AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗುಜರಾತ್ ಟೈಟಾನ್ಸ್ ತಂಡಕ್ಕೂ ಎದುರಾಯ್ತು ಗಾಯದ ಸಮಸ್ಯೆ..!

IPL 2023 Kannada: ಐಪಿಎಲ್ ಸೀಸನ್​ 16 ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಗುಜರಾತ್ ಟೈಟಾನ್ಸ್ ತಂಡದ ಯುವ ವೇಗಿ ಕೂಡ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 25, 2023 | 9:23 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಆಟಗಾರರಲ್ಲಿ ಗಾಯದ ಸಮಸ್ಯೆಗಳು ಎದುರಾಗುತ್ತಿದೆ. ಈಗಾಗಲೇ ಗಾಯದ ಕಾರಣ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

1 / 7
ಇನ್ನು ಗಾಯದ ಕಾರಣ ರಾಜಸ್ಥಾನ್ ರಾಯಲ್ಸ್​ ವೇಗಿ ಪ್ರಸಿದ್ಧ್ ಕೃಷ್ಣ ಕೂಡ ಐಪಿಎಲ್ ಸೀಸನ್​ 16 ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಗುಜರಾತ್ ಟೈಟಾನ್ಸ್ ತಂಡದ ಯುವ ವೇಗಿ ಕೂಡ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ.

2 / 7
ಹೌದು, ಗುಜರಾತ್ ಟೈಟಾನ್ಸ್ ತಂಡವು 4.4 ಕೋಟಿಗೆ ಖರೀದಿಸಿದ ಐರ್ಲೆಂಡ್ ತಂಡದ ಯುವ ವೇಗಿ ಜೋಶ್ ಲಿಟಲ್ ಮಂಡಿರಜ್ಜು ಬಿಗಿತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹೊರಗುಳಿದಿದ್ದಾರೆ.

3 / 7
ಇದೀಗ ಪಿಎಸ್​ಎಲ್​ನಿಂದ ಜೋಶ್ ಲಿಟಲ್ ಹೊರಗುಳಿದಿರುವುದು ಗುಜರಾತ್ ಟೈಟಾನ್ಸ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಇದಾಗ್ಯೂ ಸದ್ಯ ವಿಶ್ರಾಂತಿಯಲ್ಲಿರುವ ಐರಿಷ್ ಆಟಗಾರ, ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

4 / 7
ಐರ್ಲೆಂಡ್ ಮತ್ತು ಬಾಂಗ್ಲಾದೇಶ ನಡುವಿನ ಏಕದಿನ ಸರಣಿಯು ಮಾರ್ಚ್ 18 ರಿಂದ ಶುರುವಾಗಲಿದೆ. ಈ ಸರಣಿಯಿಂದ ಗಾಯದ ಕಾರಣ ಜೋಶ್ ಹೊರಗುಳಿದರೆ, ಐಪಿಎಲ್​ ಅನ್ನು ಕೂಡ ತಪ್ಪಿಸಿಕೊಳ್ಳುವುದು ಖಚಿತ. ಹೀಗಾಗಿ ಒಂದು ತಿಂಗಳಲ್ಲಿ ಜೋಶ್ ಲಿಟಲ್ ಫಿಟ್​ನೆಸ್​ನತ್ತ ಹೆಚ್ಚಿನ ಗಮನಹರಿಸಲಿದ್ದಾರೆ.

5 / 7
ಐರ್ಲೆಂಡ್ ಪರ 53 ಟಿ20 ಪಂದ್ಯಗಳನ್ನಾಡಿರುವ ಜೋಶ್ ಲಿಟಲ್ ಒಟ್ಟು 62 ವಿಕೆಟ್ ಪಡೆದು ಮಿಂಚಿದ್ದಾರೆ. ಹಾಗೆಯೇ 25 ಏಕದಿನ ಪಂದ್ಯಗಳಿಂದ 38 ವಿಕೆಟ್ ಕಬಳಿಸಿದ್ದಾರೆ. ಇದೇ ಕಾರಣದಿಂದಾಗಿ ಗುಜರಾತ್ ಟೈಟಾನ್ಸ್ ತಂಡವು ಈ ಬಾರಿ 4.4 ಕೋಟಿ ರೂ. ನೀಡಿ ಜೋಶ್ ಲಿಟಲ್ ಅವರನ್ನು ಖರೀದಿಸಿತ್ತು. ಇದೀಗ ಗಾಯದ ಸಮಸ್ಯೆ ಎದುರಾಗಿರುವುದು ಫ್ರಾಂಚೈಸಿಯ ಚಿಂತೆಯನ್ನು ಹೆಚ್ಚಿಸಿದೆ.

6 / 7
ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್ , ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶ್ ಲಿಟಲ್, ಉರ್ವಿಲ್ ಪಟೇಲ್, ಶಿವಂ ಮಾವಿ, ಕೆಎಸ್ ಭರತ್, ಓಡಿಯನ್ ಸ್ಮಿತ್ , ಕೇನ್ ವಿಲಿಯಮ್ಸನ್.

7 / 7