AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: LSG vs CSK ಪಂದ್ಯದ ವೇಳಾಪಟ್ಟಿ ಬದಲಾವಣೆ

IPL 2023 Kannada: ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ.

TV9 Web
| Edited By: |

Updated on: Apr 19, 2023 | 5:30 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಭರದಿಂದ ಸಾಗುತ್ತಿದೆ. ಈ ಬಾರಿ ಬಹುತೇಕ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬರುತ್ತಿದೆ. ಈಗಾಗಲೇ ಎಲ್ಲಾ ತಂಡಗಳ 5 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಯಾವುದೇ ತಂಡ ಸೌರ್ವಭೌಮತ್ವ ಸಾಧಿಸಿಲ್ಲ. ಅಂದರೆ ಎಲ್ಲಾ ತಂಡಗಳು ಸೋಲು-ಗೆಲುವುಗಳನ್ನು ಕಾಣುತ್ತಿದೆ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ.

1 / 5
ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್​ ತಂಡ. ಇಲ್ಲಿ 2ನೇ ಹಾಗೂ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮೇ.4 ರಂದು ಮುಖಾಮುಖಿಯಾಗಬೇಕಿತ್ತು.

2 / 5
ಆದರೀಗ ಈ ಪಂದ್ಯವನ್ನು ಮೇ 3 ರಂದು ನಡೆಸಲು ತೀರ್ಮಾನಿಸಲಾಗಿದೆ. ಮೇ. 4 ರಂದು ಲಕ್ನೋ ಮಹಾನಗರದ ಪಾಲಿಕೆ ಚುನಾವಣೆ ನಡೆಯಲಿದ್ದು, ಹೀಗಾಗಿ ಅಂದು ರಾತ್ರಿ ನಡೆಯಬೇಕಿದ್ದ ಪಂದ್ಯವನ್ನು ಮೇ 3 ರಂದು ನಡೆಸಲು ನಿರ್ಧರಿಸಲಾಗಿದೆ. ಅದರಂತೆ  ಮೇ 3ರಂದು ಲಕ್ನೋದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3.30ಕ್ಕೆ ಸಿಎಸ್​ಕೆ-ಎಲ್​ಎಸ್​ಜಿ ಪಂದ್ಯ ನಡೆಯಲಿದೆ.

3 / 5
ಇನ್ನು ಉಭಯ ತಂಡಗಳೂ ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದೆ.

4 / 5
ಮತ್ತೊಂದೆಡೆ ಎಂಎಸ್ ಧೋನಿ ಸಾರಥ್ಯದ ಸಿಎಸ್​ಕೆ ತಂಡ ಕೂಡ 5 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಸೋತು, ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ನೆಟ್​ ರನ್​ ರೇಟ್​ನಲ್ಲಿ ಮುಂಚೂಣಿಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಪಾಯಿಂಟ್ಸ್​ ಟೇಬಲ್​​ನಲ್ಲಿ 2ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಸಿಎಸ್​ಕೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ