- Kannada News Photo gallery Cricket photos IPL 2023: Gujarat Titans's David Miller Will Not Play In IPL's Opening Match
IPL 2023: ಮೊದಲ ಪಂದ್ಯಕ್ಕೆ ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ಆಟಗಾರ ಅಲಭ್ಯ
IPL 2023 Kannada: ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ.
Updated on:Mar 21, 2023 | 4:08 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದೆ. ಈ ಬಾರಿಯ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಲಿದೆ. ಅಹಮದಾಬಾದ್ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಇದೀಗ ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ಆಟಗಾರ ಅಲಭ್ಯರಾಗುವುದು ಖಚಿತವಾಗಿದೆ.

ಹೌದು, ಗುಜರಾತ್ ಟೈಟಾನ್ಸ್ ತಂಡದ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿರುವ ಡೇವಿಡ್ ಮಿಲ್ಲರ್ ಐಪಿಎಲ್ನ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಸೌತ್ ಆಫ್ರಿಕಾ ತಂಡವು ನೆದರ್ಲ್ಯಾಂಡ್ಸ್ ವಿರುದ್ಧ 2 ಏಕದಿನ ಪಂದ್ಯಗಳನ್ನು ಆಡಲಿದ್ದು, ಈ ಸರಣಿಯ ಕಾರಣ ಮಿಲ್ಲರ್ ಐಪಿಎಲ್ಗೆ ತಡವಾಗಿ ಆಗಮಿಸಲಿದ್ದಾರೆ.

ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯವು ಸೌತ್ ಆಫ್ರಿಕಾ ಪಾಲಿಗೆ ತುಂಬಾ ಮಹತ್ವದ್ದು. ಮುಂಬರುವ ಏಕದಿನ ವಿಶ್ವಕಪ್ಗೆ ನೇರ ಅರ್ಹತೆ ಪಡೆಯಲು ಈ ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡವು ಗೆಲ್ಲಲೇಬೇಕಿದೆ. ಇದೇ ಕಾರಣದಿಂದಾಗಿ ಡೇವಿಡ್ ಮಿಲ್ಲರ್ ಕೂಡ ತಮ್ಮ ರಾಷ್ಟ್ರೀಯ ತಂಡದ ಪರ ಆಡಲು ನಿರ್ಧರಿಸಿದ್ದಾರೆ.

ಇತ್ತ ಈ ಎರಡು ಏಕದಿನ ಪಂದ್ಯಗಳು ಮಾರ್ಚ್ 31 ಹಾಗೂ ಏಪ್ರಿಲ್ 2 ರಂದು ನಡೆಯಲಿದೆ. ಇದರಿಂದ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಇನ್ನು ಗುಜರಾತ್ ಟೈಟಾನ್ಸ್ ತಂಡವು ತನ್ನ 2ನೇ ಪಂದ್ಯವನ್ನು ಏಪ್ರಿಲ್ 4 ರಂದು ಆಡಲಿದ್ದು, ಈ ವೇಳೆಗೆ ಡೇವಿಡ್ ಮಿಲ್ಲರ್ ಆಗಮಿಸಿದರೆ ಮಾತ್ರ ಆ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

ಇನ್ನು ಡೇವಿಡ್ ಮಿಲ್ಲರ್ ಅವರಲ್ಲದೇ, ಸೌತ್ ಆಫ್ರಿಕಾ ತಂಡದ ಇನ್ನು ಕೆಲ ಆಟಗಾರರು ಐಪಿಎಲ್ನ ಕೆಲ ಪಂದ್ಯಗಳಿಗೆ ಗೈರಾಗಲಿದ್ದಾರೆ. ಮುಖ್ಯವಾಗಿ ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್, ವೇಗಿ ಮಾರ್ಕೊ ಯಾನ್ಸನ್ ಮತ್ತು ಹೆನ್ರಿಕ್ ಕ್ಲಾಸೆನ್ ಕೂಡ ನೆದರ್ಲ್ಯಾಂಡ್ಸ್ ವಿರುದ್ಧ ಏಕದಿನ ಸರಣಿ ಆಡಲಿದೆ. ಹೀಗಾಗಿ ಈ ಎಲ್ಲಾ ಆಟಗಾರರು ಏಪ್ರಿಲ್ 3 ರ ಬಳಿಕವಷ್ಟೇ ಐಪಿಎಲ್ಗೆ ಲಭ್ಯರಿರಲಿದ್ದಾರೆ.

ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್ , ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶ್ ಲಿಟಲ್, ಉರ್ವಿಲ್ ಪಟೇಲ್, ಶಿವಂ ಮಾವಿ, ಕೆಎಸ್ ಭರತ್, ಓಡಿಯನ್ ಸ್ಮಿತ್ , ಕೇನ್ ವಿಲಿಯಮ್ಸನ್.
Published On - 3:59 pm, Tue, 21 March 23




