IPL 2023: ನಾಯಕನಾಗಿ ಮೊದಲ ಪಂದ್ಯದಲ್ಲೇ ಕಳಪೆ ದಾಖಲೆ ಬರೆದ ಕೃನಾಲ್ ಪಾಂಡ್ಯ..!
IPL 2023: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಲಕ್ನೋ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್ರೌಂಡರ್ ಕೃನಾಲ್ ಪಾಂಡ್ಯ ನಾಯಕತ್ವದ ಮೊದಲ ಪಂದ್ಯದಲ್ಲೇ ಯಾರಿಗೂ ಬೇಡವಾದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ.
1 / 7
ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದರಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಲಕ್ನೋ ತಂಡದ ನಾಯಕತ್ವವಹಿಸಿಕೊಂಡಿದ್ದ ಆಲ್ರೌಂಡರ್ ಕೃನಾಲ್ ಪಾಂಡ್ಯ ನಾಯಕತ್ವದ ಮೊದಲ ಪಂದ್ಯದಲ್ಲೇ ಯಾರಿಗೂ ಬೇಡವಾದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ.
2 / 7
ಚೆನ್ನೈ ವಿರುದ್ಧದ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದ ನಾಯಕ ಕೃನಾಲ್ ಪಾಂಡ್ಯ ಚೆನ್ನೈನ ಮಿಸ್ಟರಿ ಸ್ಪಿನ್ನರ್ ಮಹಿಷ್ ಟೀಕ್ಷಣ ಅವರು ಮೊದಲ ಎಸೆತದಲ್ಲಿಯೇ ಶೂನ್ಯಕ್ಕೆ ಔಟ್ ಆದರು.
3 / 7
ಶೂನ್ಯಕ್ಕೆ ಔಟಾಗುವ ಮೂಲಕ ಐಪಿಎಲ್‌ನಲ್ಲಿ ನಾಯಕತ್ವ ವಹಿಸಿದ ಚೊಚ್ಚಲ ಪಂದ್ಯದಲ್ಲೇ ಗೋಲ್ಡನ್ ಡಕ್‌ಗೆ ಬಲಿಯಾದ ಮೂರನೇ ನಾಯಕ ಎಂಬ ಕುಖ್ಯಾತಿಗೆ ಕೃನಾಲ್ ಕೊರಳೊಡ್ಡಿದರು.
4 / 7
ಕೃನಾಲ್ ಅವರಿಗಿಂತ ಮೊದಲು ಐಪಿಎಲ್ ಮೊದಲ ಸೀಸನ್ನಲ್ಲಿ ಡೆಕ್ಕನ್ ಚಾರ್ಜಸ್ ತಂಡದ ನಾಯಕತ್ವವಹಿಸಿಕೊಂಡಿದ್ದ ವಿವಿಎಸ್ ಲಕ್ಷ್ಮಣ್ ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಮೊದಲ ಎಸೆತದಲ್ಲಿ ಖಾತೆ ತೆರೆಯದೆ ಔಟಾಗಿದ್ದರು.
5 / 7
ಅವರ ನಂತರ ಇದೇ ಸೀಸನ್ನಲ್ಲಿ ಅಂದರೆ 16ನೇ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಏಡೆನ್ ಮಾರ್ಕ್ರಾಮ್ ಕೂಡ ಲಕ್ನೋ ವಿರುದ್ಧದ ಮೊದಲ ಎಸೆತದಲ್ಲಿ ಖಾತೆ ತೆರೆಯದೆ ಔಟಾಗಿದ್ದರು.
6 / 7
ಕೃನಾಲ್ ಈ ಆವೃತ್ತಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ ಕೃನಾಲ್ 122 ರನ್ ಬಾರಿಸಿದ್ದಾರೆ. ಇದುವರೆಗೆ ಅವರ ಬ್ಯಾಟ್‌ನಿಂದ ಒಂದೇ ಒಂದು ಅರ್ಧಶತಕ ಕೂಡ ಬಂದಿಲ್ಲ.
7 / 7
ಇನ್ನು ಬೌಲಿಂಗ್ನಲ್ಲೂ ಮಂಕಾಗಿರುವ ಕೃನಾಲ್ ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಒಂಬತ್ತು ಪಂದ್ಯಗಳನ್ನು ಆಡಿದ್ದು, ಕೇವಲ ಆರು ವಿಕೆಟ್‌ಗಳನ್ನು ತಮ್ಮ ಹೆಸರಿನಲ್ಲಿ ಪಡೆದಿದ್ದಾರೆ. ಆದರೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮಿಂಚಿದ್ದ ಕೃನಾಲ್ ಈ ಪಂದ್ಯದಲ್ಲಿ 18 ರನ್ ನೀಡಿ ಮೂರು ವಿಕೆಟ್ ಪಡೆದರು.