Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಐಪಿಎಲ್​ನಿಂದ ಕೆಎಲ್ ರಾಹುಲ್ ಔಟ್..?

IPL 2023 Kannada: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದರು. ಹೀಗಾಗಿ 2ನೇ ಓವರ್​ ಬಳಿಕ ಅವರು ಫೀಲ್ಡಿಂಗ್ ಮಾಡಿರಲಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: May 03, 2023 | 3:02 PM

IPL 2023: RCB ವಿರುದ್ಧದ ಹೀನಾಯ ಸೋಲಿನ ಹತಾಶೆಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ನಾಯಕ ಕೆಎಲ್ ರಾಹುಲ್ ಮುಂಬರುವ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ. ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೆಎಲ್​ಆರ್​ ತೊರೆಯಲು ನಿರ್ಧರಿಸಿದ್ದು, ಮುಂಬೈಗೆ ತೆರಳಲಿದ್ದಾರೆ.

1 / 7
ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದರು. ಹೀಗಾಗಿ 2ನೇ ಓವರ್​ ಬಳಿಕ ಅವರು ಫೀಲ್ಡಿಂಗ್ ಮಾಡಿರಲಿಲ್ಲ. ಅಲ್ಲದೆ 11ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದರೂ ಓಡುವ ಸ್ಥಿತಿಯಲ್ಲಿರಲಿಲ್ಲ. ಇದೀಗ ತೊಡೆಯ ಗಾಯದ ಕಾರಣ ವೈದ್ಯಕೀಯ ಪರಿಶೀಲನೆಗೆ ಮುಂದಾಗಿದ್ದಾರೆ.

2 / 7
ಪ್ರಸ್ತುತ ಮಾಹಿತಿ ಪ್ರಕಾರ, ಗುರುವಾರ ಕೆಎಲ್ ರಾಹುಲ್ ಮುಂಬೈಗೆ ತೆರಳಲಿದ್ದು, ಅಲ್ಲಿ ತೊಡೆಯ ಗಾಯದ ಸ್ಕ್ಯಾನಿಂಗ್​ಗೆ ಒಳಗಾಗಲಿದ್ದಾರೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಕೆಎಲ್​ಆರ್ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.

3 / 7
ಇನ್ನು ಸ್ಕ್ಯಾನಿಂಗ್ ರಿಪೋರ್ಟ್ ಬಳಿಕ ವೈದ್ಯರು ವಿಶ್ರಾಂತಿ ಸೂಚಿಸಿದರೆ, ಕೆಎಲ್ ರಾಹುಲ್ ಐಪಿಎಲ್​ನ ಮುಂದಿನ ಪಂದ್ಯಗಳಿಂದ ಹೊರಗುಳಿಯುವುದು ಬಹುತೇಕ ಖಚಿತ. ಏಕೆಂದರೆ ಐಪಿಎಲ್ ಬಳಿಕ ಅವರು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಕಣಕ್ಕಿಳಿಯಬೇಕಿದ್ದು, ಹೀಗಾಗಿ ಹೆಚ್ಚಿನ ರಿಸ್ಕ್​ ತೆಗೆದುಕೊಳ್ಳುವ ಸಾಧ್ಯತೆಯಿಲ್ಲ.

4 / 7
ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ಮುಂಬರುವ ಪಂದ್ಯಗಳಲ್ಲಿ ಕೃನಾಲ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ.

5 / 7
ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಜಯದೇವ್ ಉನಾದ್ಕಟ್ ಅಭ್ಯಾಸದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೀಗಾಗಿ ಅವರು ಕೂಡ ಮುಂಬರುವ ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

6 / 7
ಒಟ್ಟಿನಲ್ಲಿ ಪ್ಲೇಆಫ್ ಹಂತಕ್ಕೇರಲು ನಿರ್ಣಾಯಕವಾಗಿರುವ ದ್ವಿತಿಯಾರ್ಧದ ವೇಳೆ ಇಬ್ಬರು ಪ್ರಮುಖ ಆಟಗಾರರು ಹೊರಗುಳಿಯುತ್ತಿರುವುದು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಿಗೆ ಹಿನ್ನಡೆಯಾಗಲಿದೆ.

7 / 7
Follow us
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು

IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ

50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು

ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್

4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್

ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ

ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ

ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ

ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ