AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 4 ವರ್ಷಗಳ ಬಳಿಕ ಐಪಿಎಲ್​ನತ್ತ ಜೋ ರೂಟ್..!

IPL 2023: ಮಿನಿ ಹರಾಜಿಗಾಗಿ ಜೋ ರೂಟ್ ಹೆಸರು ನೋಂದಾಯಿಸಿಕೊಂಡಿದ್ದು, ಈ ಮೂಲಕ ಮತ್ತೊಮ್ಮೆ ಐಪಿಎಲ್​​ ಹರಾಜಿನಲ್ಲಿ ಅದೃಷ್ಟ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.

TV9 Web
| Edited By: |

Updated on: Nov 23, 2022 | 4:24 PM

Share
ಇಂಗ್ಲೆಂಡ್ ತಂಡದ ಮಾಜಿ ನಾಯಕ, ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್​ಮನ್ ಜೋ ರೂಟ್ ಇಂಡಿಯನ್​ ಪ್ರೀಮಿಯರ್ ಲೀಗ್​ನತ್ತ ಮುಖ ಮಾಡಲು ನಿರ್ಧರಿಸಿದ್ದಾರೆ. ಅದು ಕೂಡ ಮಿನಿ ಹರಾಜಿನ ಮೂಲಕ ಎಂಬುದು ವಿಶೇಷ.

1 / 7
ಐಪಿಎಲ್ ಸೀಸನ್ 16 ಗಾಗಿ ಡಿಸೆಂಬರ್ 23 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜಿಗಾಗಿ ಈಗಾಗಲೇ ಜೋ ರೂಟ್ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

2 / 7
ವಿಶೇಷ ಎಂದರೆ ಕಳೆದ ನಾಲ್ಕು ವರ್ಷಗಳಿಂದ ಜೋ ರೂಟ್ ಐಪಿಎಲ್​ನತ್ತ ಮುಖ ಮಾಡಿರಲಿಲ್ಲ. ಅಂದರೆ 2018 ರಲ್ಲಿ ಐಪಿಎಲ್​ ಹರಾಜಿಗಾಗಿ ಹೆಸರು ನೋಂದಣಿ ಮಾಡಿಕೊಂಡಿದ್ದ ಇಂಗ್ಲೆಂಡ್ ಆಟಗಾರನನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

3 / 7
ಆ ಬಳಿಕ ಐಪಿಎಲ್​ನಿಂದ ವಿಮುಖರಾಗಿದ್ದ ರೂಟ್ ಕಳೆದ ಸೀಸನ್​ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದರು. ಆದರೆ ಇಂಗ್ಲೆಂಡ್​ ತಂಡವು ಆಸ್ಟ್ರೇಲಿಯಾ ವಿರುದ್ಧ ಆ್ಯಶಸ್ ಸರಣಿ ಸೋತ ಹಿನ್ನೆಲೆಯಲ್ಲಿ ಟೆಸ್ಟ್ ಕ್ರಿಕೆಟ್​ನತ್ತ ಹೆಚ್ಚಿನ ಗಮನ ಕೇಂದ್ರೀಕರಿಸಲು ರೂಟ್ ಐಪಿಎಲ್​ನಿಂದ ಹಿಂದೆ ಸರಿಯುವ ನಿರ್ಧಾರ ತೆಗೆದುಕೊಂಡಿದ್ದರು.

4 / 7
ಇದೀಗ ಮಿನಿ ಹರಾಜಿಗಾಗಿ ಜೋ ರೂಟ್ ಹೆಸರು ನೋಂದಾಯಿಸಿಕೊಂಡಿದ್ದು, ಈ ಮೂಲಕ ಮತ್ತೊಮ್ಮೆ ಐಪಿಎಲ್​​ ಹರಾಜಿನಲ್ಲಿ ಅದೃಷ್ಟ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.

5 / 7
ಸದ್ಯ ಇಂಗ್ಲೆಂಡ್ ಟಿ20 ತಂಡದಿಂದ ಹೊರಗುಳಿದಿರುವ ರೂಟ್ ಏಕದಿನ ಹಾಗೂ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಾಗ್ಯೂ ಇಂಗ್ಲೆಂಡ್ ಪರ 30 ಟಿ20 ಇನಿಂಗ್ಸ್ ಆಡಿರುವ ಜೋ ರೂಟ್ 5 ಅರ್ಧಶತಕದೊಂದಿಗೆ ಒಟ್ಟು 893 ರನ್ ಕಲೆಹಾಕಿದ್ದಾರೆ.

6 / 7
ಹಾಗೆಯೇ ತಮ್ಮ 30 ಇನಿಂಗ್ಸ್​ನಲ್ಲಿ  90 ಫೋರ್ ಹಾಗೂ 16 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಹೀಗಾಗಿ 31 ವರ್ಷದ ಅನುಭವಿ ಆಟಗಾರ ಜೋ ರೂಟ್ ಅವರನ್ನು ಐಪಿಎಲ್ ಮಿನಿ ಹರಾಜಿನಲ್ಲಿ ಯಾವುದಾದರೂ ತಂಡ ಖರೀದಿಸಿದರೂ ಅಚ್ಚರಿಪಡಬೇಕಿಲ್ಲ.

7 / 7
Web contact
Web contact

TV9 Kannada

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ