IPL 2023: RCB ತಂಡದಲ್ಲಿರುವ ಮೂವರು ಹಿರಿಯ ಆಟಗಾರರು ಯಾರು ಗೊತ್ತಾ?

| Updated By: ಝಾಹಿರ್ ಯೂಸುಫ್

Updated on: Mar 01, 2023 | 11:08 PM

IPL 2023 Kannada: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ವಿಶೇಷ ಎಂದರೆ ಏಪ್ರಿಲ್ 2 ರಂದು ಜರುಗಲಿರುವ ಈ ಪಂದ್ಯವು ಆರ್​ಸಿಬಿ ತಂಡದ ಹೋಮ್​ ಗ್ರೌಂಡ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.

1 / 7
ಇಂಡಿಯನ್ ಪ್ರೀಮಿಯರ್ ಲೀಗ್​ಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳು 31 ರಿಂದ ವರ್ಣರಂಜಿತ ಐಪಿಎಲ್​ ಟೂರ್ನಿಗೆ ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ.

2 / 7
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ವಿಶೇಷ ಎಂದರೆ ಏಪ್ರಿಲ್ 2 ರಂದು ಜರುಗಲಿರುವ ಈ ಪಂದ್ಯವು ಆರ್​ಸಿಬಿ ತಂಡದ ಹೋಮ್​ ಗ್ರೌಂಡ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಹೀಗಾಗಿ ಗೆಲುವಿನೊಂದಿಗೆ ಶುಭಾರಂಭ ಮಾಡುವ ಇರಾದೆಯಲ್ಲಿದೆ ಆರ್​ಸಿಬಿ.

3 / 7
ಇನ್ನು ಈ ಬಾರಿ ಆರ್​ಸಿಬಿ ತಂಡವು ಒಟ್ಟು 25 ಸದಸ್ಯರ ಬಳಗವನ್ನು ಹೊಂದಿದ್ದು, ಈ ಬಳಗದಲ್ಲಿ ಮೂವರು ಹಿರಿಯ ಆಟಗಾರರಿರುವುದು ವಿಶೇಷ. ಹಾಗಿದ್ರೆ ಆರ್​ಸಿಬಿ ತಂಡದಲ್ಲಿರುವ ಹಿರಿಯ ಆಟಗಾರರು ಯಾರೆಲ್ಲಾ ಎಂದು ನೋಡೋಣ...

4 / 7
ಫಾಫ್ ಡುಪ್ಲೆಸಿಸ್: ಆರ್​ಸಿಬಿ ತಂಡದಲ್ಲಿರುವ ಅತ್ಯಂತ ಹಿರಿಯ ಆಟಗಾರನೆಂದರೆ ನಾಯಕ ಫಾಫ್ ಡುಪ್ಲೆಸಿಸ್. ಸೌತ್ ಆಫ್ರಿಕಾದ ಮಾಜಿ ನಾಯಕ ಕಳೆದ ಸೀಸನ್​​ ಐಪಿಎಲ್​ ಹರಾಜಿನಲ್ಲಿ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು. ಇದೀಗ ತಮ್ಮ 38 ವರ್ಷದಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ.

5 / 7
ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ಫಿನಿಶರ್ ಆಗಿ ಗುರುತಿಸಿಕೊಂಡಿರುವ ದಿನೇಶ್ ಕಾರ್ತಿಕ್ ಅವರ ವಯಸ್ಸು 37. ಈ ಪ್ರಾಯದಲ್ಲೂ ಅತ್ಯುತ್ತಮ ಫಿಟ್​ನೆಸ್ ಕಾಪಾಡಿಕೊಂಡಿರುವ ಡಿಕೆ ಈ ಬಾರಿ ಕೂಡ ಅಬ್ಬರಿಸುವ ವಿಶ್ವಾಸದಲ್ಲಿದ್ದಾರೆ.

6 / 7
ಕರ್ಣ್ ಶರ್ಮಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೂರನೇ ಹಿರಿಯ ವೇಗಿ ಕರ್ಣ್ ಶರ್ಮಾ. 35 ವರ್ಷದ ಕರ್ಣ್ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದಾಗ್ಯೂ ಈ ಬಾರಿ ಆಡುವ ಬಳಗದಲ್ಲಿ ಚಾನ್ಸ್ ಸಿಗುವ ವಿಶ್ವಾಸದಲ್ಲಿದ್ದಾರೆ ಹಿರಿಯ ಸ್ಪಿನ್ನರ್ ಕರ್ಣ್ ಶರ್ಮಾ.

7 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ವಿಲ್ ಜಾಕ್ಸ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.