- Kannada News Photo gallery Cricket photos IPL 2023 Kannada: 8 South African players will miss the opening match of ipl 2023
IPL 2023: ಮೊದಲ ಪಂದ್ಯಕ್ಕೆ 8 ಆಟಗಾರರು ಅಲಭ್ಯ..!
IPL 2023 Kannada: ಸೌತ್ ಆಫ್ರಿಕಾದ ಆಟಗಾರರು ಐಪಿಎಲ್ ತಂಡಗಳನ್ನು ಕೂಡಿಕೊಳ್ಳುವುದು ತಡವಾಗಲಿದೆ. ಐಪಿಎಲ್ನ 6 ತಂಡಗಳ ಒಟ್ಟು 8 ಆಟಗಾರರು ಮೊದಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.
Updated on: Mar 28, 2023 | 3:06 PM

IPL 2023: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಆರಂಭಕ್ಕೆ ಇನ್ನು ಕೇವಲ 2 ದಿನಗಳು ಮಾತ್ರ ಉಳಿದಿವೆ. ಮಾರ್ಚ್ 31 ರಿಂದ ಶುರುವಾಗಲಿರುವ ಐಪಿಎಲ್ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಕೆಲ ಆಟಗಾರರು ಗೈರಾಗಲಿದ್ದಾರೆ.

ಸೌತ್ ಆಫ್ರಿಕಾದ ಆಟಗಾರರು ಐಪಿಎಲ್ ತಂಡಗಳನ್ನು ಕೂಡಿಕೊಳ್ಳುವುದು ತಡವಾಗಲಿದೆ. ಐಪಿಎಲ್ನ 6 ತಂಡಗಳ ಒಟ್ಟು 8 ಆಟಗಾರರು ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ಮಾರ್ಚ್ 31 ರಿಂದ ಸೌತ್ ಆಫ್ರಿಕಾ ಹಾಗೂ ನೆದರ್ಲ್ಯಾಂಡ್ಸ್ ನಡುವೆ ಏಕದಿನ ಸರಣಿ ಶುರುವಾಗಲಿದ್ದು, ಈ ಸರಣಿಯು ಏಪ್ರಿಲ್ 2 ರಂದು ಕೊನೆಗೊಳ್ಳಲಿದೆ. ಆ ಬಳಿಕವಷ್ಟೇ ಸೌತ್ ಆಫ್ರಿಕಾ ಆಟಗಾರರು ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದರಿಂದ ಸಂಕಷ್ಟಕ್ಕೆ ಸಿಲುಕಲಿರುವುದು ಸನ್ರೈಸರ್ಸ್ ಹೈದರಾಬಾದ್ ತಂಡ. ಏಕೆಂದರೆ ಎಸ್ಆರ್ಹೆಚ್ ತಂಡದಲ್ಲಿ ನಾಯಕ ಐಡೆನ್ ಮಾರ್ಕ್ರಾಮ್ ಸೇರಿದಂತೆ ಮೂವರು ಸೌತ್ ಆಫ್ರಿಕಾ ಆಟಗಾರರಿದ್ದಾರೆ. ಹೀಗಾಗಿ ತಂಡದ ಪ್ಲೇಯಿಂಗ್ ಇಲೆವೆನ್ ಸಂಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ.

ಅದರಂತೆ ಐಪಿಎಲ್ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿರುವ ಸೌತ್ ಆಫ್ರಿಕಾ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಡೇವಿಡ್ ಮಿಲ್ಲರ್- ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ಆಟಗಾರ ಡೇವಿಡ್ ಮಿಲ್ಲರ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ. ಇತ್ತ ಗುಜರಾತ್ ಟೈಟಾನ್ಸ್ ಹಾಗೂ ಸಿಎಸ್ಕೆ ಐಪಿಎಲ್ನ ಉದ್ಘಾಟನಾ ಪಂದ್ಯವಾಡಲಿದ್ದು, ಈ ಪಂದ್ಯದಿಂದ ಚಾಂಪಿಯನ್ ಆಟಗಾರ ಹೊರಗುಳಿಯುತ್ತಿರುವುದು ಗುಜರಾತ್ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಬಹುದು.

ಕ್ವಿಂಟನ್ ಡಿಕಾಕ್- ಏಪ್ರಿಲ್ 1 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಲಕ್ನೋ ತಂಡದ ಸ್ಟಾರ್ ಆಟಗಾರ ಕ್ವಿಂಟನ್ ಡಿಕಾಕ್ ಅಲಭ್ಯರಾಗಿದ್ದಾರೆ.

ಮಾರ್ಕ್ರಾಮ್, ಯಾನ್ಸನ್, ಕ್ಲಾಸೆನ್: ಸನ್ರೈಸರ್ಸ್ ಹೈದರಾಬಾದ್ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯಕ್ಕೆ ಎಸ್ಆರ್ಹೆಚ್ ತಂಡದಲ್ಲಿರುವ ಸೌತ್ ಆಫ್ರಿಕಾ ಕ್ರಿಕೆಟಿಗರಾದ ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್ ಹಾಗೂ ಮಾರ್ಕೊ ಯಾನ್ಸನ್ ಅಲಭ್ಯರಾಗಿದ್ದಾರೆ.

ಅನ್ರಿಕ್ ನೋಕಿಯಾ: ಏಪ್ರಿಲ್ 1 ರಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸೌತ್ ಆಫ್ರಿಕಾ ವೇಗಿ ಅನ್ರಿಕ್ ನೋಕಿಯಾ ಅಲಭ್ಯರಾಗಿದ್ದಾರೆ.

ಕಗಿಸೊ ರಬಾಡ: ಏಪ್ರಿಲ್ 1 ರಂದು ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ಮುನ್ನ ಕಗಿಸೊ ರಬಾಡ ಕೂಡ ಪಂಜಾಬ್ ಕಿಂಗ್ಸ್ ತಂಡವನ್ನು ಕೂಡಿಕೊಳ್ಳುವುದಿಲ್ಲ.

ಸಿಸಂದ ಮಗಲಾ: ಗುಜರಾತ್ ಟೈಟಾನ್ಸ್ ವಿರುದ್ಧದ ಮೊದಲ ಪಂದ್ಯಕ್ಕೆ ಚೈನ್ನೈ ಸೂಪರ್ ಕಿಂಗ್ಸ್ ತಂಡದ ಸೌತ್ ಆಫ್ರಿಕಾ ವೇಗಿ ಸಿಸಂದ ಮಗಲಾ ಕೂಡ ಅಲಭ್ಯರಾಗಲಿದ್ದಾರೆ. ಅಂದರೆ ಏಪ್ರಿಲ್ 3 ರ ನಂತರ ಸೌತ್ ಆಫ್ರಿಕಾ ಆಟಗಾರರು ಐಪಿಎಲ್ನಲ್ಲಿ ಕಣಕ್ಕಿಳಿಯಲಿದ್ದಾರೆ.
