- Kannada News Photo gallery Cricket photos IPL 2023 Kannada: Wanindu Hasaranga miss the first few matches of the IPL
IPL 2023: RCB ಸ್ಟಾರ್ ಆಟಗಾರ ಆರಂಭಿಕ ಪಂದ್ಯಗಳಿಗೆ ಅಲಭ್ಯ..?
IPL 2023 RCB: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ.
Updated on: Mar 25, 2023 | 10:30 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗೆ ಮಾರ್ಚ್ 31 ರಂದು ಚಾಲನೆ ದೊರೆಯಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಇನ್ನು ಏಪ್ರಿಲ್ 2 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯವಾಡಲಿದೆ. ಆದರೆ ಈ ಪಂದ್ಯಕ್ಕೆ ಆರ್ಸಿಬಿ ತಂಡದ ಸ್ಟಾರ್ ಆಟಗಾರ ಅಲಭ್ಯರಾಗುವ ಸಾಧ್ಯತೆಯಿದೆ.

ಹಾಗೆಯೇ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ವನಿಂದು ಹಸರಂಗ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರು ಏಪ್ರಿಲ್ 10 ರ ಬಳಿಕ ಆರ್ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

ಏಕೆಂದರೆ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವೆ ಸರಣಿ ನಡೆಯುತ್ತಿದ್ದು, ಈ ಸರಣಿ ಮುಕ್ತಾಯಗೊಳ್ಳುವುದು ಏಪ್ರಿಲ್ 8 ರಂದು. ಶ್ರೀಲಂಕಾ ತಂಡದ ಏಕದಿನ ಹಾಗೂ ಟಿ20 ತಂಡಗಳಲ್ಲಿ ಸ್ಥಾನ ಪಡೆದಿರುವ ಹಸರಂಗ ಸದ್ಯ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ. ಹೀಗಾಗಿ ಈ ಸರಣಿ ಮುಗಿದ ಬಳಿಕವಷ್ಟೇ ಐಪಿಎಲ್ ತಂಡಗಳನ್ನು ಕೂಡಿಕೊಳ್ಳಬಹುದು.

ಇತ್ತ ಆರ್ಸಿಬಿ ತಂಡವು ಏಪ್ರಿಲ್ 2 ರ ಬಳಿಕ ತನ್ನ 2ನೇ ಪಂದ್ಯವನ್ನು ಏಪ್ರಿಲ್ 6 ರಂದು ಕೆಕೆಆರ್ ವಿರುದ್ಧ ಆಡಲಿದೆ. ಒಂದು ವೇಳೆ ವನಿಂದು ಹಸರಂಗ ಶ್ರೀಲಂಕಾ ಪರ ಸಂಪೂರ್ಣ ಸರಣಿ ಆಡಿದ್ರೆ ಮೊದಲೆರಡು ಪಂದ್ಯಗಳನ್ನು ಮಿಸ್ ಮಾಡಿಕೊಳ್ಳುವುದು ಖಚಿತ. ಇನ್ನು ಏಪ್ರಿಲ್ 10 ರೊಳಗೆ ಭಾರತಕ್ಕೆ ಆಗಮಿಸಿದರೆ ಮಾತ್ರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯಬಹುದು.

ಕಳೆದ ಸೀಸನ್ನಲ್ಲಿ ಆರ್ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ವನಿಂದು ಹಸರಂಗ ಒಟ್ಟು 26 ವಿಕೆಟ್ ಕಬಳಿಸಿ ಮಿಂಚಿದ್ದರು. ಅಲ್ಲದೆ ಐಪಿಎಲ್ ಸೀಸನ್ 15 ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದರು.

ಇದೀಗ ಕಳೆದ ಸೀಸನ್ನ ತಂಡದ ಯಶಸ್ವಿ ಬೌಲರ್ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುತ್ತಿರುವುದು ಆರ್ಸಿಬಿ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ. ಇತ್ತ ಮುಂಬೈ ಇಂಡಿಯನ್ಸ್ ವಿರುದ್ಧ ವನಿಂದು ಹಸರಂಗ ಬದಲಿಗೆ ಆರ್ಸಿಬಿ ಯಾರನ್ನು ಕಣಕ್ಕಿಳಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್ವೆಲ್.
























