IPL 2023: ವಿರಾಟ್ ಕೊಹ್ಲಿಯ ದಾಖಲೆ ಮುರಿದ ಕೆಎಲ್ ರಾಹುಲ್

| Updated By: ಝಾಹಿರ್ ಯೂಸುಫ್

Updated on: Apr 23, 2023 | 10:23 PM

IPL 2023 Kannada: ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ. ಪಾಕ್ ಆಟಗಾರ ಕೇವಲ 187 ಇನಿಂಗ್ಸ್​ಗಳ ಮೂಲಕ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಕಲೆಹಾಕಿದ್ದಾರೆ.

1 / 7
IPL 2023: ಐಪಿಎಲ್​ನ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಅರ್ಧಶತಕ ಬಾರಿಸಿ ಮಿಂಚಿದ್ದರು.

2 / 7
ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ರಾಹುಲ್ 61 ಎಸೆತಗಳಲ್ಲಿ 8 ಫೋರ್​ನೊಂದಿಗೆ 68 ರನ್​ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಕೆಎಲ್​ಆರ್​ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಪೂರೈಸಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

3 / 7
ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 7 ಸಾವಿರ ರನ್ ಪೂರೈಸಿದ್ದ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕೇವಲ 212 ಇನಿಂಗ್ಸ್​ಗಳ ಮೂಲಕ ಕಿಂಗ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆ ಮುರಿದು ಕೆಎಲ್ ರಾಹುಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 7
ಕೇವಲ 197 ಟಿ20 ಇನಿಂಗ್ಸ್​ಗಳ ಮೂಲಕ ಕೆಎಲ್ ರಾಹುಲ್ 7 ಸಾವಿರ ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಏಳು ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 7
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ. ಪಾಕ್ ಆಟಗಾರ ಕೇವಲ 187 ಇನಿಂಗ್ಸ್​ಗಳ ಮೂಲಕ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಕಲೆಹಾಕಿದ್ದಾರೆ.

6 / 7
ಅಂದಹಾಗೆ ಕೆಎಲ್ ರಾಹುಲ್ ಅವರ ಈ ದಾಖಲೆಯ ಇನಿಂಗ್ಸ್ ಹೊರತಾಗಿಯೂ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸೋಲನುಭವಿಸಿರುವುದೇ ಅಚ್ಚರಿ.

7 / 7
ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನೀಡಿದ 136 ರನ್​ಗಳ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ 7 ವಿಕೆಟ್ ನಷ್ಟಕ್ಕೆ 128 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಗುಜರಾತ್ ಟೈಟಾನ್ಸ್ ತಂಡ 7 ರನ್​ಗಳ ರೋಚಕ ಜಯ ತನ್ನದಾಗಿಸಿಕೊಂಡಿತು.