AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕಣಕ್ಕಿಳಿಯದ ಮ್ಯಾಕ್ಸ್​ವೆಲ್:​ RCB ಗೆ ಹೊಸ ಚಿಂತೆ ಶುರು..!

IPL 2023 RCB Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್.

TV9 Web
| Edited By: |

Updated on: Mar 23, 2023 | 8:53 PM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ದಿನಗಳು ಮಾತ್ರ ಉಳಿದಿರುವಾಗಲೇ ಆಟಗಾರರ ಗಾಯದ ಸಮಸ್ಯೆಯು ಇದೀಗ ಎಲ್ಲಾ ಫ್ರಾಂಚೈಸಿಗಳ ಚಿಂತೆಗೆ ಕಾರಣವಾಗಿದೆ. ಈಗಾಗಲೇ ಐಪಿಎಲ್​ನಿಂದ 6 ಸ್ಟಾರ್ ಆಟಗಾರರು ಹೊರಗುಳಿದಿದ್ದಾರೆ.

1 / 7
ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದ ಇಂಗ್ಲೆಂಡ್ ಆಲ್​ರೌಂಡರ್ ವಿಲ್ ಜಾಕ್ಸ್ ಕೂಡ ಗಾಯದ ಕಾರಣ ಟೂರ್ನಿಯಿಂದ ಹೊರನಡೆದಿದ್ದಾರೆ. ಇದೀಗ ಬದಲಿ ಆಟಗಾರನಾಗಿ ಆರ್​ಸಿಬಿಗೆ ನ್ಯೂಜಿಲೆಂಡ್ ತಂಡದ ಆಲ್​ರೌಂಡರ್ ಮೈಕೆಲ್ ಬ್ರೇಸ್​ವೆಲ್ ಆಯ್ಕೆಯಾಗಿದ್ದಾರೆ. ಇದರ ನಡುವೆ ಮತ್ತೋರ್ವ ಆರ್​ಸಿಬಿ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವುದು ಬಹಿರಂಗವಾಗಿದೆ.

2 / 7
ಮೂರುವರೆ ತಿಂಗಳ ಹಿಂದೆ ಗಾಯಗೊಂಡಿದ್ದ ಮ್ಯಾಕ್ಸ್​ವೆಲ್ ಇತ್ತೀಚೆಗಷ್ಟೇ ಸಂಪೂರ್ಣವಾಗಿ ಚೇತರಿಸಿಕೊಂಡು ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಭಾರತದ ವಿರುದ್ಧ ಏಕದಿನ ಸರಣಿಗೂ ಮುನ್ನ ಶೆಫೀಲ್ಡ್ ಶೀಲ್ಡ್​ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಸೌತ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿಕ್ಟೋರಿಯಾ ಪರ ಆಡಿದ್ದ ಮ್ಯಾಕ್ಸಿ ಫೀಲ್ಡಿಂಗ್​ ವೇಳೆ ಮತ್ತೆ ಗಾಯ ಮಾಡಿಕೊಂಡಿದ್ದರು.

3 / 7
ಇದಾದ ಬಳಿಕ ಭಾರತದ ವಿರುದ್ಧ ಏಕದಿನ ಸರಣಿಯಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಾಣಿಸಿಕೊಂಡರೂ ಆಡಿದ್ದು ಕೇವಲ 1 ಪಂದ್ಯ ಮಾತ್ರ. ಅಂದರೆ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಸೀಸ್ ಆಟಗಾರ ಉಳಿದೆರಡು ಪಂದ್ಯಗಳಿಂದ ಹೊರಗುಳಿದಿದ್ದರು. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ ಎಂಬುದನ್ನು ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ತಿಳಿಸಿದ್ದಾರೆ.

4 / 7
ಗ್ಲೆನ್ ಮ್ಯಾಕ್ಸ್​ವೆಲ್ ತುಸು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು 2ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ ಎಂದು ಸ್ಮಿತ್ ತಿಳಿಸಿದ್ದರು. ಆದರೆ ಮೂರನೇ ಏಕದಿನ ಪಂದ್ಯದಿಂದಲ್ಲೂ ಮ್ಯಾಕ್ಸಿ ಹೊರಗುಳಿದಿರುವುದು ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

5 / 7
ಏಕೆಂದರೆ ಐಪಿಎಲ್ ಆರಂಭವಾಗಲು ಇನ್ನು ವಾರ ಮಾತ್ರ ಉಳಿದಿದೆ. ಇತ್ತ ಗ್ಲೆನ್ ಮ್ಯಾಕ್ಸ್​ವೆಲ್ ಫಿಟ್​ನೆಸ್​ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದ್ದು, ಈ ವೇಳೆಗೆ ಮ್ಯಾಕ್ಸ್​ವೆಲ್ ಸಂಪೂರ್ಣ ಫಿಟ್​ನೆಸ್ ಸಾಧಿಸಲಿದ್ದಾರಾ ಎಂಬುದೇ ಈಗ ಆರ್​ಸಿಬಿ ತಂಡದ ಚಿಂತೆಗೆ ಕಾರಣವಾಗಿದೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ