- Kannada News Photo gallery Cricket photos IPL 2023 Kannada: Jacques Kallis names team who will IPL 2023
IPL 2023: ಈ ಸಲ ಕಪ್ ಗೆಲ್ಲುವ ತಂಡವನ್ನು ಹೆಸರಿಸಿದ ಜಾಕ್ ಕಾಲಿಸ್
IPL 2023 Kannada: ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ, ಚೇತನ್ ಸಕರಿಯಾ.
Updated on:Apr 01, 2023 | 2:11 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಸೀಸನ್ 16 ಆರಂಭಕ್ಕೂ ಮುನ್ನವೇ ಈ ಬಾರಿ ಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದೆಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಜಾಕ್ವೆಸ್ ಕಾಲಿಸ್ ಈ ಬಾರಿ ಫೈನಲ್ ಆಡುವ 2 ತಂಡಗಳನ್ನು ಹೆಸರಿಸಿದ್ದಾರೆ. ಅಷ್ಟೇ ಅಲ್ಲದೆ ಇದೇ ತಂಡ ಕಪ್ ಗೆಲ್ಲಲಿದೆ ಎಂದು ಕೂಡ ಭವಿಷ್ಯ ನುಡಿದಿದ್ದಾರೆ.

ಐಪಿಎಲ್ ಕುರಿತು ಮಾತನಾಡಿದ ಜಾಕ್ಸ್ ಕಾಲಿಸ್, ಈ ಬಾರಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಫೈನಲ್ ಪ್ರವೇಶಿಸಲಿದೆ. ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ಈ ಸಲ ಅಂತಿಮ ಹಣಾಹಣಿಯಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿದೆ ಎಂದಿದ್ದಾರೆ.

ಇನ್ನು ಫೈನಲ್ ಫೈಟ್ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಡೆಲ್ಲಿ ಕ್ಯಾಪಿಟಲ್ಸ್ ಚೊಚ್ಚಲ ಬಾರಿ ಕಪ್ ಗೆಲ್ಲಲಿದೆ ಎಂದು ಜಾಕ್ಸ್ ಕಾಲಿಸ್ ಭವಿಷ್ಯ ನುಡಿದಿದ್ದಾರೆ.

ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಿಷಭ್ ಪಂತ್ ಅವರ ಸೇವೆಯನ್ನು ಕಳೆದುಕೊಂಡರೂ, ತಂಡದಲ್ಲಿ ಡೇವಿಡ್ ವಾರ್ನರ್, ಅಕ್ಷರ್ ಪಟೇಲ್ ಅವರಂತಹ ಸ್ಟಾರ್ ಆಟಗಾರರ ದಂಡೇ ಇದೆ. ಅದರಲ್ಲೂ ವಾರ್ನರ್ ತಂಡವನ್ನು ಮುನ್ನಡೆಸುತ್ತಿರುವುದು ಡೆಲ್ಲಿ ಕ್ಯಾಪಿಟಲ್ಸ್ಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದಿದ್ದಾರೆ ಜಾಕ್ಸ್ ಕಾಲಿಸ್.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಏಪ್ರಿಲ್ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಅಭಿಯಾನದ ಮೂಲಕ ಜಾಕ್ಸ್ ಕಾಲಿಸ್ ಅವರ ಭವಿಷ್ಯವಾಣಿಯಂತೆ ಈ ಬಾರಿ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಕುಲದೀಪ್ ಯಾದವ್, ವಿಕಿ ಓಸ್ಟ್ವಾಲ್, ರಿಲೀ ರೊಸೊ, ಮನೀಶ್ ಪಾಂಡೆ, ಮುಖೇಶ್ ಕುಮಾರ್, ಇಶಾಂತ್ ಶರ್ಮಾ , ಫಿಲ್ ಸಾಲ್ಟ್, ಅಭಿಷೇಕ್ ಪೊರೆಲ್.
Published On - 2:08 pm, Sat, 1 April 23
