- Kannada News Photo gallery Cricket photos IPL 2023: Harshal Patel perform in RCB's unbox event at Chinnaswamy
IPL 2023: ಗಿಟಾರ್ ಹಿಡಿದು ಮಿಂಚಿದ RCB ಆಟಗಾರ
IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್.
Updated on: Mar 26, 2023 | 6:31 PM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್ಬಾಕ್ಸ್ ಕಾರ್ಯಕ್ರಮ ಆಯೋಜಿಸಿದೆ. ಸಂಗೀತ ರಸಮಂಜರಿಯೊಂದಿಗೆ ಶುರುವಾದ ಆರ್ಸಿಬಿಯ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಎಲ್ಲರ ಗಮನ ಸೆಳೆದಿದ್ದರು ಹರ್ಷಲ್ ಪಟೇಲ್.

ಏಕೆಂದರೆ RCB ವೇಗಿ ಹರ್ಷಲ್ ಪಟೇಲ್ ಖ್ಯಾತ ಬ್ಯಾಂಡ್ ಟೀಮ್ ಥರ್ಮಲ್ ಅ್ಯಂಡ್ ಎ ಕ್ವಾರ್ಟರ್ ತಂಡದ ಜೊತೆ ಕಾರ್ಯಕ್ರಮದ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಗಿಟಾರ್ ಜೊತೆ ಗಾನ ಬಜಾನ ತಂಡದೊಂದಿಗೆ ಹಾಡುತ್ತಾ ಆರ್ಸಿಬಿ ಅಭಿಮಾನಿಗಳನ್ನು ರಂಜಿಸಿದರು. ಇದರೊಂದಿಗೆ ಹರ್ಷಲ್ ಪಟೇಲ್ ಅವರ ಬಹುಮುಖ ಪ್ರತಿಭೆ ಕೂಡ ಅನಾವರಣಗೊಂಡಿದೆ.

ಇನ್ನು ಈ ಕಾರ್ಯಕ್ರಮದಲ್ಲಿ ಪ್ರಸ್ತುತ ಆರ್ಸಿಬಿ ಆಟಗಾರರು ಹಾಗೂ ಮಾಜಿ ಆರ್ಸಿಬಿ ಪ್ಲೇಯರ್ಸ್ಗಳಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಕಾಣಿಸಿಕೊಂಡಿದ್ದಾರೆ.

ಈ ಕಾರ್ಯಕ್ರಮದ ಮೂಲಕ ಆರ್ಸಿಬಿ ಫ್ರಾಂಚೈಸಿಯು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಲಿದೆ. ಅಷ್ಟೇ ಅಲ್ಲದೆ ಆರ್ಸಿಬಿ ತಂಡದ ಮಾಜಿ ಆಟಗಾರರಾದ ಕ್ರಿಸ್ ಗೇಲ್ ಹಾಗೂ ಎಬಿಡಿ ಅವರಿಗೆ ಹಾಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಲಿದೆ.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್ವೆಲ್, ರಜತ್ ಪಾಟಿದಾರ್ (ಗಾಯಾಳು).
























