IPL 2023: ಹೀಗಾದ್ರೆ RCB ಪ್ಲೇಆಫ್ ಪ್ರವೇಶಿಸುವುದು ಖಚಿತ

| Updated By: ಝಾಹಿರ್ ಯೂಸುಫ್

Updated on: May 10, 2023 | 8:29 PM

IPL 2023 RCB Playoffs Chances: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಜಯ ಸಾಧಿಸಿದರೆ, ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ.

1 / 10
IPL 2023 RCB playoffs: ಐಪಿಎಲ್ ಸೀಸನ್ 16 ರಲ್ಲಿ 11 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು ಕೇವಲ 5 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. ಇದರೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯು ಮತ್ತಷ್ಟು ಕಠಿಣವಾಗಿದೆ.

2 / 10
ಏಕೆಂದರೆ ಇನ್ನು ಆರ್​ಸಿಬಿಗೆ ಉಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಳ್ಳಲಾಗುವುದಿಲ್ಲ. ಬದಲಾಗಿ ಪ್ರಸ್ತುತ ಅಂಕಪಟ್ಟಿಯಲ್ಲಿ  ಮೂರನೇ ಹಾಗೂ ನಾಲ್ಕನೇ ಸ್ಥಾನದಲ್ಲಿರುವ ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶಗಳನ್ನು ಎದುರು ನೋಡಬೇಕಾಗುತ್ತದೆ.

3 / 10
ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಮೂರನೇ ಸ್ಥಾನದಲ್ಲಿದೆ. ಮುಂಬೈಗೆ ಇನ್ನುಳಿದಿರುವುದು 3 ಪಂದ್ಯಗಳು. ಈ ಮೂರು ಪಂದ್ಯಗಳಲ್ಲಿ ಮುಂಬೈ ವಿರುದ್ಧ ಗುಜರಾತ್ ಟೈಟಾನ್ಸ್ ಹಾಗೂ ಎಸ್​ಆರ್​ಹೆಚ್​ ತಂಡಗಳು ಗೆಲ್ಲಬೇಕು. ಇದರಿಂದ 3ನೇ ಸ್ಥಾನದಿಂದ 14 ಪಾಯಿಂಟ್ಸ್​ನೊಂದಿಗೆ ಮುಂಬೈ ಇಂಡಿಯನ್ಸ್ ಕುಸಿತಕ್ಕೊಳಗಾಗಲಿದೆ.

4 / 10
ಹಾಗೆಯೇ ನಾಲ್ಕನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲಬೇಕು. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ 3 ಪಂದ್ಯಗಳಲ್ಲಿ 1 ರಲ್ಲಿ ಸೋತರೂ ಆರ್​ಸಿಬಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಅವಕಾಶ ಇರಲಿದೆ.

5 / 10
ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ರಸ್ತುತ ಪಾಯಿಂಟ್ಸ್​ 11. ಇನ್ನು ಮೂರು ಪಂದ್ಯಗಳಲ್ಲಿ 2 ಜಯ ಸಾಧಿಸಿದರೂ ಅದು 15 ಅಂಕ ಆಗಲಿದೆ. ಇದರಿಂದ 16 ಪಾಯಿಂಟ್ಸ್ ಕಲೆಹಾಕುವ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ ಮೇಲೇರಬಹುದು.

6 / 10
ಇನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಜಯ ಸಾಧಿಸಿದರೆ, ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ 11 ಪಂದ್ಯವಾಡಿರುವ ಆರ್​ಆರ್​ ಇದುವರೆಗೆ ಕಲೆಹಾಕಿರುವುದು 10 ಪಾಯಿಂಟ್ಸ್ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಆರ್​ಸಿಬಿ ವಿರುದ್ಧ ಸೋತರೆ ಅದು ಫಾಫ್ ಡುಪ್ಲೆಸಿಸ್ ಪಡೆಗೆ ಪ್ಲಸ್ ಪಾಯಿಂಟ್ ಆಗಲಿದೆ.

7 / 10
ಏಕೆಂದರೆ ಮುಂದಿನ ಪಂದ್ಯದಲ್ಲಿ ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಒಂದು ತಂಡ ಪ್ಲೇಆಫ್ ರೇಸ್​ನಿಂದ ಹೊರಬೀಳುವ ಸಾಧ್ಯತೆಯಿದೆ. ಇಲ್ಲಿ ಕೆಕೆಆರ್ ವಿರುದ್ದ ರಾಜಸ್ಥಾನ್ ರಾಯಲ್ಸ್ ಗೆಲ್ಲಬೇಕು. ಹಾಗೆಯೇ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿದರೆ, ಅತ್ತ ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಉಳಿದ 2 ಪಂದ್ಯಗಳನ್ನು ಗೆದ್ದರೂ 14 ಪಾಯಿಂಟ್ಸ್​ಗಳಿಸಲಷ್ಟೇ ಸಾಧ್ಯವಾಗಲಿದೆ.

8 / 10
ಇತ್ತ ಮುಂದಿನ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ 16 ಅಂಕಗಳನ್ನು ಪಡೆದರೆ ಆರ್​ಸಿಬಿ ತಂಡವು ಪ್ಲೇಆಫ್​ ಪ್ರವೇಶಿಸಲು ಅವಕಾಶ ದೊರೆಯಲಿದೆ. ಅದಕ್ಕೂ ಮುನ್ನ ಅಂಕ ಪಟ್ಟಿಯಲ್ಲಿ 3ನೇ ಅಥವಾ 4ನೇ ಸ್ಥಾನ ಪಡೆಯುವ ತಂಡಗಳು 16 ಅಥವಾ ಅದಕ್ಕಿಂತ ಅಂಕಗಳನ್ನು ಪಡೆದಿರಬೇಕು.

9 / 10
ಇಲ್ಲಿ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡವು 16 ಅಂಕ ಪಡೆದಿದ್ದರೆ ಆರ್​ಸಿಬಿ ತಂಡಕ್ಕೆ ಉತ್ತಮ ಅವಕಾಶ ದೊರೆಯಲಿದೆ. ಏಕೆಂದರೆ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಆಡಲಿದೆ. ಈ ವೇಳೆ ನೆಟ್​ ರನ್​ ರೇಟ್ ಲೆಕ್ಕಚಾರದೊಂದಿಗೆ ಜಯ ಸಾಧಿಸಿ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

10 / 10
ಒಟ್ಟಿನಲ್ಲಿ ಈ ಮೇಲೆ ತಿಳಿಸಲಾದ ಲೆಕ್ಕಚಾರದಂತೆ ನಡೆದರೆ ಈ ಬಾರಿ ಆರ್​ಸಿಬಿ ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದೇ ಹೇಳಬಹುದು.