IPL 2023: ಐಪಿಎಲ್ ಮಧ್ಯದಲ್ಲೇ ಕೆಕೆಆರ್ ತಂಡ ತೊರೆದ ಸ್ಟಾರ್ ವಿದೇಶಿ ಪ್ಲೇಯರ್..!

|

Updated on: Apr 28, 2023 | 6:29 PM

IPL 2023: ಕೆಕೆಆರ್ ತಂಡದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ದಾಸ್ ಬಾಂಗ್ಲಾದೇಶಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

1 / 5
ಈ ಬಾರಿಯ ಐಪಿಎಲ್ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡಕ್ಕೆ ಅಷ್ಟು ಉತ್ತಮವಾಗಿಲ್ಲ. ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ 3ರಲ್ಲಿ ಮಾತ್ರ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇಂತಹ ಕಳಪೆ ಪ್ರದರ್ಶನದ ನಡುವೆಯೇ ಕೆಕೆಆರ್​ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ.

2 / 5
ಕೆಕೆಆರ್ ತಂಡದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ದಾಸ್ ಬಾಂಗ್ಲಾದೇಶಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

3 / 5
ಇದೇ ಮೊದಲ ಬಾರಿಗೆ ಐಪಿಎಲ್ ಆಡುತ್ತಿದ್ದ ಲಿಟ್ಟನ್ ದಾಸ್ ಅವರನ್ನು ಕೋಲ್ಕತ್ತಾ 50 ಲಕ್ಷಕ್ಕೆ ಖರೀದಿಸಿತು.  ಕೇವಲ ಒಂದು ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದ ದಾಸ್ 4 ರನ್ ಮಾತ್ರ ಬಾರಿಸಿದ್ದರು.

4 / 5
ಅಲ್ಲದೆ ಲಿಟನ್ ದಾಸ್​ಗೆ ಮತ್ತೆ ತಂಡದಲ್ಲಿ ಅವಕಾಶ ಸಿಗುವುದು ಕಷ್ಟಕರವಾಗಿತ್ತು. ಏಕೆಂದರೆ ಕೋಲ್ಕತ್ತಾ ತಂಡ ಸುನಿಲ್ ನರೈನ್, ಆಂಡ್ರೆ ರಸೆಲ್, ಜೇಸನ್ ರಾಯ್ ಮತ್ತು ಡೇವಿಡ್ ವಿಸಾ ರೂಪದಲ್ಲಿ ನಾಲ್ಕು ವಿದೇಶಿ ಆಟಗಾರರಿಗೆ ಅವಕಾಶ ನೀಡುತ್ತಿದೆ.

5 / 5
ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನೂ ಅವಕಾಶವಿದೆ.  ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿದ್ದ ಕೋಲ್ಕತ್ತಾಗೆ 6 ಪಂದ್ಯಗಳು ಬಾಕಿಯಿದ್ದು, 5 ಪಂದ್ಯಗಳನ್ನು ಗೆದ್ದರೆ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬಹುದು.  ಆದಾಗ್ಯೂ, ಇದಕ್ಕಾಗಿ ಅವರು ಉತ್ತಮ ಆಟ ಪ್ರದರ್ಶಿಸಬೇಕಾಗುತ್ತದೆ.