- Kannada News Photo gallery Cricket photos IPL 2023: Glenn Maxwell Provides Fitness Update Ahead Of IPL
IPL 2023: RCB ಅಭಿಮಾನಿಗಳಿಗೆ ಬಿಗ್ ಶಾಕ್: ಫಿಟ್ನೆಸ್ ಬಗ್ಗೆ ಅಪ್ಡೇಟ್ ನೀಡಿದ ಮ್ಯಾಕ್ಸ್ವೆಲ್
IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್.
Updated on: Mar 25, 2023 | 8:30 PM

ಐಪಿಎಲ್ ಸೀಸನ್ 16 ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಮಾರ್ಚ್ 31 ರಿಂದ ಶುರುವಾಗಲಿರುವ ವರ್ಣರಂಜಿತ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. ಇನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್ಸಿಬಿ ಐಪಿಎಲ್ ಅಭಿಯಾನ ಆರಂಭಿಸಲಿದೆ. ಆದರೆ...

ಆದರೆ ಈ ಪಂದ್ಯದಲ್ಲಿ ಆರ್ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಕಣಕ್ಕಿಳಿಯುತ್ತಾರಾ ಇಲ್ಲವಾ? ಎಂಬುದೇ ದೊಡ್ಡ ಪ್ರಶ್ನೆ. ಏಕೆಂದರೆ ಇತ್ತೀಚೆಗೆ ಮುಕ್ತಾಯಗೊಂಡ ಟೀಮ್ ಇಂಡಿಯಾ ವಿರುದ್ಧದ 3 ಏಕದಿನ ಪಂದ್ಯಗಳಲ್ಲಿ ಮ್ಯಾಕ್ಸ್ವೆಲ್ ಕೇವಲ 1 ಪಂದ್ಯವಾಡಿದ್ದರು. ಫಿಟ್ನೆಸ್ ಸಮಸ್ಯೆಯ ಕಾರಣ ಅವರು 2ನೇ ಮತ್ತು 3ನೇ ಏಕದಿನ ಪಂದ್ಯವಾಡಿರಲಿಲ್ಲ.

ಇದೀಗ ಆರ್ಸಿಬಿ ಕ್ಯಾಂಪ್ ಸೇರಿಕೊಂಡಿರುವ ಗ್ಲೆನ್ ಮ್ಯಾಕ್ಸ್ವೆಲ್ ತಮ್ಮ ಫಿಟ್ನೆಸ್ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಮ್ಮ ಗಾಯದ ಬಗ್ಗೆ ಮಾತನಾಡಿರುವ ಆಸೀಸ್ ಆಲ್ರೌಂಡರ್, ತಾನು ಸಂಪೂರ್ಣ ಫಿಟ್ ಆಗಿಲ್ಲ ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಎಡಗಾಲಿನ ಗಾಯ ವಾಸಿಯಾಗಿದ್ದರೂ, ಸಂಪೂರ್ಣ ಫಿಟ್ನೆಸ್ಗೆ ಮರಳಲು ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ. ಗಾಯದಿಂದ ಚೇತರಿಸಿಕೊಂಡ ಬಳಿಕ ಕಣಕ್ಕಿಳಿಯುವ ಭರವಸೆ ಇದೆ ಎಂದು ಗ್ಲೆನ್ ಮ್ಯಾಕ್ಸ್ವೆಲ್ ತಿಳಿಸಿದ್ದಾರೆ.

ಇದೀಗ ಗ್ಲೆನ್ ಮ್ಯಾಕ್ಸ್ವೆಲ್ ನೀಡಿರುವ ಹೇಳಿಕೆಯಂತೆ ಅವರು ಸಂಪೂರ್ಣ ಫಿಟ್ನೆಸ್ ಹೊಂದಿಲ್ಲ. ಇದಾಗ್ಯೂ ಅವರು ಈ ಬಾರಿ ಕೂಡ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ. ಆದರೆ ಅವರು ಕೆಲ ಪಂದ್ಯಗಳನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯನ್ನೂ ಕೂಡ ತಳ್ಳಿ ಹಾಕುವಂತಿಲ್ಲ.

ಏಕೆಂದರೆ ಅವರು ಸಂಪೂರ್ಣ ಫಿಟ್ನೆಸ್ ಹೊಂದಿದ್ದರೆ ಭಾರತದ ವಿರುದ್ಧ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದರು. ಆದರೀಗ ಸಂಪೂರ್ಣ ಫಿಟ್ನೆಸ್ ಹೊಂದಿಲ್ಲದಿದ್ದರೂ ಆರ್ಸಿಬಿ ಕ್ಯಾಂಪ್ ಸೇರಿಕೊಂಡಿರುವ ಗ್ಲೆನ್ ಮ್ಯಾಕ್ಸ್ವೆಲ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡುವ ವಿಶ್ವಾಸದಲ್ಲಿದ್ದಾರೆ.

ಒಟ್ಟಿನಲ್ಲಿ ಗಾಯ ವಾಸಿಯಾಗಿದ್ದರೂ, ಆಸ್ಟ್ರೇಲಿಯಾ ಆಟಗಾರ ಅದರ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಮ್ಯಾಕ್ಸ್ವೆಲ್ ಮುಖ್ಯ ಪಂದ್ಯಗಳಲ್ಲಿ ಕಣಕ್ಕಿಳಿದು ಕೆಲ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ. ಅದರಂತೆ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್ವೆಲ್.









