IPL 2023: ಐಪಿಎಲ್​ನಿಂದ ನಾಲ್ವರು ಔಟ್: ಇಬ್ಬರು ಡೌಟ್

| Updated By: ಝಾಹಿರ್ ಯೂಸುಫ್

Updated on: Feb 27, 2023 | 10:30 PM

IPL 2023 Kannada: ಕೆಲ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸುತ್ತಾರೆ ಎಂಬುದರ ಬಗ್ಗೆ ಕೂಡ ಖಚಿತತೆ ಇಲ್ಲ. ಏಕೆಂದರೆ ಕೆಲವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ ಸಂಪೂರ್ಣ ಚೇತರಿಸಿಕೊಂಡರೆ ಮಾತ್ರ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

1 / 8
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಐಪಿಎಲ್ ಫ್ರಾಂಚೈಸಿಗಳಿಗೆ ಹೊಸ ಚಿಂತೆ ಶುರುವಾಗಿದೆ. ಅದುವೇ ಆಟಗಾರರ ಗಾಯದ ಸಮಸ್ಯೆ. ಏಕೆಂದರೆ ಈಗಾಗಲೇ ನಾಲ್ವರು ಆಟಗಾರರು ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಈ ನಾಲ್ವರು ಕೂಡ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಬಲ್ಲ ಸ್ಟಾರ್ ಆಟಗಾರರು ಎಂಬುದೇ ವಿಶೇಷ.

2 / 8
ಇನ್ನು ಕೆಲ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸುತ್ತಾರೆ ಎಂಬುದರ ಬಗ್ಗೆ ಕೂಡ ಖಚಿತತೆ ಇಲ್ಲ. ಏಕೆಂದರೆ ಕೆಲವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ ಸಂಪೂರ್ಣ ಚೇತರಿಸಿಕೊಂಡರೆ ಮಾತ್ರ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಐಪಿಎಲ್​ನಿಂದ ಇದುವರೆಗೆ ಹೊರಗುಳಿದಿರುವ ಆಟಗಾರರ ಪಟ್ಟಿ ಹೀಗಿದೆ...

3 / 8
ರಿಷಭ್ ಪಂತ್ (ಡೆಲ್ಲಿ ಕ್ಯಾಪಿಟಲ್ಸ್​): ಟೀಮ್ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಕೆಲ ತಿಂಗಳ ಹಿಂದೆ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡಿರುವ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಗುಳಿದಿದ್ದಾರೆ.

4 / 8
ಕೈಲ್ ಜೇಮಿಸನ್ (ಚೆನ್ನೈ ಸೂಪರ್ ಕಿಂಗ್ಸ್​): ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಕೂಡ ಗಾಯಗೊಂಡಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯಿಂದ ಈಗಾಗಲೇ ನ್ಯೂಜಿಲೆಂಡ್ ತಂಡದಿಂದ ಹೊರಗುಳಿದಿರುವ ಜೇಮಿಸನ್ ಕೂಡ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

5 / 8
ಪ್ರಸಿದ್ಧ್ ಕೃಷ್ಣ (ರಾಜಸ್ಥಾನ್ ರಾಯಲ್ಸ್​): ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ಪಾದದ ನೋವಿನ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪರ ಕನ್ನಡಿಗ ಕೂಡ ಕಣಕ್ಕಿಳಿಯುವುದಿಲ್ಲ.

6 / 8
ಜಸ್​ಪ್ರೀತ್ ಬುಮ್ರಾ (ಮುಂಬೈ ಇಂಡಿಯನ್ಸ್​): ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಕೂಡ ಈ ಬಾರಿಯ ಐಪಿಎಲ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಪರ ಯಾರ್ಕರ್ ಮಾಂತ್ರಿಕ ಕೂಡ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

7 / 8
ಪ್ಯಾಟ್ ಕಮಿನ್ಸ್ (ಕೊಲ್ಕತ್ತಾ ನೈಟ್ ರೈಡರ್ಸ್​): ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ತಾಯಿಯ ಅನಾರೋಗ್ಯದ ನಿಮಿತ್ತ ಅರ್ಧದಲ್ಲೇ ಸರಣಿ ತೊರೆದು ಆಸ್ಟ್ರೇಲಿಯಾಗೆ ಮರಳಿದ್ದರು. ಇದೀಗ ಐಪಿಎಲ್​ ವೇಳೆಗೆ ಅವರು ಹಿಂತಿರುಗುವುದು ಅನುಮಾನ ಎನ್ನಲಾಗಿದೆ.

8 / 8
ಜೋಶ್ ಲಿಟಲ್ (ಗುಜರಾತ್ ಟೈಟಾನ್ಸ್​): ಚೊಚ್ಚಲ ಬಾರಿಗೆ ಐಪಿಎಲ್​ ಆಡುವ ನಿರೀಕ್ಷೆಯಲ್ಲಿದ್ದ ಐರ್ಲೆಂಡ್​ ತಂಡದ ಎಡಗೈ ವೇಗಿ ಜೋಶ್ ಲಿಟಲ್ ಮಂಡಿರಜ್ಜು ಬಿಗಿತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹೊರಗುಳಿದಿದ್ದಾರೆ. ಇನ್ನು ಮಾರ್ಚ್ ಅಂತ್ಯದ ವೇಳೆಗೆ ಗುಣಮುಖರಾದರೆ ಮಾತ್ರ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.