IPL 2023: ಮೊದಲ ಪಂದ್ಯಕ್ಕೆ ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ಆಟಗಾರ ಅಲಭ್ಯ

IPL 2023 Kannada: ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ.

Digi Tech Desk
| Updated By: ಝಾಹಿರ್ ಯೂಸುಫ್

Updated on:Mar 21, 2023 | 4:08 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದೆ. ಈ ಬಾರಿಯ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಇದೀಗ ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ಆಟಗಾರ ಅಲಭ್ಯರಾಗುವುದು ಖಚಿತವಾಗಿದೆ.

1 / 6
ಹೌದು, ಗುಜರಾತ್ ಟೈಟಾನ್ಸ್ ತಂಡದ ಮ್ಯಾಚ್​ ಫಿನಿಶರ್ ಆಗಿ ಗುರುತಿಸಿಕೊಂಡಿರುವ ಡೇವಿಡ್ ಮಿಲ್ಲರ್ ಐಪಿಎಲ್​ನ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಸೌತ್ ಆಫ್ರಿಕಾ ತಂಡವು ನೆದರ್​ಲ್ಯಾಂಡ್ಸ್​ ವಿರುದ್ಧ 2 ಏಕದಿನ ಪಂದ್ಯಗಳನ್ನು ಆಡಲಿದ್ದು, ಈ ಸರಣಿಯ ಕಾರಣ ಮಿಲ್ಲರ್ ಐಪಿಎಲ್​ಗೆ ತಡವಾಗಿ ಆಗಮಿಸಲಿದ್ದಾರೆ.

2 / 6
ನೆದರ್​ಲ್ಯಾಂಡ್ಸ್​ ವಿರುದ್ಧದ ಪಂದ್ಯವು ಸೌತ್ ಆಫ್ರಿಕಾ ಪಾಲಿಗೆ ತುಂಬಾ ಮಹತ್ವದ್ದು. ಮುಂಬರುವ ಏಕದಿನ ವಿಶ್ವಕಪ್​ಗೆ ನೇರ ಅರ್ಹತೆ ಪಡೆಯಲು ಈ ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡವು ಗೆಲ್ಲಲೇಬೇಕಿದೆ. ಇದೇ ಕಾರಣದಿಂದಾಗಿ ಡೇವಿಡ್ ಮಿಲ್ಲರ್ ಕೂಡ ತಮ್ಮ ರಾಷ್ಟ್ರೀಯ ತಂಡದ ಪರ ಆಡಲು ನಿರ್ಧರಿಸಿದ್ದಾರೆ.

3 / 6
ಇತ್ತ ಈ ಎರಡು ಏಕದಿನ ಪಂದ್ಯಗಳು ಮಾರ್ಚ್ 31 ಹಾಗೂ ಏಪ್ರಿಲ್ 2 ರಂದು ನಡೆಯಲಿದೆ. ಇದರಿಂದ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಇನ್ನು ಗುಜರಾತ್ ಟೈಟಾನ್ಸ್ ತಂಡವು ತನ್ನ 2ನೇ ಪಂದ್ಯವನ್ನು ಏಪ್ರಿಲ್ 4 ರಂದು ಆಡಲಿದ್ದು, ಈ ವೇಳೆಗೆ ಡೇವಿಡ್ ಮಿಲ್ಲರ್ ಆಗಮಿಸಿದರೆ ಮಾತ್ರ ಆ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

4 / 6
ಇನ್ನು ಡೇವಿಡ್ ಮಿಲ್ಲರ್ ಅವರಲ್ಲದೇ, ಸೌತ್ ಆಫ್ರಿಕಾ ತಂಡದ ಇನ್ನು ಕೆಲ ಆಟಗಾರರು ಐಪಿಎಲ್​ನ ಕೆಲ ಪಂದ್ಯಗಳಿಗೆ ಗೈರಾಗಲಿದ್ದಾರೆ. ಮುಖ್ಯವಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್, ವೇಗಿ ಮಾರ್ಕೊ ಯಾನ್ಸನ್ ಮತ್ತು ಹೆನ್ರಿಕ್ ಕ್ಲಾಸೆನ್ ಕೂಡ ನೆದರ್​ಲ್ಯಾಂಡ್ಸ್ ವಿರುದ್ಧ ಏಕದಿನ ಸರಣಿ ಆಡಲಿದೆ. ಹೀಗಾಗಿ ಈ ಎಲ್ಲಾ ಆಟಗಾರರು ಏಪ್ರಿಲ್ 3 ರ ಬಳಿಕವಷ್ಟೇ ಐಪಿಎಲ್​ಗೆ ಲಭ್ಯರಿರಲಿದ್ದಾರೆ.

5 / 6
ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್ , ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶ್ ಲಿಟಲ್, ಉರ್ವಿಲ್ ಪಟೇಲ್, ಶಿವಂ ಮಾವಿ, ಕೆಎಸ್ ಭರತ್, ಓಡಿಯನ್ ಸ್ಮಿತ್ , ಕೇನ್ ವಿಲಿಯಮ್ಸನ್.

6 / 6

Published On - 3:59 pm, Tue, 21 March 23

Follow us
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್