IPL 2023: RCB ತಂಡಕ್ಕೆ ಸ್ಟಾರ್ ಆಟಗಾರ ಎಂಟ್ರಿ: ಹೊಸ ಚಿಂತೆ ಶುರು..!

| Updated By: ಝಾಹಿರ್ ಯೂಸುಫ್

Updated on: Apr 16, 2023 | 7:22 PM

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್.

1 / 9
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರಲ್ಲಿ ಆರ್​ಸಿಬಿ ಗೆಲುವು-ಸೋಲು-ಗೆಲುವಿನೊಂದಿಗೆ ನಾಗಾಲೋಟ ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಆರ್​ಸಿಬಿ, ಆ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸಿತ್ತು.

2 / 9
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳಿದೆ. ಈ ಗೆಲುವಿನ ಬೆನ್ನಲ್ಲೇ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್​ ಆರ್​ಸಿಬಿ ಬಳಗವನ್ನು ಸೇರಿಕೊಂಡಿದ್ದಾರೆ.

3 / 9
ಈ ಬಾರಿಯ ಐಪಿಎಲ್​ನ ಆರಂಭಿಕ ಪಂದ್ಯಗಳಿಂದ ಜೋಶ್ ಹ್ಯಾಝಲ್​ವುಡ್ ಹೊರಗುಳಿದಿದ್ದರು. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹ್ಯಾಝಲ್​ವುಡ್ ಮೊದಲ ನಾಲ್ಕು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ 5ನೇ ಪಂದ್ಯದ ವೇಳೆ ತಂಡವನ್ನು ಕೂಡಿಕೊಂಡಿದ್ದಾರೆ.

4 / 9
ಆರ್​ಸಿಬಿ ಮುಂದಿನ ಪಂದ್ಯವನ್ನು ಸಿಎಸ್​ಕೆ ವಿರುದ್ಧ ಆಡಲಿದ್ದು, ಇದಕ್ಕೂ ಮುನ್ನ ಜೋಶ್ ಹ್ಯಾಝಲ್​ವುಡ್ ತಂಡವನ್ನು ಸೇರಿಕೊಂಡಿರುವುದು ಆರ್​ಸಿಬಿ ಬಳಗದ ಬಲಿಷ್ಠತೆಯನ್ನು ಹೆಚ್ಚಿಸಿದೆ. ಆದರೆ ಆಸೀಸ್​ ವೇಗಿಯ ಆಗಮನದ ಬೆನ್ನಲ್ಲೇ ಪ್ಲೇಯಿಂಗ್ ಇಲೆವೆನ್ ಆಯ್ಕೆಯೇ ದೊಡ್ಡ ಸವಾಲಾಗಿ ಪರಿಣಮಿಸಿದೆ.

5 / 9
ಏಕೆಂದರೆ ಆರ್​ಸಿಬಿ ಪ್ಲೇಯಿಂಗ್​ ಇಲೆವೆನ್​ನಲ್ಲಿ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ವನಿಂದು ಹಸರಂಗ ಇರುವುದು ಖಚಿತ. ಇನ್ನು ಬದಲಾವಣೆ ಮಾಡಬೇಕಿರುವುದು ವೇಯ್ನ್ ಪಾರ್ನೆಲ್​ ಸ್ಥಾನದಲ್ಲಿ ಮಾತ್ರ. ಆದರೆ 2 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಪಾರ್ನೆಲ್ 4 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ.

6 / 9
ಅದರಲ್ಲೂ ಪವರ್​ಪ್ಲೇನಲ್ಲಿ ಉತ್ತಮ ದಾಳಿ ಸಂಘಟಿಸುವಲ್ಲಿ ಎಡಗೈ ವೇಗಿ ಪಾರ್ನೆಲ್ ಯಶಸ್ವಿಯಾಗಿದ್ದಾರೆ. ಇದೀಗ ಜೋಶ್ ಹ್ಯಾಝಲ್​ವುಡ್ ಅವರಿಗೆ ಅವಕಾಶ ಕಲ್ಪಿಸಬೇಕಿದ್ದರೆ ಪಾರ್ನೆಲ್​ ಅವರನ್ನು ಕೈ ಬಿಡಲೇಬೇಕು. ಇದುವೇ ಈಗ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್​ನ ಚಿಂತೆಯನ್ನು ಹೆಚ್ಚಿಸಿದೆ.

7 / 9
ಅಂದರೆ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಜೋಶ್ ಹ್ಯಾಝಲ್​ವುಡ್​ ಅವರನ್ನು ಕಣಕ್ಕಿಳಿಸಬೇಕಿದ್ದರೆ, ವೇಯ್ನ್ ಪಾರ್ನೆಲ್​ ಅವರನ್ನು ಕೈ ಬಿಡಬೇಕು. ಹೀಗಾದ್ರೆ ಆರ್​ಸಿಬಿ ಆಡುವ ಬಳಗದಲ್ಲಿ ಎಡಗೈ ವೇಗಿ ಇರುವುದಿಲ್ಲ. ತಂಡದಲ್ಲಿರುವ ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯಕುಮಾರ್...ಎಲ್ಲರೂ ಬಲಗೈ ವೇಗಿಗಳು.

8 / 9
ಇದೀಗ ಬಲಗೈ ವೇಗಿಯಾಗಿರುವ ಜೋಶ್ ಹ್ಯಾಝಲ್​ವುಡ್ ಆಡುವ ಬಳಗ ಸೇರಿಕೊಂಡರೆ ಎಡಗೈ ವೇಗಿಯ ಸೇವೆಯನ್ನು ಕಳೆದುಕೊಳ್ಳಲಿದೆ. ಇದುವೇ ಈಗ ತಂಡದ ಚಿಂತೆಯನ್ನು ಹೆಚ್ಚಿಸಿದ್ದು, ಅಂತಿಮವಾಗಿ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಇವರಿಬ್ಬರಲ್ಲಿ (ಪಾರ್ನೆಲ್-ಹ್ಯಾಝಲ್​ವುಡ್) ಯಾರಿಗೆ ಚಾನ್ಸ್ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

9 / 9
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.