IPL 2023 Playoffs: ಪ್ಲೇಆಫ್​ಗೆ LSG ಲಗ್ಗೆ: ಇನ್ನು RCB ಮತ್ತು MI ನಡುವೆ ಪೈಪೋಟಿ

IPL 2023 Kannada: ನವೀನ್ ಉಲ್ ಹಕ್ ಎಸೆದ 19ನೇ ಓವರ್​ನಲ್ಲಿ 3 ಫೋರ್​ ಹಾಗೂ 1 ಸಿಕ್ಸ್​ನೊಂದಿಗೆ ರಿಂಕು ಸಿಂಗ್ 20 ರನ್ ಚಚ್ಚಿ ಅರ್ಧಶತಕ ಪೂರೈಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: May 20, 2023 | 11:32 PM

IPL 2023: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​ನ 68ನೇ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್​ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

1 / 12
ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡವು ಲಕ್ನೋ ಸೂಪರ್ ಜೈಂಟ್ಸ್​ ಅನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಲ್​​ಎಸ್​ಜಿ ನಿಕೋಲಸ್ ಪೂರನ್ (58) ಅವರ ಅರ್ಧಶತಕದ ನೆರವಿನೊಂದಿಗೆ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿತು.

2 / 12
177 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಕೆಕೆಆರ್ ತಂಡಕ್ಕೆ ಜೇಸನ್ ರಾಯ್ (44) ಉತ್ತಮ ಆರಂಭ ಒದಗಿಸಿದ್ದರು. ಇದರ ನಡುವೆ ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡಿತು. ಇದಾಗ್ಯೂ ಕೊನೆಯ 5 ಓವರ್​ಗಳಲ್ಲಿ ಗೆಲ್ಲಲು ಕೆಕೆಆರ್​ಗೆ 63 ರನ್​ಗಳ ಅವಶ್ಯಕೆಯಿತ್ತು.

3 / 12
ಈ ಹಂತದಲ್ಲಿ ರಿಂಕು ಸಿಂಗ್ ಜೊತೆಗಿದ್ದ  ಆ್ಯಂಡ್ರೆ ರಸೆಲ್ (7) ರವಿ ಬಿಷ್ಣೋಯ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದಾಗ್ಯೂ ರಿಂಕು ಸಿಂಗ್ ಏಕಾಂಗಿ ಹೋರಾಟ ಮುಂದುವರೆಸಿದ್ದರು.

4 / 12
ಅದರಲ್ಲೂ ನವೀನ್ ಉಲ್ ಹಕ್ ಎಸೆದ 19ನೇ ಓವರ್​ನಲ್ಲಿ 3 ಫೋರ್​ ಹಾಗೂ 1 ಸಿಕ್ಸ್​ನೊಂದಿಗೆ ರಿಂಕು ಸಿಂಗ್ 20 ರನ್ ಚಚ್ಚಿ ಅರ್ಧಶತಕ ಪೂರೈಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ 21 ರನ್​ಗಳ ಟಾರ್ಗೆಟ್ ಪಡೆಯಿತು.

5 / 12
ಆದರೆ ಅಂತಿಮ ಓವರ್​ನಲ್ಲಿ ರಿಂಕು ಸಿಂಗ್ (67) 2 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 19 ರನ್ ಬಾರಿಸಲಷ್ಟೇ ಶಕ್ತರಾದರು. ಇದರೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ನಿಂದ ರೋಚಕ ಜಯ ಸಾಧಿಸಿತು.

6 / 12
ಈ ಗೆಲುವಿನೊಂದಿಗೆ ಒಟ್ಟು 17 ಪಾಯಿಂಟ್ಸ್ ಕಲೆಹಾಕಿರುವ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಆಫ್​ಗೆ ಪ್ರವೇಶಿಸಿದೆ. ಇದರೊಂದಿಗೆ ಪ್ಲೇಆಫ್​ ಆಡಳಿರುವ ಅಗ್ರ ಮೂರು ತಂಡಗಳು ಖಚಿತವಾಗಿದೆ.

7 / 12
ಇದಕ್ಕೂ ಮುನ್ನ 13 ಪಂದ್ಯಗಳಲ್ಲಿ 9 ಜಯ ಸಾಧಿಸಿರುವ ಗುಜರಾತ್ ಟೈಟಾನ್ಸ್​ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಪ್ಲೇಆಫ್ ಪ್ರವೇಶಿಸಿತ್ತು. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು 17 ಪಾಯಿಂಟ್ಸ್​ನೊಂದಿಗೆ ಸಿಎಸ್​ಕೆ ತಂಡವು ಪ್ಲೇಆಫ್ ಪ್ರವೇಶಿಸಿದೆ.

8 / 12
ಇದೀಗ 17 ಪಾಯಿಂಟ್ಸ್​ಗಳೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನು ನಾಲ್ಕನೇ ಸ್ಥಾನ ಮಾತ್ರ ಉಳಿದಿದ್ದು, ಈ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​​ಸಿಬಿ ನಡುವೆ ಪೈಪೋಟಿ ಇದೆ.

9 / 12
ಅದರಂತೆ ಭಾನುವಾರ ಮಧ್ಯಾಹ್ನ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಬಹುದು.

10 / 12
ಹಾಗೆಯೇ ಭಾನುವಾರ ರಾತ್ರಿ ನಡೆಯಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಉತ್ತಮ ನೆಟ್​ ರನ್​ ರೇಟ್​ನೊಂದಿಗೆ ನಾಲ್ಕನೇ ಸ್ಥಾನಕ್ಕೇರಬಹುದು. ಈ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶ ಆರ್​ಸಿಬಿಗಿದೆ.

11 / 12
ಅಂದರೆ ನಾಳಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಗೆದ್ದರೆ ಉಭಯ ತಂಡಗಳು ಒಟ್ಟು 16 ಅಂಕಗಳನ್ನು ಗಳಿಸಲಿದೆ. ಇಲ್ಲಿ ಯಾವ ತಂಡವು ಹೆಚ್ಚಿನ ರನ್ ರೇಟ್ ಹೊಂದಿರುತ್ತೆ ಆ ತಂಡಕ್ಕೆ ಪ್ಲೇಆಫ್ ಅವಕಾಶ ಸಿಗಲಿದೆ. ಹೀಗಾಗಿಯೇ ಭಾನುವಾರ ನಡೆಯಲಿರುವ ಲೀಗ್ ಹಂತದ ಕೊನೆಯ 2 ಪಂದ್ಯಗಳು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

12 / 12
Follow us
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?

ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ