IPL 2023: RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ತಂಡಕ್ಕೆ ಮ್ಯಾಚ್ ವಿನ್ನರ್ ಎಂಟ್ರಿ..!
IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್.
Updated on: Apr 29, 2023 | 8:29 PM

IPL 2023: ಐಪಿಎಲ್ ಸೀಸನ್ 16 ರಲ್ಲಿ ಆಡಿರುವ 8 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ತನ್ನ 9ನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಮೇ 1 ರಂದು ಲಕ್ನೋದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಈ ಮಹತ್ವದ ಪಂದ್ಯದಲ್ಲಿ ಆರ್ಸಿಬಿ ಪರ ಪ್ರಮುಖ ವೇಗಿ ಜೋಶ್ ಹ್ಯಾಝಲ್ವುಡ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಇದಕ್ಕೂ ಮುನ್ನ ನಡೆದ 8 ಪಂದ್ಯಗಳಲ್ಲಿ ಹ್ಯಾಝಲ್ವುಡ್ ಕಣಕ್ಕಿಳಿದಿರಲಿಲ್ಲ.

ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿ ವೇಳೆ ಮೊಣಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ಹ್ಯಾಝಲ್ವುಡ್ ಇಡೀ ಸರಣಿಯಿಂದ ಹೊರಗುಳಿದಿದ್ದರು. ಅಲ್ಲದೆ ಇದೇ ಕಾರಣದಿಂದ ಐಪಿಎಲ್ನ ಮೊದಲಾರ್ಧದಲ್ಲಿ ಆಡಿರಲಿಲ್ಲ. ಇದೀಗ ಅವರು ಸಂಪೂರ್ಣ ಫಿಟ್ ಆಗಿದ್ದಾರೆ.

ಅಲ್ಲದೆ ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಅಭ್ಯಾಸವನ್ನೂ ಆರಂಭಿಸಿದ್ದರು. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಕಡೆಯಿಂದ ಅನುಮತಿ ಸಿಗದ ಕಾರಣ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ ಹ್ಯಾಝಲ್ವುಡ್ ಅವರ ಫಿಟ್ನೆಸ್ ಕುರಿತಾದ ಮಹತ್ವದ ಅಪ್ಡೇಟ್ ನೀಡಿದೆ.

ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಪ್ರಕಟಿಸಿರುವ ಹೊಸ ವರದಿಯಲ್ಲಿ, ಜೋಶ್ ಹ್ಯಾಝಲ್ವುಡ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದ್ದಾರೆ ಎಂದು ತಿಳಿಸಿದೆ. ಇದರೊಂದಿಗೆ ಮುಂದಿನ ಪಂದ್ಯದಲ್ಲಿ ಜೋಶ್ ಹ್ಯಾಝಲ್ವುಡ್ ಆಡುವುದು ಕೂಡ ಖಚಿತವಾದಂತಾಗಿದೆ.

ಜೋಶ್ ಹ್ಯಾಝಲ್ವುಡ್ ಆಗಮನದೊಂದಿಗೆ ಆರ್ಸಿಬಿ ತಂಡದ ಬೌಲಿಂಗ್ ಲೈನಪ್ ಬಲಿಷ್ಠವಾಗಲಿದೆ. ಏಕೆಂದರೆ ಕಳೆದ ಸೀಸನ್ನಲ್ಲಿ ಆರ್ಸಿಬಿ ಪರ ಅತಿ ಹೆಚ್ಚು ವಿಕೆಟ್ ಪಡೆದ ವೇಗಿ ಜೋಶ್ ಹ್ಯಾಝಲ್ವುಡ್. 12 ಪಂದ್ಯಗಳಿಂದ ಒಟ್ಟು 20 ವಿಕೆಟ್ ಪಡೆಯುವ ಮೂಲಕ ಆಸೀಸ್ ಮಿಂಚಿದ್ದರು.

ಇದೀಗ ನಿರ್ಣಾಯಕವಾಗಿರುವ ದ್ವಿತಿಯಾರ್ಧದಲ್ಲಿ 2ನೇ ಪಂದ್ಯದಲ್ಲಿ ಜೋಶ್ ಹ್ಯಾಝಲ್ವುಡ್ ಕಣಕ್ಕಿಳಿಯುತ್ತಿರುವುದು ಆರ್ಸಿಬಿ ತಂಡದ ಬಲವನ್ನು ಹೆಚ್ಚಿಸಲಿದೆ.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.



















