Sign In

By signing in or creating an account, you agree with Associated Broadcasting Company's Terms & Conditions and Privacy Policy.

Rinku Singh: ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ರೋಚಕ ಜಯ ತಂದುಕೊಟ್ಟ ರಿಂಕು ಸಿಂಗ್

IPL 2023 GT vs KKR: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: Apr 09, 2023 | 7:51 PM

IPL 2023 GT vs KKR: ಒಂದೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್...ಅದೇ ಪಂದ್ಯದಲ್ಲಿ 5 ಬ್ಯಾಕ್ ಟು ಬ್ಯಾಕ್ ಸಿಕ್ಸ್. ಹೌದು, ಇಂತಹದೊಂದು ರೋಚಕ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಿದೆ. ಈ ಪಂದ್ಯದ ಹೀರೋ ಕೆಕೆಆರ್ ತಂಡದ ಯುವ ಬ್ಯಾಟರ್ ರಿಂಕು ಸಿಂಗ್.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್​ ತಂಡದ ಪರ ವೆಂಕಟೇಶ್ ಅಯ್ಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

2 / 7
ಕೇವಲ 40 ಎಸೆತಗಳನ್ನು ಎದುರಿಸಿದ ವೆಂಕಟೇಶ್ ಅಯ್ಯರ್ 5 ಸಿಕ್ಸ್ ಹಾಗು 8 ಫೋರ್​ನೊಂದಿಗೆ 83 ರನ್​ಗಳಿಸಿ ಔಟಾದರು. ಈ ಹಂತದಲ್ಲಿ ಕೆಕೆಆರ್ ತಂಡಕ್ಕೆ ಗೆಲ್ಲಲು 4 ಓವರ್​ಗಳಲ್ಲಿ 50 ರನ್​ಗಳ ಗುರಿಯಿತ್ತು. ಆದರೆ 17ನೇ ಓವರ್ ಎಸೆದ ರಶೀದ್ ಖಾನ್ ಮೊದಲ ಎಸೆತದಲ್ಲೇ ಆ್ಯಂಡ್ರೆ ರಸೆಲ್ (1) ಅವರ ವಿಕೆಟ್ ಪಡೆದರು. ಇನ್ನು ಮರು ಎಸೆತದಲ್ಲೇ ಸುನಿಲ್ ನರೈಲ್ (0) ಕ್ಯಾಚ್ ನೀಡಿ ನಿರ್ಗಮಿಸಿದರು.

3 / 7
ಆ ಬಳಿಕ ಬಂದ ಶಾರ್ದೂಲ್ ಠಾಕೂರ್ (0) ಅವರನ್ನು ಎಲ್​ಬಿ ಬಲೆಗೆ ಬೀಳಿಸುವ ಮೂಲಕ ರಶೀದ್ ಖಾನ್ ಹ್ಯಾಟ್ರಿಕ್ ಸಾಧನೆ ಮಾಡಿದರು. ಇದರೊಂದಿಗೆ ಇಡೀ ಪಂದ್ಯದ ಚಿತ್ರಣ ಬದಲಾಯ್ತು. ಗೆಲ್ಲಬೇಕಿದ್ದ ಪಂದ್ಯದಲ್ಲಿ ಕೆಕೆಆರ್ ತಂಡವು ಸೋಲಿನತ್ತ ಮುಖಮಾಡಿತು.

4 / 7
ಕೊನೆಯ ಓವರ್​ನಲ್ಲಿ ಕೆಕೆಆರ್ ತಂಡದ ಮುಂದೆ 29 ರನ್​ಗಳ ಕಠಿಣ ಗುರಿಯಿತ್ತು. ಹಂಗಾಮಿ ನಾಯಕ ರಶೀದ್ ಖಾನ್ ಯಶ್ ದಯಾಳ್​ ಕೈಗೆ ಚೆಂಡು ನೀಡಿದರು. ಅತ್ತ ಸ್ಟ್ರೈಕ್​ನಲ್ಲಿದ್ದ ಉಮೇಶ್ ಯಾದವ್ ಸಿಂಗಲ್ ತೆಗೆದರು. ಆ ಬಳಿಕ ನಡೆದಿದೆಲ್ಲವೂ ಇತಿಹಾಸ.

5 / 7
ಸ್ಟ್ರೈಕ್​ಗೆ ಬಂದ ರಿಂಕು ಸಿಂಗ್ ಬ್ಯಾಕ್ ಟು ಬ್ಯಾಕ್ 4 ಸಿಕ್ಸ್ ಸಿಡಿಸಿದರು. ಪರಿಣಾಮ ಕೊನೆಯ ಎಸೆತದಲ್ಲಿ 4 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಸ್ಟ್ರೈಟ್ ಹಿಟ್​ ಸಿಕ್ಸ್​ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

6 / 7
ರಣರೋಚಕ ಪಂದ್ಯದಲ್ಲಿ ಕೇವಲ 21 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 1 ಫೋರ್​​ನೊಂದಿಗೆ 48 ರನ್ ಬಾರಿಸಿದ ರಿಂಕು ಸಿಂಗ್ ಗೆಲುವಿನ ರುವಾರಿ ಎನಿಸಿಕೊಂಡರು. ಅಲ್ಲದೆ ಐಪಿಎಲ್​ನ ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಗೆಲುವು ತಂದುಕೊಟ್ಟ ವಿಶೇಷ ದಾಖಲೆಯನ್ನು ಕೂಡ ಬರೆದರು.

7 / 7
Follow us
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!

ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ

ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು

ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?

ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ

ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ

ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ

‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ

ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ