IPL 2023: ಕೆಕೆಆರ್​ ನಾಯಕ ರಾಣಾಗೆ 24 ಲಕ್ಷ! ಉಳಿದ ಆಟಗಾರರಿಗೆ ತಲಾ 6 ಲಕ್ಷ ದಂಡ ವಿಧಿಸಿದ ಬಿಸಿಸಿಐ

Updated on: May 15, 2023 | 5:23 PM

IPL 2023: ಕೆಕೆಆರ್ ನಾಯಕ ರಾಣಾ ಅವರು ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧದ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಐಪಿಎಲ್‌ನಿಂದ ದಂಡನೆಗೆ ಒಳಗಾಗಿದ್ದು, ಪಂದ್ಯ ಶುಲ್ಕ 24 ಲಕ್ಷ ರೂ.ಗಳನ್ನು ದಂಡವಾಗಿ ಪಾವತಿಸಬೇಕಾಗಿದೆ.

1 / 6
ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಟೂರ್ನಿಯಲ್ಲಿ 6ನೇ ಗೆಲುವು ದಾಖಲಿಸಿದೆ. ಇದರೊಂದಿಗೆ ಚೆನ್ನೈ ಪ್ಲೇ ಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಟೂರ್ನಿಯಲ್ಲಿ 6ನೇ ಗೆಲುವು ದಾಖಲಿಸಿದೆ. ಇದರೊಂದಿಗೆ ಚೆನ್ನೈ ಪ್ಲೇ ಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

2 / 6

ಇದರೊಂದಿಗೆ ತಾನು ಕೂಡ ಪ್ಲೇ ಆಫ್ ಹಾದಿಯನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ ಈ ಪಂದ್ಯದಲ್ಲಿ ಐಪಿಎಲ್ ನಿಯಮವನ್ನು ಉಲ್ಲಂಘಿಸಿದಕ್ಕಾಗಿ ಕೆಕೆಆರ್ ನಾಯಕ ನಿತೀಶ್ ರಾಣಾಗೆ ಮಂಡಳಿ ಭಾರಿ ದಂಡ ವಿಧಿಸಿದೆ.

3 / 6

ಕೆಕೆಆರ್ ನಾಯಕ ರಾಣಾ ಅವರು ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧದ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಐಪಿಎಲ್‌ನಿಂದ ದಂಡನೆಗೆ ಒಳಗಾಗಿದ್ದು, ಪಂದ್ಯ ಶುಲ್ಕ 24 ಲಕ್ಷ ರೂ.ಗಳನ್ನು ದಂಡವಾಗಿ ಪಾವತಿಸಬೇಕಾಗಿದೆ.

4 / 6

ವಾಸ್ತವವಾಗಿ ಐಪಿಎಲ್​ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಎರಡನೇ ಅಪರಾಧವಾಗಿರುವುದರಿಂದ ರಾಣಾ ಅವರಿಗೆ ರೂ. 24 ಲಕ್ಷ ದಂಡ ವಿಧಿಸಲಾಗಿದ್ದು, ಇಂಪ್ಯಾಕ್ಟ್ ಪ್ಲೇಯರ್ ಆಗಿ ತಂಡ ಸೇರಿಕೊಂಡಿದ್ದ ಆಟಗಾರ ಸೇರಿದಂತೆ ತಂಡದ ಪ್ರತಿಯೊಬ್ಬ ಸದಸ್ಯನಿಗೆ ರೂ. 6 ಲಕ್ಷ ಅಥವಾ ಪಂದ್ಯದ ಶುಲ್ಕದ ಶೇಕಡಾ 25ರಷ್ಟನ್ನು ದಂಡವಾಗಿ ವಿಧಿಸಲಾಗಿದೆ.

5 / 6

ಇನ್ನು ಇದೇ ರಾಣಾ ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹೃತಿಕ್ ಶೋಕೀನ್ ವಿರುದ್ಧ ಅಸಭ್ಯ ಪದ ಬಳಕೆ ಮಾಡಿದಕ್ಕಾಗಿ ದಂಡನೆ ಒಳಗಾಗಿದ್ದರು. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ರಾಣಾ ಲೆವೆಲ್ 1 ಅಪರಾಧವನ್ನು ಒಪ್ಪಿಕೊಂಡಿದ್ದರಿಂದ ಆ ಸಮಯದಲ್ಲಿ ಅವರ ಪಂದ್ಯದ ಶುಲ್ಕದ 25 ಪ್ರತಿಶತ ದಂಡ ವಿಧಿಸಲಾಗಿತ್ತು.

6 / 6

ಪಂದ್ಯದ ಕುರಿತು ಮಾತನಾಡುವುದಾದರೆ, ಕೆಕೆಆರ್ ನಾಯಕ ರಾಣಾ 43 ಎಸೆತಗಳಲ್ಲಿ 54 ರನ್ ಗಳಿಸಿದರೆ, ರಿಂಕು ಅರ್ಧಶತಕ (57*) ಗಳಿಸಿದರು. ಈ ಇಬ್ಬರ ಆಟದಿಂದಾಗಿ ಕೆಕೆಆರ್ ಬಲಿಷ್ಠ ಚೆನ್ನೈ ತಂಡವನ್ನು ಮಣಿಸಿತು.

Published On - 5:21 pm, Mon, 15 May 23

Loading...
Unable to load recommendations.
Follow Us