IPL 2023: ಈ ಬಾರಿ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಆಯ್ಕೆ ಮಾಡಿದ ಎಬಿಡಿ
IPL 2023 Kannada: ಈ ಹಿಂದೆ ಆರ್ಸಿಬಿ ಪರ ಆಡಿದ್ದ ಎಬಿ ಡಿವಿಲಿಯರ್ಸ್, ಈ ಬಾರಿ ವೀಕ್ಷಕ ವಿವರಣೆಗಾರನಾಗಿ ಐಪಿಎಲ್ನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.
Updated on: Apr 01, 2023 | 12:08 AM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭವಾಗಿದೆ. ಇದರ ಬೆನ್ನಲ್ಲೇ ಈ ಬಾರಿ ಪ್ಲೇಆಫ್ ಪ್ರವೇಶಿಸುವ ತಂಡಗಳು ಯಾವುವು ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಈ ಬಾರಿಯ ಐಪಿಎಲ್ನ ಪಾಯಿಂಟ್ ಟೇಬಲ್ನಲ್ಲಿ ಟಾಪ್-4 ಸ್ಥಾನ ಅಲಂಕರಿಸುವ ತಂಡಗಳನ್ನು ಹೆಸರಿಸಿದ್ದಾರೆ ಆರ್ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್.

ಎಬಿ ಡಿವಿಲಿಯರ್ಸ್ ಪ್ರಕಾರ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸುವುದು ಖಚಿತ. ಅತ್ಯುತ್ತಮ ತಂಡವನ್ನು ಹೊಂದಿರುವ ಆರ್ಸಿಬಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಧೋನಿಯ ನಾಯಕತ್ವದಲ್ಲಿ ಈ ಬಾರಿ ಸಿಎಸ್ಕೆ ತಂಡವು ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದಿದ್ದಾರೆ ಎಬಿಡಿ.

ಹಾಗೆಯೇ ಸೌತ್ ಆಫ್ರಿಕಾ ಆಟಗಾರ ಐಡೆನ್ ಮಾರ್ಕ್ರಾಮ್ ಮುನ್ನಡೆಸಲಿರುವ ಸನ್ರೈಸರ್ಸ್ ಹೈದರಾಬಾದ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಬಿ ಡಿವಿಲಿಯರ್ಸ್.

ಇನ್ನು ಎಬಿ ಡಿವಿಲಿಯರ್ಸ್ ಪ್ಲೇಆಫ್ ಪ್ರವೇಶಿಸುವ ನಾಲ್ಕನೇ ತಂಡವಾಗಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಆಯ್ಕೆ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಉತ್ತಮ ಸಮತೋಲನದಿಂದ ಕೂಡಿದೆ. ಹೀಗಾಗಿ ಗುಜರಾತ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

ಈ ಹಿಂದೆ ಐಪಿಎಲ್ನಲ್ಲಿ ಆರ್ಸಿಬಿ ಪರ ಆಡಿದ್ದ ಎಬಿ ಡಿವಿಲಿಯರ್ಸ್, ಈ ಬಾರಿ ವೀಕ್ಷಕ ವಿವರಣೆಗಾರನಾಗಿ ಐಪಿಎಲ್ನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಇದೀಗ ಐಪಿಎಲ್ ಆರಂಭಕ್ಕೂ ಮುನ್ನವೇ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿ ಐಪಿಎಲ್ ಪ್ರೇಮಿಗಳ ಕುತೂಹಲಕ್ಕೆ ಕಿಚ್ಚು ಹಚ್ಚಿದ್ದಾರೆ. ಅಂದಹಾಗೆ ಎಬಿಡಿ ಅವರ ಈ ಭವಿಷ್ಯವಾಣಿ ನಿಜವಾಗಲಿದೆಯಾ ಕಾದು ನೋಡಬೇಕಿದೆ..

TV9 Kannada
Read More




