ್ಕೆ ಪಾತ್ರವಾಗಿದೆ.

ಇದಕ್ಕೂ ಮುನ್ನ ಐಪಿಎಲ್ನಲ್ಲಿ 5 ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದು ಮುಂಬೈ ಇಂಡಿಯನ್ಸ್ ಮಾತ್ರ. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಈ ಸಾಧನೆ ಮಾಡಿರುವುದು ವಿಶೇಷ.

ಸಿಎಸ್ಕೆ ತಂಡದ ಈ ಸಾಧನೆ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಮಾಡಿರುವ ಟ್ವೀಟ್ವೊಂದು ಎಲ್ಲರ ಗಮನ ಸೆಳೆದಿದೆ. ಅದರಲ್ಲೂ ಧೋನಿ ವಿಷಯದಲ್ಲಿ ತುಸು ಸದಾ ವಿವಾದಾತ್ಮಕ ಟ್ವೀಟ್ಗಳ ಮೂಲಕ ಗಮನ ಸೆಳೆಯುವ ಗೌತಿ ಈ ಬಾರಿ ಎಲ್ಲರ ಮನಗೆದ್ದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ಒಂದು ಕಪ್ ಗೆಲ್ಲುವುದೇ ಕಷ್ಟ. ಅಂತದ್ರಲ್ಲಿ 5 ಕಪ್ ಗೆದ್ದಿದ್ದಾರೆ ಎಂದರೆ ನಂಬಲಸಾಧ್ಯ. ಚೆನ್ನೈ ಸೂಪರ್ ಕಿಂಗ್ಸ್ಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ಇದೀಗ ಗಂಭೀರ್ ಅವರ ಟ್ವೀಟ್ಗೆ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಐಪಿಎಲ್ ಇತಿಹಾಸದಲ್ಲೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೊರತುಪಡಿಸಿದರೆ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ. ಅದು ಕೂಡ ಗೌತಮ್ ಗಂಭೀರ್ ನಾಯಕತ್ವದಲ್ಲಿ ಎಂಬುದು ವಿಶೇಷ.

2012 ಹಾಗೂ 2104 ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 2 ಬಾರಿ ಚಾಂಪಿಯನ್ ಪಟ್ಟಕ್ಕೇರಿತ್ತು. ಇದಾದ ಬಳಿಕ ಕೆಕೆಆರ್ ಟ್ರೋಫಿ ಗೆದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.



















