Updated on: Apr 23, 2023 | 10:23 PM
IPL 2023: ಐಪಿಎಲ್ನ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಅರ್ಧಶತಕ ಬಾರಿಸಿ ಮಿಂಚಿದ್ದರು.
ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ರಾಹುಲ್ 61 ಎಸೆತಗಳಲ್ಲಿ 8 ಫೋರ್ನೊಂದಿಗೆ 68 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಕೆಎಲ್ಆರ್ ಟಿ20 ಕ್ರಿಕೆಟ್ನಲ್ಲಿ 7 ಸಾವಿರ ರನ್ ಪೂರೈಸಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
ಅಂದರೆ ಟಿ20 ಕ್ರಿಕೆಟ್ನಲ್ಲಿ ಅತೀ ವೇಗವಾಗಿ 7 ಸಾವಿರ ರನ್ ಪೂರೈಸಿದ್ದ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕೇವಲ 212 ಇನಿಂಗ್ಸ್ಗಳ ಮೂಲಕ ಕಿಂಗ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆ ಮುರಿದು ಕೆಎಲ್ ರಾಹುಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಕೇವಲ 197 ಟಿ20 ಇನಿಂಗ್ಸ್ಗಳ ಮೂಲಕ ಕೆಎಲ್ ರಾಹುಲ್ 7 ಸಾವಿರ ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ವೇಗವಾಗಿ ಏಳು ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ. ಪಾಕ್ ಆಟಗಾರ ಕೇವಲ 187 ಇನಿಂಗ್ಸ್ಗಳ ಮೂಲಕ ಟಿ20 ಕ್ರಿಕೆಟ್ನಲ್ಲಿ 7 ಸಾವಿರ ರನ್ ಕಲೆಹಾಕಿದ್ದಾರೆ.
ಅಂದಹಾಗೆ ಕೆಎಲ್ ರಾಹುಲ್ ಅವರ ಈ ದಾಖಲೆಯ ಇನಿಂಗ್ಸ್ ಹೊರತಾಗಿಯೂ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸೋಲನುಭವಿಸಿರುವುದೇ ಅಚ್ಚರಿ.
ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನೀಡಿದ 136 ರನ್ಗಳ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ 7 ವಿಕೆಟ್ ನಷ್ಟಕ್ಕೆ 128 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಗುಜರಾತ್ ಟೈಟಾನ್ಸ್ ತಂಡ 7 ರನ್ಗಳ ರೋಚಕ ಜಯ ತನ್ನದಾಗಿಸಿಕೊಂಡಿತು.