- Kannada News Photo gallery Cricket photos Ipl 2023 kannada prasidh krishna ruled out of ipl 2023 kannada news zp au50
IPL 2023: ಐಪಿಎಲ್ ಟೂರ್ನಿಯಿಂದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಔಟ್..!
IPL 2023 Kannada: ರಾಜಸ್ಥಾನ್ ರಾಯಲ್ಸ್ ತಂಡ ಹೀಗಿದೆ: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಒಬೆಡ್ ಮೆಕಾಯ್, ನವದೀಪ್ ಸೈನಿ.
Updated on: Feb 18, 2023 | 6:30 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 31 ರಿಂದ ಶುರುವಾಗಲಿರುವ ರಂಗು ರಂಗಿನ ಕ್ರಿಕೆಟ್ ಟೂರ್ನಿಗಾಗಿ ಎಲ್ಲಾ ತಂಡಗಳು ಸಿದ್ಧತೆಗಳನ್ನು ಆರಂಭಿಸಿದೆ. ಆದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮಾತ್ರ ಆಘಾತ ಎದುರಾಗಿದೆ.

ಹೌದು, ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ವೇಗಿ ಪ್ರಸಿದ್ಧ್ ಕೃಷ್ಣ ಐಪಿಎಲ್ನಿಂದ ಹೊರಗುಳಿಯಲಿದ್ದಾರೆ ಎಂದು ಕ್ರಿಕ್ಬಝ್ ವರದಿ ಮಾಡಿದೆ. ಕಳೆದ ಕೆಲ ತಿಂಗಳಿಂದ ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕನ್ನಡಿಗ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಸದ್ಯ ಶಸ್ತ್ರಚಿಕಿತ್ಸೆಯನ್ನು ಪೂರ್ಣಗೊಳಿಸಿರುವ ಪ್ರಸಿದ್ಧ್ ಕೃಷ್ಣ ಅವರಿಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ. ಹೀಗಾಗಿ ಮುಂಬರುವ ಐಪಿಎಲ್ ಹಾಗೂ ಏಕದಿನ ವಿಶ್ವಕಪ್ನಲ್ಲಿ ಕರ್ನಾಟಕ ವೇಗಿ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

ಈ ಬಗ್ಗೆ ಮಾಹಿತಿ ನೀಡಿರುವ ಪ್ರಸಿದ್ಧ್ ಕೃಷ್ಣ, ಕ್ರಿಕೆಟ್ ಅಂಗಳದಿಂದ ಹೊರಗುಳಿದಿದ್ದಕ್ಕೆ ವಿಷಾದವಿದೆ, ಶೀಘ್ರದಲ್ಲೇ ತಂಡಕ್ಕೆ ಕಂಬ್ಯಾಕ್ ಮಾಡುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಎಂದು ಬರೆದುಕೊಂಡಿದ್ದಾರೆ.

IPL 2022 ರ ಮೆಗಾ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಪ್ರಸಿದ್ಧ್ ಕೃಷ್ಣ ಅವರನ್ನು ಬರೋಬ್ಬರಿ 10 ಕೋಟಿ ರೂ. ನೀಡಿ ಖರೀದಿಸಿತ್ತು. ಅಲ್ಲದೆ ಕಳೆದ ಸೀಸನ್ನಲ್ಲಿ 17 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೃಷ್ಣ 19 ವಿಕೆಟ್ ಪಡೆಯುವ ಮೂಲಕ ರಾಜಸ್ಥಾನ್ ರಾಯಲ್ಸ್ ಫೈನಲ್ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದೀಗ ತಂಡದಲ್ಲಿದ್ದ ಪ್ರಮುಖ ಭಾರತೀಯ ವೇಗಿ ಹೊರಗುಳಿಯುತ್ತಿರುವುದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ. ಅಲ್ಲದೆ ಐಪಿಎಲ್ ಆರಂಭಕ್ಕೂ ಮುನ್ನ ಮತ್ತೋರ್ವ ಭಾರತೀಯ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಸಂಜು ಸ್ಯಾಮ್ಸನ್ ಬಳಗದ ಮುಂದಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಹೀಗಿದೆ: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಒಬೆಡ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಕೆಸಿ ಕಾರ್ಯಪ್ಪ, ಜೋ ರೂಟ್, ಅಬ್ದುಲ್ ಪಿಎ, ಆಕಾಶ್ ವಶಿಷ್ಟ್, ಮುರುಗನ್ ಅಶ್ವಿನ್, ಕೆಎಂ ಆಸಿಫ್, ಆ್ಯಡಂ ಝಂಪಾ, ಕುನಾಲ್ ರಾಥೋರ್, ಡೊನೊವನ್ ಫೆರೇರಾ, ಜೇಸನ್ ಹೋಲ್ಡರ್.




